Home ಕಾಂಗ್ರೆಸ್ಸಿಎಂ ಸಿದ್ದರಾಮಯ್ಯ ತವರು ಕ್ಷೇತ್ರದಲ್ಲಿ ಮಹಿಳಾ ಅಧಿಕಾರಿಗೆ ಕೊಲೆ ಬೆದರಿಕೆ..! ವಿಡಿಯೋ ವೈರಲ್..!

ಸಿಎಂ ಸಿದ್ದರಾಮಯ್ಯ ತವರು ಕ್ಷೇತ್ರದಲ್ಲಿ ಮಹಿಳಾ ಅಧಿಕಾರಿಗೆ ಕೊಲೆ ಬೆದರಿಕೆ..! ವಿಡಿಯೋ ವೈರಲ್..!

by EDITOR NEWS WARRIORS
0 comments
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ  ತವರು ಕ್ಷೇತ್ರವಾದ  ವರುಣಾದಲ್ಲಿ ಮಹಿಳಾ ಅಧಿಕಾರಿಗೆ  ತಲೆ ತೆಗಿತೇನೆ ಎಂದು ಕೊಲೆ ಬೆದರಿಕೆ ಹಾಕಿರುವ  ವಿಡಿಯೋ ಈಗ ಎಲ್ಲೆಡೆ ವೈರಲ್ ಆಗಿದ್ದು  ಎಪ್  ಐ ಆರ್ ದಾಖಲಾಗಿದೆ.

 

ಏನಿದು ಪ್ರಕರಣ :
ಮೈಸೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಗೆ ‘ನಿಮ್ಹಾನ್ಸ್’  ರೀತಿಯ ಸಂಸ್ಥೆ ಸ್ಥಾಪಿಸಲು ವರುಣಾ ಹೋಬಳಿಯ ಗುಡಮಾದನಹಳ್ಳಿ ಗ್ರಾಮದ ಸರ್ವೆ ನಂ. 8, 60 ಮತ್ತು 68 ರಲ್ಲಿ ಒಟ್ಟು 20 ಎಕರೆ ಜಮೀನನ್ನು ಜಿಲ್ಲಾಧಿಕಾರಿಗಳ ಆದೇಶದಂತೆ ಹಸ್ತಾಂತರಿಸಬೇಕಿತ್ತು  ಇದರ ಸಲುವಾಗಿ  ಡಿಸೆಂಬರ್ 31, 2025 ರಂದು ಬೆಳಿಗ್ಗೆ 11:10ಕ್ಕೆ ಗ್ರಾಮ ಆಡಳಿತಾಧಿಕಾರಿ ಭವ್ಯ .ಜಿ ಮತ್ತು ಗ್ರಾಮ ಸಹಾಯಕ ನವೀನ್ ಕುಮಾರ್ ಸ್ಥಳಕ್ಕೆ ಭೇಟಿ ನೀಡಿದಾಗ ಈ ಘಟನೆ ಸಂಭವಿಸಿದೆ.
ಎಫ್ ಐ ಆರ್ ನಲ್ಲಿ ಏನಿದೆ..?!

Oplus_16908288

ಜಮೀನು ಪರಿಶೀಲನೆ ವೇಳೆ ಏಕಾಏಕಿ ಮಹಿಳಾ ಅಧಿಕಾರಿಯ ಮೇಲೆ ನುಗ್ಗಿ ಬಂದ  ಗುಡಮಾದನಹಳ್ಳಿ ನಿವಾಸಿ ಜಿ.ಎಂ ಪುಟ್ಟಸ್ವಾಮಿ (ಬೆಣ್ಣೆ ಪುಟ್ಟಸ್ವಾಮಿ), ಭವ್ಯ ಅವರಿಗೆ ಏಕವಚನದಲ್ಲಿ ಅವಾಚ್ಯ ಶಬ್ದಗಳಿಂದ ನಿಂದಿಸಿ ನಿನ್ನ ತಲೆಗೆ ತೆಗೆಯುತ್ತೇನೆ ‌ ಹಾಗೆ ತಹಸಿಲ್ದಾರ್ ತಲೆ ಕೂಡ ತೆಗೆಯುತ್ತೇನೆ ಎಂದು ನಿಂದಿಸಿದ್ದಾನೆ. ಯಾರನ್ನು ಕೇಳಿ ಜಮೀನು ಮಂಜೂರು ಮಾಡಿದ್ದೀರಿ? ಮೊದಲು ನಿಮ್ಮ ತಹಶೀಲ್ದಾರ್ ತಲೆಯನ್ನು ತೆಗೆಯಬೇಕು ಹಾಗೂ ನಿನ್ನನ್ನೂ ಇಲ್ಲೇ ಕೊಂದು ಹಾಕುತ್ತೇನೆ’ ಅಧಿಕಾರಿ ಭವ್ಯ ಅವರ ಮೇಲೆ ಹಲ್ಲೆ ಮಾಡಲು ಮುಂದಾದಾಗ, ಅದನ್ನು ತಡೆಯಲು ಬಂದ ಗ್ರಾಮ ಸಹಾಯಕ ನವೀನ್ ಕುಮಾರ್ ಅವರನ್ನು ಜೋರಾಗಿ ತಳ್ಳಲಾಗಿದೆ. ಜೊತೆಗೆ, ಸಾಕ್ಷ್ಯ ನಾಶಪಡಿಸುವ ಉದ್ದೇಶದಿಂದ, ನವೀನ್ ಅವರು ತಮ್ಮ ಮೊಬೈಲ್‌ನಲ್ಲಿ ಚಿತ್ರೀಕರಿಸುತ್ತಿದ್ದ ವಿಡಿಯೋವನ್ನು ಬಲವಂತವಾಗಿ ಕಸಿದುಕೊಂಡು, ಅದನ್ನು ರಘು ಎಂಬುವವರ ಕೈಗೆ ನೀಡಿ ಡಿಲೀಟ್ ಮಾಡಿಸಿದ್ದಾರೆ ಎಂದು ಎಪ್ ಐ‌ ಆರ್ ನಲ್ಲಿ  ದಾಖಲಿಸಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ವಿಡಿಯೋ ಕೂಡ ವೈರಲ್ ಆಗಿದೆ.

Related Articles

Latest news
ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್...! ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ...?! ಡಾ. ಮೈತ್ರಿ... Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ...