Home ಶಿವಮೊಗ್ಗಮಹಿಳಾ ಉದ್ಯಮಿಗಳಿಗೆ ಹೆಚ್ಚಿನ ಪ್ರೋತ್ಸಾಹ ಅವಶ್ಯಕ..!

ಮಹಿಳಾ ಉದ್ಯಮಿಗಳಿಗೆ ಹೆಚ್ಚಿನ ಪ್ರೋತ್ಸಾಹ ಅವಶ್ಯಕ..!

by EDITOR NEWS WARRIORS
0 comments
ಶಿವಮೊಗ್ಗ: ಮಹಿಳೆಯರು ಆರ್ಥಿಕವಾಗಿ ಸದೃಢರಾಗಿ ಆತ್ಮವಿಶ್ವಾಸದಿಂದ ಜೀವನದಲ್ಲಿ ಮುನ್ನಡೆಯಬೇಕು. ಉದ್ಯಮ ಕ್ಷೇತ್ರದಲ್ಲಿ ಮಹಿಳೆಯರಿಗೆ ಹೆಚ್ಚಿನ ಪ್ರೋತ್ಸಾಹ ನೀಡುವುದು ಅವಶ್ಯಕ ಎಂದು ಆಭರಣ ಜ್ಯೂವೆಲ್ಲರಿ ಶಿವಮೊಗ್ಗ ಶಾಖೆ ವ್ಯವಸ್ಥಾಪಕ ಗಣಪತಿ ಶೆಣೈ ಹೇಳಿದರು.
ನಗರದ ಪೆಸಿಟ್ ಕಾಲೇಜಿನ ಪ್ರೇರಣ ಸಭಾಂಗಣದಲ್ಲಿ ಎರಡು ದಿನ ಆಯೋಜಿಸಿರುವ ಇನ್ನರ್ ವ್ಹೀಲ್ ಜಿಲ್ಲಾ ಸಮಾವೇಶದಲ್ಲಿ ವ್ಯಾಪಾರ ಮಳಿಗೆ ಹಾಗೂ ಪ್ರದರ್ಶನ ಮಳಿಗೆಗಳ ಉದ್ಘಾಟನೆ ನೆರವೇರಿಸಿ ಮಾತನಾಡಿ, ಮಹಿಳೆಯರು ವ್ಯವಹಾರದಲ್ಲಿ ಅಭಿವೃದ್ಧಿ ಹೊಂದಲು ಎಲ್ಲರ ಸಹಕಾರ ಅಗತ್ಯ ಎಂದು ತಿಳಿಸಿದರು.
ಇನ್ನರ್‌ವ್ಹೀಲ್ ಜಿಲ್ಲಾ ಚೇರ್ಮನ್ ಶಬರಿ ಕಡಿದಾಳ್ ಮಾತನಾಡಿ, ಮಹಿಳೆಯರು ಅಡುಗೆ ಮನೆಗೆ ಸೀಮಿತವಾಗದೆ ಸ್ವಾವಲಂಬಿಗಳಾಗಿ ಬದುಕು ಕಟ್ಟಿಕೊಳ್ಳಬೇಕು. ಸಂಘ ಸಂಸ್ಥೆಗಳಲ್ಲಿ ಪಾಲ್ಗೊಳ್ಳುವುದರ ಜತೆಗೆ ಆರ್ಥಿಕವಾಗಿ ಸಬಲರಾಗಬೇಕು. ಪರಸ್ಪರ ಒಡನಾಟ ಹೆಚ್ಚುತ್ತದೆ. ಅವರ ಪ್ರತಿಭೆ ಅನಾವರಣಗೊಳ್ಳುತ್ತದೆ ಎಂದು ಹೇಳಿದರು.
ಎಂಟು ಜಿಲ್ಲೆಗಳಿಂದ ಮಹಿಳಾ ಉದ್ಯಮಿಗಳು ಆಗಮಿಸಿದ್ದು, ಅವರ ವ್ಯಾಪಾರ ವಹಿವಾಟು ಅತ್ಯುತ್ತಮವಾಗಿ ನಡೆಯುವುದರ ಮುಖಾಂತರ ಅವರಿಗೆ ಪ್ರೋತ್ಸಾಹಿಸಬೇಕು. ನಗರದ ಉದ್ಯಮಿಗಳ ಸಹಕಾರದಿಂದ ಜಿಲ್ಲಾ ಸಮಾವೇಶ ಯಶಸ್ವಿಯಾಗಲಿದೆ ಎಂದು ತಿಳಿಸಿದರು.
ಡಾ. ಕಡಿದಾಳ್ ಗೋಪಾಲ್ ಮಾತನಾಡಿ, ಮಹಿಳೆಯರು ವಿವಿಧ ಕ್ಷೇತ್ರಗಳಲ್ಲಿ ಸಾಕಷ್ಟು ಸಾಧನೆ ಮಾಡಿದ್ದು, ಸಮಾವೇಶದಲ್ಲಿ 700ಕ್ಕೂ ಹೆಚ್ಚು ಪ್ರತಿನಿಧಿಗಳು ಭಾಗವಹಿಸುವ ನಿರೀಕ್ಷೆ ಇದೆ. ಚಲನಚಿತ್ರ ನಟಿ ಪೂಜಾ ಗಾಂಧಿ ಸಮಾವೇಶದಲ್ಲಿ ಪಾಲ್ಗೊಳ್ಳುವರು ಎಂದರು.

ರೋಟರಿ ಮಾಜಿ ಸಹಾಯಕ ಗವರ್ನರ್ ಜಿ.ವಿಜಯಕುಮಾರ್, ಅನೂಪ್, ಅಂಜು ಆದಿಮೂರ್ತಿ, ಬಿಂದು ವಿಜಯ ಕುಮಾರ್, ಕಾರ್ಯದರ್ಶಿ ವೀಣಾ ಹರ್ಷ, ಆಶಾ ಶ್ರೀಕಾಂತ್, ಜಯಂತಿ ವಾಲಿ, ಮಧುರ ಮಹೇಶ್, ಲತಾ ಸೋಮಣ್ಣ, ಶ್ವೇತಾ ಅಶಿತ್, ಮಾಜಿ ಜಿಲ್ಲಾ ಚೇರ್ಮನ್ ವಾರಿಜಾ ಜಗದೀಶ್, ಭಾರತಿ ಚಂದ್ರಶೇಖರ್, ಜ್ಯೋತಿ ಸುಬ್ಬೇಗೌಡ, ಆರ್ ಮನೋಹರ್, ಕಡಿದಾಳ್ ಪ್ರಕಾಶ್ ಹಾಗೂ ಇನ್ನರ್‌ವ್ಹೀಲ್ ಸದಸ್ಯರು ಉಪಸ್ಥಿತರಿದ್ದರು.

Related Articles

Latest news
Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ...?! ಡಾ. ಮೈತ್ರಿ... Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..!