ಕಳೆದ ನಾಲ್ಕು ವರ್ಷಗಳಿಂದ ಚುನಾವಣೆಗಳು ನಡೆಯದೆ ಜನಪ್ರತಿನಿಧಿಗಳಿಲ್ಲದೆ ಸ್ಥಳೀಯ ಸಂಸ್ಥೆಗಳು ಅಧಿಕಾರಿಗಳಿಂದಲೇ ಆಡಳಿತ ನಡೆಸಲ್ಪಟ್ಟಿದ್ದು ಇದೀಗ ಸಚಿವ ಸಂಪುಟದಲ್ಲಿ ಸರ್ಕಾರ ಮಹತ್ವದ ತೀರ್ಮಾನ ತೆಗೆದುಕೊಂಡಿದ್ದು ಇಷ್ಟು ದಿನ ಖಾಲಿ ಇದ್ದ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಲು ತೀರ್ಮಾನಿಸಿದೆ.
ಗ್ರಾಮ ಪಂಚಾಯತ್ ಪಂಚಾಯ್ತಿ, ತಾಲೂಕು ಪಂಚಾಯತ್ ಮತ್ತು ಜಿಲ್ಲಾ ಪಂಚಾಯತ್ ಹಾಗೂ ಇತರೆ ಪುರಸಭೆ ಹಾಗೂ ನಗರಸಭೆ ಮಹಾನಗರ ಪಾಲಿಕೆ ಸೇರಿದಂತೆ 6500ಕ್ಕೂ ಹೆಚ್ಚು ನಗರ ಮತ್ತು ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು 2026ರ ಏಪ್ರಿಲ್‌ನಲ್ಲಿ ನಡೆಸಲು ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಳ್ಳಲು ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ ತೆಗೆದುಕೊಂಡಿದ್ದು.
ನ್ಯಾಯಾಲಯದ ಆದೇಶದ ಹಿನ್ನೆಲೆ ಮಹತ್ವದ ತೀರ್ಮಾನ :
ಕಳೆದ ನಾಲ್ಕು ವರ್ಷಗಳಿಂದ ಜಿಲ್ಲಾ ಪಂಚಾಯತ್ ತಾಲೂಕು ಪಂಚಾಯಿತಿಗಳಿಗೆ ಚುನಾವಣೆಗಳು ನಡೆದಿರಲಿಲ್ಲ ಹಾಗೆ ಗ್ರಾಮ ಪಂಚಾಯಿತಿಗಳ ಅವಧಿ ಕೂಡ ಮುಕ್ತಾಯವಾಗುತ್ತಾ ಬರುತ್ತಿದ್ದು ತಾಲೂಕು ಪಂಚಾಯಿತಿ ಜಿಲ್ಲಾ ಪಂಚಾಯತ್ ಚುನಾವಣೆ ವಿಳಂಬದ ಪ್ರಕರಣ ನ್ಯಾಯಾಲಯದಲ್ಲಿದ್ದು ಶೀಘ್ರವಾಗಿ ಚುನಾವಣೆ ನಡೆಸುವಂತೆ ನ್ಯಾಯಾಲಯ ತಿಳಿಸಿತ್ತು.
6,500 ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ:
6,500ಕ್ಕೂ ಹೆಚ್ಚು ನಗರ ಮತ್ತು ಗ್ರಾಮೀಣ ಸ್ಥಳೀಯ ಸಂಸ್ಥೆಗಳು ಚುನಾವಣೆಗಾಗಿ ಕಾಯುತ್ತಿದ್ದು. ಈ ಬಗ್ಗೆ ನ್ಯಾಯಾಲಯದಲ್ಲಿ ಪ್ರಕರಣಗಳು ದಾಖಲಾಗಿದೆ,
ವಿರೋಧ ಪಕ್ಷಗಳು ಮತ್ತು ರಾಜ್ಯ ಚುನಾವಣಾ ಆಯೋಗ (ಎಸ್‌ಇಸಿ) ಕೂಡ ಸರ್ಕಾರದ ವಿರುದ್ಧ ಈ ವಿಷಯವಾಗಿ ಅಸಮಾಧಾನ ವ್ಯಕ್ತಪಡಿಸಿವೆ.
ಸ್ಥಳೀಯ ಸಂಸ್ಥೆಗಳ ಪೈಕಿ 195 ನಗರ ಸ್ಥಳೀಯ ಸಂಸ್ಥೆ, ಜತೆಗೆ 5,952 ಗ್ರಾಮ ಪಂಚಾಯಿತಿಗಳ ಅವಧಿ ಕೂಡ ಮುಗಿಯಲಿದೆ. ಇದರ ಜೊತೆಗೆ, 31 ಜಿಲ್ಲಾ ಪಂಚಾಯಿತಿ, 239 ತಾಲೂಕು ಪಂಚಾಯಿತಿ ಮತ್ತು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಡಿಯಲ್ಲಿ ಐದು ಹೊಸ ನಗರ ನಿಗಮಗಳ ಚುನಾವಣೆಗಳು ಬಾಕಿ ಇವೆ.
ಗ್ರೇಟರ್ ಬೆಂಗಳೂರಿಗೆ ಚುನಾವಣೆ ಇಲ್ಲ :
ಈ ಪೈಕಿ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಡಿಯಲ್ಲಿ ಬರುವ ಐದು ಹೊಸ ನಗರ ಪಾಲಿಕೆಗಳನ್ನು ಹೊರತುಪಡಿಸಿ ಚುನಾವಣೆಗೂ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ..