Home ರಾಜ್ಯಪುನೀತ್ ಅಂತಿಮ ಯಾತ್ರೆಯಲ್ಲಿ ಶಾಂತಿಯುತವಾಗಿ ಸಹಕರಿಸಿದ ಅಭಿಮಾನಿಗಳಿಗೆ ಹಾಗೂ ಪೊಲೀಸ್ ಇಲಾಖೆ ಸೇರಿದಂತೆ ಎಲ್ಲಾ ಇಲಾಖೆಯವರಿಗೂ ಗೃಹ ಸಚಿವರು ಧನ್ಯವಾದಗಳನ್ನು ತಿಳಿಸಿದ್ದಾರೆ….

ಪುನೀತ್ ಅಂತಿಮ ಯಾತ್ರೆಯಲ್ಲಿ ಶಾಂತಿಯುತವಾಗಿ ಸಹಕರಿಸಿದ ಅಭಿಮಾನಿಗಳಿಗೆ ಹಾಗೂ ಪೊಲೀಸ್ ಇಲಾಖೆ ಸೇರಿದಂತೆ ಎಲ್ಲಾ ಇಲಾಖೆಯವರಿಗೂ ಗೃಹ ಸಚಿವರು ಧನ್ಯವಾದಗಳನ್ನು ತಿಳಿಸಿದ್ದಾರೆ….

by EDITOR NEWS WARRIORS
0 comments

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಅಂತಿಮ ದರ್ಶನ, ಯಾತ್ರೆ ಮತ್ತು ಅಂತ್ಯಕ್ರಿಯೆಯ ವೇಳೆ ಶಾಂತಿ ಕಾಪಾಡಿದ ಸಾರ್ವಜನಿಕರು ಮತ್ತು ಶಾಂತಿ ಕಾಪಾಡಲು ಸಹಕರಿಸಿದ ಪೊಲೀಸ್ ಸಿಬ್ಬಂದಿಗಳಿಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಧನ್ಯವಾದಗಳನ್ನು ತಿಳಿಸಿದ್ದಾರೆ.


ಪತ್ರಿಕಾ ಪ್ರಕಟಣೆ ನೀಡಿರುವ ಸಚಿವ ಆರಗ ಜ್ಞಾನೇಂದ್ರ, ”ನಮ್ಮೆಲ್ಲರ ನೆಚ್ಚಿನ ನಟರೂ, ಕನ್ನಡ ಚಿತ್ರರಂಗದ ಮುಕುಟ ಮಣಿಯೂ ಆಗಿದ್ದ ಪುನೀತ್ ರಾಜಕುಮಾರ್ ಅವರ ಅಂತಿಮ ದರ್ಶನ ಹಾಗೂ ವಿಧಿ ವಿಧಾನಗಳು, ಅತ್ಯಂತ ಶಾಂತಿಯುತವಾಗಿ, ಸಕಲ ಸರಕಾರಿ ಗೌರವಳೊಂದಿಗೆ ನೆರವೇರಿದೆ.ನೆಚ್ಚಿನ ನಟನ ಅಕಾಲಿಕ ನಿಧನದ ದುಃಖದ ಸಂದರ್ಭದಲ್ಲಿ, ಸಾರ್ವಜನಿಕರು, ಅತ್ಯಂತ, ಶಾಂತಿ ಹಾಗೂ ತಾಳ್ಮೆಯನ್ನು, ಪ್ರದರ್ಶಿಸಿ ಅಗಲಿದ ಚೈತನ್ಯಕ್ಕೆ ಲಕ್ಷಾಂತರ ಜನರು ಗೌರವ ಸಲ್ಲಿಸಿದ್ದಾರೆ. ಅತ್ಯಂತ ಶಿಸ್ತು ಬದ್ಧವಾಗಿ, ಎಷ್ಟೇ ಕಷ್ಟ ಗಳಿದ್ದರೂ, ಪರಿಸ್ಥಿತಿಯನ್ನು ಸವಾಲಾಗಿ ಸ್ವೀಕರಿಸಿ, ನಿಭಾಯಿಸಿದ, ನಮ್ಮ ಪೊಲೀಸ್, ಬಿಬಿಎಂಪಿ ಹಾಗೂ ಕಂದಾಯ ಇಲಾಖೆಯ ಸಿಬ್ಬಂದಿಗಳು ಹಾಗೂ ಇತರರಿಗೂ ನನ್ನ ಹೃತ್ಪೂರ್ವಕ ಧನ್ಯವಾದಗಳನ್ನು ಸಲ್ಲಿಸುತ್ತೇನೆ” ಎಂದು ಬರೆದಿದ್ದಾರೆ.


ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿರುವ ಡಾ. ರಾಜ್‌ಕುಮಾರ್ ಸಮಾಧಿ ಪಕ್ಕದಲ್ಲಿಯೇ ಪುನೀತ್ ರಾಜ್‌ಕುಮಾರ್ ಅಂತ್ಯಕ್ರಿಯೆ ನಡೆದಿದ್ದು, ಕುಟುಂಬಸ್ಥರು, ಚಿತ್ರರಂಗದ ಅನೇಕ ಗಣ್ಯರು ಅಗಲಿದ ನಟನಿಗೆ ಅಂತಿಮ ನಮನ ಸಲ್ಲಿಸಿದರು.

ಪುನೀತ್‌ರಾಜ್‌ಕುಮಾರ್‌ಗೆ ಗಂಡು ಮಕ್ಕಳು ಇಲ್ಲದ ಕಾರಣ ರಾಘವೇಂದ್ರ ರಾಜ್‌ಕುಮಾರ್ ಪುತ್ರ ಅಂತಿಮ ವಿಧಿವಿಧಾನಗಳನ್ನು ನೆರವೇರಿಸಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಮಾಜಿ ಮುಖ್ಯಮಂತ್ರಿ ಬಿ. ಎಸ್.‌ ಯಡಿಯೂರಪ್ಪ, ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್, ಚಿತ್ರರಂಗದ ಗಣ್ಯರು ವಿವಿಧ ಸಚಿವರು, ಶಾಸಕರು ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡು ಪುನೀತ್‌ರಾಜ್‌ಕುಮಾರ್ ಅಂತಿಮ ದರ್ಶನ ಪಡೆದರು.

ಅಪ್ಪು ಕುಟುಂಬದ ಜೊತೆ ನಾವಿದ್ದೇವೆ ಚಿಂತಿಸಬೇಡಿ ಶಿವಣ್ಣ:

ಅಪ್ಪು ನನಗಿಂತ ಸುಮಾರು ಹದಿಮೂರು ವರ್ಷ ಚಿಕ್ಕವನು ಅವನ ಸಾವಿನ ನೋವನ್ನು ನಮಗೆ ತಡೆದುಕೊಳ್ಳಲು ಆಗುತ್ತಿಲ್ಲ ಅಭಿಮಾನಿಗಳಿಗೆ ಇನ್ನೂ ಹೆಚ್ಚಿನ ನೋವಾಗಿರುತ್ತದೆ. ಎಲ್ಲರೂ ಸಹನೆಯಿಂದ ಸಹಕರಿಸಿ ಪುನೀತ್ ಕುಟುಂಬದ ಜೊತೆ ನಾವಿದ್ದೇವೆ. ಎಂದು ಅಭಿಮಾನಿಗಳಲ್ಲಿ ವಿನಂತಿಸಿಕೊಂಡಿದ್ದಾರೆ. ಹಾಗೆಯೇ ಅಂತಿಮ ಯಾತ್ರೆಗೆ ಸಹಕರಿಸಿದ ಸರ್ಕಾರಕ್ಕೆ ಅಭಿಮಾನಿಗಳಿಗೂ ಎಲ್ಲಾ ಇಲಾಖೆಯವರಿಗೂ ಧನ್ಯವಾದಗಳನ್ನು ಸಲ್ಲಿಸಿದ್ದಾರೆ….

Related Articles

Leave a Comment

Latest news
ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್...! ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ...?! ಡಾ. ಮೈತ್ರಿ... Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ...