Home ರಾಜ್ಯಪಯಣ ನಿಲ್ಲಿಸಿದ ಪುನೀತ್ ಬಾರದ ಲೋಕಕ್ಕೆ ಬಂಗಾರದ ಮನುಷ್ಯನ ಮಗ…

ಪಯಣ ನಿಲ್ಲಿಸಿದ ಪುನೀತ್ ಬಾರದ ಲೋಕಕ್ಕೆ ಬಂಗಾರದ ಮನುಷ್ಯನ ಮಗ…

by EDITOR NEWS WARRIORS
0 comments

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಜೀವನ ಯಾತ್ರೆ:

ಪುನೀತ್ ರಾಜ್‍ಕುಮಾರ್ ಅವರು, 17 ಮಾರ್ಚ್ 1975ರಂದು ಜನಿಸಿದ್ದರು. ನಟ, ಹಿನ್ನೆಲೆ ಗಾಯಕ ಮತ್ತು ದೂರದರ್ಶನ ನಿರೂಪಕರಾಗಿ ತೊಡಗಿಸಿಕೊಂಡಿದ್ದರು. ಬಾಲ್ಯದಿಂದಲೂ ಕನ್ನಡ ಚಿತ್ರರಂಗದಲ್ಲಿ ತಂದೆ ದಿವಂಗತ ಡಾ.ರಾಜ್ ಕುಮಾರ್ ಜೊತೆಗೆ ನಟರಾಗಿ ತೊಡಗಿಸಿಕೊಂಡಿದ್ದ ಅವರು, ಕನ್ನಡ ಸಿನಿಮಾ ರಂಗದಲ್ಲಿ ಕೆಲಸ ಮಾಡುತ್ತಾರೆ.

ಪುನೀತ್ 26 ಚಲನಚಿತ್ರಗಳಲ್ಲಿ ನಾಯಕ ನಟನಾಗಿ ನಟನೆ ಮಾಡಿದ್ದಾರೆ. ಬಾಲ್ಯದಲ್ಲಿ ತನ್ನ ತಂದೆ ರಾಜಕುಮಾರ್ ಅಭಿನಯದ ಚಿತ್ರಗಳಲ್ಲಿ ಬಾಲ್ಯ ನಟನಾಗಿ ವಸಂತ ಗೀತ (1980), ಭಾಗ್ಯದಾತ (1981), ಚಲಿಸುವ ಮೋಡಗಳು (1982), ಎರಡು ನಕ್ಷತ್ರಗಳು (1983) ಮತ್ತು ಬೆಟ್ಟದ ಹೂವು (1985) ಅವರು ನಟಿಸಿದ ಚಿತ್ರಗಳ ನಟನೆಗೆ ಮೆಚ್ಚುಗೆ ಪಡೆದರು.

ಅವರ ಬೆಟ್ಟದ ಹೂವು ಚಿತ್ರದ ರಾಮು ಪಾತ್ರದ ಬಾಲನಟನೆಗೆ ರಾಷ್ಟ್ರ ಚಲನಚಿತ್ರ ಪ್ರಶಸ್ತಿಗೆ ಪಾತ್ರರಾದರು. ಪುನೀತ್ ಮೊದಲ ಪ್ರಮುಖ ಪಾತ್ರದಲ್ಲಿ 2002′ ಅಪ್ಪು ಚಿತ್ರದಲ್ಲಿ ಅಭಿನಯಿಸಿದರು. ಅವರ ಅಭಿ (2003), ಆಕಾಶ್ (2005), ಅರಸು (2007), ಮಿಲನ (2007), ಜಾಕೀ (2010), ಹುಡುಗರು (2011), ಅಣ್ಣಾ ಬಾಂಡ್ (2012) ಮತ್ತು ಪವರ್ (2014) ಸೇರಿದಂತೆ ಇತರ ಯಶಸ್ವಿ ಚಲನಚಿತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಅವರು ಪ್ರಸಿದ್ಧ ಟಿವಿ ಪ್ರದರ್ಶನ ಕನ್ನಡದ ಕೋಟ್ಯಧಿಪತಿ, ಹೂ ವಾಂಟ್ಸ್ ಟು ಬಿ ಮಿಲಿಯನೇರ್ ಎಂಬ ಕನ್ನಡ ಆವೃತ್ತಿಯ ಟೆಲಿವಿಷನ್ ಶೋ ನಿರೂಪಣೆ ಮಾಡಿದ್ದಾರೆ.

ವೈಯಕ್ತಿಕ ಜೀವನ:

ಪುನೀತ್, ರಾಜಕುಮಾರ್ ಮತ್ತು ಪಾರ್ವತಮ್ಮ ರಾಜಕುಮಾರ್ ಮಗನಾಗಿ 17 ಮಾರ್ಚ್ 1975ರಂದು ಜನಿಸಿದರು. ಇವರು ರಾಜಕುಮಾರ್ ದಂಪತಿಯ ಕಿರಿಯ ಮಗ. ನಟರಾದ ಶಿವರಾಜಕುಮಾರ್ ಮತ್ತು ರಾಘವೇಂದ್ರ ರಾಜಕುಮಾರ್ ಸಹೋದರರು. ಪುನೀತ್ ಆರು ವರ್ಷದವರಿದ್ದಾಗ, ಅವರ ಕುಟುಂಬ ಬೆಂಗಳೂರಿಗೆ ತೆರಳಿತು. ಅವರು ಹತ್ತು ವರ್ಷ ವಯಸ್ಸಿನ ತನಕ ಅವರ ತಂದೆ ಅವರನ್ನು ಮತ್ತು ಅವರ ಸಹೋದರಿ ಪೂರ್ಣಿಮಾರನ್ನು ಚಲನಚಿತ್ರದ ಸೆಟ್ ಗೆ ಕರೆದುಕೊಂಡು ಹೋಗುತ್ತಿದ್ದರು. ಪುನೀತ್ ಡಿಸೆಂಬರ್ 1 ,1999 ರಂದು ಅಶ್ವಿನಿ ರೇವಂತ್ ರನ್ನು ವಿವಾಹವಾದರು. ಇವರಿಗೆ ಇಬ್ಬರು ಪುತ್ರಿಯರಿದ್ದಾರೆ. ದ್ರಿತಿ ಮತ್ತು ವಂದಿತಾ. ಇವರ ಮೊದಲ ಹೆಸರು ಮಾ.ಲೋಹಿತ್ ಆಗಿತ್ತು.

ಪುನೀತ್ ಬಾಲ ನಟನಾಗಿ ಅಭಿನಯಿಸಿದ ಚಿತ್ರಗಳು:

ಪ್ರೇಮದ ಕಾಣಿಕೆ
ಭಾಗ್ಯವಂತ
ಎರಡು ನಕ್ಷತ್ರಗಳು
ಬೆಟ್ಟದ ಹೂವು
ಚಲಿಸುವ ಮೋಡಗಳು
ಶಿವ ಮೆಚ್ಚಿದ ಕಣ್ಣಪ್ಪ
ಪರಶುರಾಮ್
ಯಾರಿವನು
ಭಕ್ತ ಪ್ರಹ್ಲಾದ
ವಸಂತ ಗೀತ


ಪುನೀತ್ ನಟನಾಗಿ ಅಭಿನಯಿಸಿದ ಚಿತ್ರಗಳು:

ಅಪ್ಪು
ಅಭಿ
ವೀರ ಕನ್ನಡಿಗ
ಮೌರ್ಯ
ಆಕಾಶ್
ನಮ್ಮ ಬಸವ
ಅಜಯ್
ಅರಸು
ಮಿಲನ
ಬಿಂದಾಸ್
ವಂಶಿ
ರಾಜ್ ದ ಶೋಮ್ಯಾನ್
ಪೃಥ್ವಿ
ರಾಮ್
ಜಾಕಿ
ಹುಡುಗರು
ಪರಮಾತ್ಮ
ಅಣ್ಣ ಬಾಂಡ್
ಯಾರೇ ಕೂಗಾಡಲಿ
ನಿನ್ನಿಂದಲೇ
ಮೈತ್ರಿ
ಪವರ್ ಸ್ಟಾರ್
ಧೀರ ರಣಧೀರ
ಚಕ್ರವ್ಯೂಹ
ದೊ‍ಡ್ಮನೆ ಹುಡುಗ
ರಾಜಕುಮಾರ
ಅಂಜನಿ ಪುತ್ರ
ನಟಸಾರ್ವಭೌಮ
ಯುವರತ್ನ


ಇನ್ನೂ ಅನೇಕ ಚಿತ್ರಗಳಲ್ಲಿ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಾಯಕ ನಟರಾಗಿ ಅಭಿನಯಿಸಿದ್ದಾರೆ. ಬಹುಮುಖ ಪ್ರತಿಭೆಯ ಮೂಲಕ, ಬಾಲನಟನಾಗಿ, ನಟನಾಗಿ, ನಿರ್ಮಾಪಕನಾಗಿ ಚಿಕ್ಕ ವಯಸ್ಸಿನ ಮಕ್ಕಳಿಂದ ದೊಡ್ಡವರ ತನಕ ಪ್ರೀತಿ ಪಾತ್ರರಾಗಿದ್ದ ವಿನಯವಂತ ರಾಗಿದ್ದ ಪುನೀತ್ ಇನ್ನಿಲ್ಲ ಎನ್ನುವುದು ಉಳಿಸಿಕೊಳ್ಳಲು ಅಸಾಧ್ಯ

ಸಾವಿನಲ್ಲೂ ಸಾರ್ಥಕತೆ ಮೆರೆದ ಪುನೀತ್:

ತನ್ನ ಸಾವಿನಲ್ಲೂ ಸಾರ್ಥಕತೆಯನ್ನು ಮೆರೆದಿರುವ ಪುನೀತ್ ರಾಜಕುಮಾರ್ ತನ್ನ ನೇತ್ರಗಳನ್ನು ದಾನ ಮಾಡುವುದರ ಮುಖಾಂತರ ಇನ್ನೊಬ್ಬರಿಗೆ ಕಣ್ಣಾಗಿದ್ದಾರೆ….

ಪುನೀತ್‌ ರಾಜ್‌ಕುಮಾರ್‌ ಬಗ್ಗೆ ಮಾಹಿತಿ ಕೃಪೆ : ವೀಕಿಪೀಡಿಯಾ

Related Articles

Leave a Comment

Latest news
ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್...! ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ...?! ಡಾ. ಮೈತ್ರಿ... Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ...