ಶಿವಮೊಗ್ಗದ ಹಿರಿಯ ಪತ್ರಕರ್ತ ಭರತ್ ರಾಜ್ ಸಿಂಗ್ ( ಸಿಂಗಣ್ಣ) ನವರು ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿಗೆ ಆಯ್ಕೆ..!

by EDITOR NEWS WARRIORS
0 comments
ಶಿವಮೊಗ್ಗದ ಹಿರಿಯ ಪತ್ರಕರ್ತ, ಶಿವಮೊಗ್ಗ ಟೆಲೆಕ್ಸ್ ಕನ್ನಡ ದಿನಪತ್ರಿಕೆ ಉಪಸಂಪಾದಕರಾದ ಆರ್. ಪಿ ಭರತ್ ರಾಜ್ ಸಿಂಗ್  ೨೦೨೫ ನೇ ಸಾಲಿನ ರಾಜ್ಯ ಸರ್ಕಾರದ ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ನಿವೃತ್ತ ಪ್ರಾಂಶುಪಾಲರಾದ  ಪುಟ್ಟುಸಿಂಗ್ ಅವರ ಪುತ್ರರಾದ ಬಿ.ಎ ಪದವೀಧರ ಆರ್. ಪಿ ಭರತ್‌ರಾಜ್‌ಸಿಂಗ್  ಅವರು ಸಾಮಾಜಿಕ ಬದಲಾವಣೆಯ ಚಳವಳಿಯ ಭಾಗವಾಗಿ  ೧೯೮೯ರಲ್ಲಿ  ’ಶಿವಮೊಗ್ಗ ಎಕ್ಸ್ ಪ್ರೆಸ್’ ಕನ್ನಡ ದಿನಪತ್ರಿಕೆಯನ್ನು ಆರಂಭಿಸುವ ಮೂಲಕ ಪತ್ರಿಕೋದ್ಯಮಕ್ಕೆ ಕಾಲಿಟ್ಟರು. ಆರ್ಥಿಕ ಮುಗ್ಗಟ್ಟಿನಿಂದ ಪತ್ರಿಕೆ ಮುನ್ನಡೆಸಲಾಗದೆ ೧೯೯೧ ರಿಂದ  ಸ್ವಾತಂತ್ರ್ಯ ಹೋರಾಟಗಾರರು, ಜನಪರ ಚಳವಳಿಗಾರರು ಆದ ಶ್ರೀನಿವಾಸ್ ಅಯ್ಯಂಗಾರ್ , ಸಿ, ಎಸ್ ಚಂದ್ರಭೂಪಾಲ್ ಅವರ ನೇತೃತ್ವದಲ್ಲಿ ನಡೆಯುತ್ತಿದ್ದ ’ಸಹ್ಯಾದ್ರಿ’ ದಿನಪತ್ರಿಕೆಯ ವರದಿಗಾರರಾಗಿ ಮತ್ತು ಅನೇಕ ರಾಜ್ಯಮಟ್ಟದ ದಿನಪತ್ರಿಕೆಗಳಿಗೆ ವರದಿಗಳನ್ನು ಬರೆಯುತಿದ್ದರು.
೧೯೯೭ ರಿಂದ ಶಿವಮೊಗ್ಗ ಟೆಲೆಕ್ಸ್ ಕನ್ನಡ ದಿನಪತ್ರಿಕೆಯ ಉಪಸಂಪಾದಕರಾಗಿ ಸೇವೆ ಸಲ್ಲಿಸುತ್ತಿರುವ ಆರ್. ಪಿ ಭರತ್ ರಾಜ್ ಸಿಂಗ್  ಪ್ರಾಮಾಣಿಕ, ವೃತ್ತಿಪರ ಪತ್ರಕರ್ತರಾಗಿ  ಸೇವೆ ಸಲ್ಲಿಸುತ್ತಿರುವುದು  ಜಿಲ್ಲೆಯ ಪತ್ರಿಕೋದ್ಯಮದ ಹೆಗ್ಗಳಿಕೆಯಾಗಿದೆ.
ಆರ್. ಪಿ ಭರತ್ ರಾಜ್ ಸಿಂಗ್ ಅವರ ಮೂರುವರೆ ದಶಕಗಳಿಗೂ ಹೆಚ್ಚಿನ ಕಾಲ ಪತ್ರಕರ್ತರಾಗಿ ವೃತ್ತಿಪರತೆ, ಬದ್ದತೆಯಿಂದ ಸಲ್ಲಿಸಿದ ಸೇವೆಯನ್ನು ಗುರುತಿಸಿ ರಾಜ್ಯ ಸರ್ಕಾರದ ಕರ್ನಾಟಕ ಮಾಧ್ಯಮ ಅಕಾಡೆಮಿ ೨೦೨೫ ನೇ ಸಾಲಿನ ವಾರ್ಷಿಕ ಪ್ರಶಸ್ತಿ ಆಯ್ಕೆ ಮಾಡಿದೆ. ಪ್ರಶಸ್ತಿಯು ೫೦ ಸಾವಿರ ರೂ. ನಗದು, ಪ್ರಶಸ್ತಿ ಫಲಕ ಹೊಂದಿರುತ್ತದೆ.ಶಿವಮೊಗ್ಗದ ಹಿರಿಯ ಪತ್ರಕರ್ತ, ಶಿವಮೊಗ್ಗ ಟೆಲೆಕ್ಸ್ ಕನ್ನಡ ದಿನಪತ್ರಿಕೆ ಉಪಸಂಪಾದಕರಾದ ಆರ್. ಪಿ ಭರತ್ ರಾಜ್ ಸಿಂಗ್ ೨೦೨೫ ನೇ ಸಾಲಿನ ರಾಜ್ಯ ಸರ್ಕಾರದ ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ನಿವೃತ್ತ ಪ್ರಾಂಶುಪಾಲರಾದ ಪುಟ್ಟುಸಿಂಗ್ ಅವರ ಪುತ್ರರಾದ ಬಿ.ಎ ಪದವೀಧರ ಆರ್. ಪಿ ಭರತ್‌ರಾಜ್‌ಸಿಂಗ್ ಅವರು ಸಾಮಾಜಿಕ ಬದಲಾವಣೆಯ ಚಳವಳಿಯ ಭಾಗವಾಗಿ ೧೯೮೯ರಲ್ಲಿ ’ಶಿವಮೊಗ್ಗ ಎಕ್ಸ್ ಪ್ರೆಸ್’ ಕನ್ನಡ ದಿನಪತ್ರಿಕೆಯನ್ನು ಆರಂಭಿಸುವ ಮೂಲಕ ಪತ್ರಿಕೋದ್ಯಮಕ್ಕೆ ಕಾಲಿಟ್ಟರು. ಆರ್ಥಿಕ ಮುಗ್ಗಟ್ಟಿನಿಂದ ಪತ್ರಿಕೆ ಮುನ್ನಡೆಸಲಾಗದೆ ೧೯೯೧ ರಿಂದ ಸ್ವಾತಂತ್ರ್ಯ ಹೋರಾಟಗಾರರು, ಜನಪರ ಚಳವಳಿಗಾರರು ಆದ ಶ್ರೀನಿವಾಸ್ ಅಯ್ಯಂಗಾರ್ , ಸಿ, ಎಸ್ ಚಂದ್ರಭೂಪಾಲ್ ಅವರ ನೇತೃತ್ವದಲ್ಲಿ ನಡೆಯುತ್ತಿದ್ದ ’ಸಹ್ಯಾದ್ರಿ’ ದಿನಪತ್ರಿಕೆಯ ವರದಿಗಾರರಾಗಿ ಮತ್ತು ಅನೇಕ ರಾಜ್ಯಮಟ್ಟದ ದಿನಪತ್ರಿಕೆಗಳಿಗೆ ವರದಿಗಳನ್ನು ಬರೆಯುತಿದ್ದರು.
೧೯೯೭ ರಿಂದ ಶಿವಮೊಗ್ಗ ಟೆಲೆಕ್ಸ್ ಕನ್ನಡ ದಿನಪತ್ರಿಕೆಯ ಉಪಸಂಪಾದಕರಾಗಿ ಸೇವೆ ಸಲ್ಲಿಸುತ್ತಿರುವ ಆರ್. ಪಿ ಭರತ್ ರಾಜ್ ಸಿಂಗ್ ಪ್ರಾಮಾಣಿಕ, ವೃತ್ತಿಪರ ಪತ್ರಕರ್ತರಾಗಿ ಸೇವೆ ಸಲ್ಲಿಸುತ್ತಿರುವುದು ಜಿಲ್ಲೆಯ ಪತ್ರಿಕೋದ್ಯಮದ ಹೆಗ್ಗಳಿಕೆಯಾಗಿದೆ.
ಆರ್. ಪಿ ಭರತ್ ರಾಜ್ ಸಿಂಗ್ ಅವರ ಮೂರುವರೆ ದಶಕಗಳಿಗೂ ಹೆಚ್ಚಿನ ಕಾಲ ಪತ್ರಕರ್ತರಾಗಿ ವೃತ್ತಿಪರತೆ, ಬದ್ದತೆಯಿಂದ ಸಲ್ಲಿಸಿದ ಸೇವೆಯನ್ನು ಗುರುತಿಸಿ ರಾಜ್ಯ ಸರ್ಕಾರದ ಕರ್ನಾಟಕ ಮಾಧ್ಯಮ ಅಕಾಡೆಮಿ ೨೦೨೫ ನೇ ಸಾಲಿನ ವಾರ್ಷಿಕ ಪ್ರಶಸ್ತಿ ಆಯ್ಕೆ ಮಾಡಿದೆ. ಪ್ರಶಸ್ತಿಯು ೫೦ ಸಾವಿರ ರೂ. ನಗದು, ಪ್ರಶಸ್ತಿ ಫಲಕ ಹೊಂದಿರುತ್ತದೆ.
ಕರ್ನಾಟಕ ಮಾಧ್ಯಮ ಪ್ರಶಸ್ತಿ ಅಕಾಡೆಮಿಗೆ ಆಯ್ಕೆಯಾದ ನಮ್ಮೆಲ್ಲರ ಪ್ರೀತಿಯ ಸಿಂಗಣ್ಣನಿಗೆ  ಪತ್ರಿಕೆ ಅಭಿನಂದನೆಯನ್ನು ಸಲ್ಲಿಸುತ್ತದೆ..

Related Articles

Latest news
ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್...! ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ...?! ಡಾ. ಮೈತ್ರಿ... Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ...