Home ಪೊಲೀಸ್ ಇಲಾಖೆNorth East Dcp ಮಿಥುನ್ ಕುಮಾರ್ ರಿಂದ MOB ವ್ಯಕ್ತಿಗಳಿಗೆ ಖಡಕ್ ಎಚ್ಚರಿಕೆ ..!

North East Dcp ಮಿಥುನ್ ಕುಮಾರ್ ರಿಂದ MOB ವ್ಯಕ್ತಿಗಳಿಗೆ ಖಡಕ್ ಎಚ್ಚರಿಕೆ ..!

by EDITOR NEWS WARRIORS
0 comments
ಬೆಂಗಳೂರು: ಕಾನೂನು ಬಾಹಿರ ಚಟುವಟಿಕೆಗಳಲ್ಲಿ ಹಾಗೂ ಗಲಭೆ ಹಿಂಸಾತ್ಮಕ ಚಟುವಟಿಕೆಗಳಲ್ಲಿ ನಿರಂತರವಾಗಿ ತೊಡಗಿಸಿಕೊಂಡಿರುವ ವ್ಯಕ್ತಿಗಳನ್ನು ಗುರುತಿಸಿ    ಬೆಂಗಳೂರು ಪೊಲೀಸ್ ಆಯುಕ್ತರ ಆದೇಶದ ಮೇರೆಗೆ ಉತ್ತರ ಪೂರ್ವದ ಡಿಸಿಪಿ ಮಿಥುನ್ ಕುಮಾರ್ ಜಿ ಕೆ ಅವರು ಪೆರೇಡ್ ನಡೆಸಿದ್ದು  ಹಿಂಸಾತ್ಮಕ ಗಲಭೆ ಕೃತ್ಯಗಳಲ್ಲಿ ಭಾಗಿಯಾಗದಂತೆ ಖಡಕ್ ಎಚ್ಚರಿಕೆ ನೀಡಿದ್ದಾರೆ.

ಈಶಾನ್ಯ ವಿಭಾಗದ ಯಲಹಂಕ, ಕೊಡಿಗೇಹಳ್ಳಿ, ಯಲಹಂಕ ಉಪನಗರ ಹಾಗೂ ವಿದ್ಯಾರಣ್ಯಪುರ ಪೊಲೀಸ್ ಠಾಣೆಗಳ ಹಿಂಸಾತ್ಮಕ, ಗಲಭೆ, ಕೃತಿಗಳಲ್ಲಿ ತೊಡಗುವ ವ್ಯಕ್ತಿಗಳಿಗೆ  ಹೊಯ್ಸಳ ಗ್ರೌಂಡ್‌ನಲ್ಲಿ  ಪರೇಡ್ ನಡೆಸಲಾಯಿತು.
ಈ ಪರೇಡ್‌ನಲ್ಲಿ ಚೈನ್ ಸ್ನಾಚಿಂಗ್, ದ್ವಿಚಕ್ರ ವಾಹನ ಕಳ್ಳತನ, ಮನೆ ಕಳ್ಳತನ ಹಾಗೂ NDPS ಕಾಯ್ದೆ ಸಂಬಂಧಿತ ಪ್ರಕರಣಗಳು ಸೇರಿದಂತೆ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿಗಳನ್ನು ಹಾಜರುಪಡಿಸಲಾಯಿತು.

ಅವರಿಗೆ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಕಟ್ಟುನಿಟ್ಟಿನ ಎಚ್ಚರಿಕೆ ನೀಡಲಾಗಿದ್ದು, ಮರು ಅಪರಾಧ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಲ್ಲಿ ಗಡಿಪಾರು ಕ್ರಮ ಕೈಗೊಳ್ಳಲಾಗುವುದು ಹಾಗೂ ಭವಿಷ್ಯದಲ್ಲಿ ಯಾವುದೇ ರೀತಿಯ ಅಪರಾಧಗಳಲ್ಲಿ ಭಾಗಿಯಾಗಿದರೆ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಸ್ಪಷ್ಟವಾಗಿ ಎಚ್ಚರಿಕೆ ನೀಡಲಾಗಿದ್ದು.
ಇದಲ್ಲದೆ, ಅವರ ಇತ್ತೀಚಿನ ಚಟುವಟಿಕೆಗಳ ಕುರಿತು ಸಮಗ್ರ ಪರಿಶೀಲನೆ ನಡೆಸಿ, ಅವರ ವಿವರಗಳನ್ನು ದಾಖಲಿಸಿಕೊಳ್ಳಲಾಯಿತು. ಸಮಾಜದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಹಾಗೂ ಅಪರಾಧ ತಡೆಗಟ್ಟುವ ಉದ್ದೇಶದಿಂದ ಇಂತಹ ವ್ಯಕ್ತಿಗಳ ಪರೇಡ್‌ಗಳನ್ನು ನಿಯಮಿತವಾಗಿ ಮುಂದುವರಿಸಲಾಗುವುದು ಎಂದರು.
ರಘುರಾಜ್ ಹೆಚ್‌ ಕೆ..9449553305…

Related Articles

Latest news
ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್...! ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ...?! ಡಾ. ಮೈತ್ರಿ... Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ...