ಶಿವಮೊಗ್ಗ ಕಾರಾಗೃಹದಲ್ಲಿ ಜೀವಾವಧಿ ಶಿಕ್ಷೆಗೆ ಒಳಗಾಗಿದ್ದ ಖೈದಿ ಸಾವು..!
ಶಿವಮೊಗ್ಗ: ಕೇಂದ್ರ ಕಾರಾಗೃಹದಲ್ಲಿ ಜೀವಾವಧಿ ಶಿಕ್ಷೆಗೆ ಒಳಗಾಗಿದ್ದ ಕೃಷ್ಣ ಎಂಬ ಕೈದಿ ಮೃತಪಟ್ಟಿದ್ದು ಈತ ನಗರದ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಧುಮೇಹ ಕಾಯಿಲೆಯಿಂದ ಬಳಲುತ್ತಿದ್ದ ಕೃಷ್ಣ ಪ್ರತಿ ಬಾರಿ ಚಿಕಿತ್ಸೆಗೆ ಒಳಪಡುತ್ತಿದ್ದ ಆದರೆ ಇಂದು ಸಾವನ್ನಪ್ಪಿದ್ದಾನೆ . ಹೊಸನಗರ ತಾಲ್ಲೂಕಿನ…
ಶಿವಮೊಗ್ಗ: ಕೇಂದ್ರ ಕಾರಾಗೃಹದಲ್ಲಿ ಜೀವಾವಧಿ ಶಿಕ್ಷೆಗೆ ಒಳಗಾಗಿದ್ದ ಕೃಷ್ಣ ಎಂಬ ಕೈದಿ ಮೃತಪಟ್ಟಿದ್ದು ಈತ ನಗರದ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಧುಮೇಹ ಕಾಯಿಲೆಯಿಂದ ಬಳಲುತ್ತಿದ್ದ ಕೃಷ್ಣ ಪ್ರತಿ ಬಾರಿ ಚಿಕಿತ್ಸೆಗೆ ಒಳಪಡುತ್ತಿದ್ದ ಆದರೆ ಇಂದು ಸಾವನ್ನಪ್ಪಿದ್ದಾನೆ .
ಹೊಸನಗರ ತಾಲ್ಲೂಕಿನ ಗರ್ತಿಕೆರೆ, ಅಮೃತ ಗ್ರಾಮದ ವಾಸಿಯಾದ ಸುಮಾರು 44 ವರ್ಷದ ಕೃಷ್ಣ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿದ್ದ ಕಳೆದ ಮೂರೂವರೆ ವರ್ಷಗಳಿಂದ ಜೈಲಿನಲ್ಲಿದ್ದ ಈತನಿಗೆ ಏಪ್ರಿಲ್ ತಿಂಗಳಲ್ಲಿ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿತ್ತು .
ಡಿಸೆಂಬರ್ 5ರಂದು ಸಂಜೆ ಕೃಷ್ಣನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಕೃಷ್ಣ ಇಂದು ಬೆಳಗಿನ ಜಾವ 2 ಗಂಟೆಗೆ ಮೃತಪಟ್ಟಿದ್ದಾನೆ.