Home ಅಂತಾರಾಷ್ಟ್ರೀಯCM ಸಿದ್ದರಾಮಯ್ಯ ನವರಿಂದ ಮೃತ ಸಂಕೇತ ಪೋಷಕರಿಗೆ ಪರಿಹಾರಧನ..! ಯುದ್ಧದ ಬಗ್ಗೆ CM ಏನಂದ್ರು..?!

CM ಸಿದ್ದರಾಮಯ್ಯ ನವರಿಂದ ಮೃತ ಸಂಕೇತ ಪೋಷಕರಿಗೆ ಪರಿಹಾರಧನ..! ಯುದ್ಧದ ಬಗ್ಗೆ CM ಏನಂದ್ರು..?!

by EDITOR NEWS WARRIORS
ಶಿವಮೊಗ್ಗ: ಇತ್ತೀಚಿಗೆ ಅಹಿತಕರ ಘಟನೆಯೊಂದರಲ್ಲಿ ಮೃತನಾದ ವಿದ್ಯಾರ್ಥಿ ಸಂಕೇತ್‌ನ ಪೋಷಕರಿಗೆ  ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಶಿವಮೊಗ್ಗದ ಕುವೆಂಪು ವಿಮಾನ ನಿಲ್ದಾಣದಲ್ಲಿ ಸಾಂತ್ವನ ಹೇಳಿ ಸಂತೈಸಿದರಲ್ಲದೇ 15ಲಕ್ಷ ರೂ.ಗಳ ಪರಿಹಾರದ ಚೆಕ್ಕನ್ನು ವಿತರಿಸಿದರು.
ಅಮೆರಿಕ ಅಧ್ಯಕ್ಷರು ಮಾತಿನಂತೆ ನಡೆದುಕೊಳ್ಳುತ್ತಿಲ್ಲ ಸಿಎಂ :
ಅವರು ಇಂದು ತರೀಕೆರೆಯ ಖಾಸಗಿ ಕಾರ್ಯಕ್ರಮವೊಂದಕ್ಕೆ ತೆರಳುವ ಮುನ್ನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು. ಅಮೇರಿಕಾ ಮದ್ಯಪ್ರಾಚ್ಯ ರಾಷ್ಟ್ರಗಳ ನಡುವೆ ತಾರಕಕ್ಕೇರಿರುವ ಯುದ್ಧದಿಂದಾಗಿ ಇರಾನ್‌ನ ಮುಖ್ಯಸ್ಥ ಮೃತರಾಗಿರುವ ವಿಷಯವನ್ನು ಕೇಳಿ ತಿಳಿದಿದ್ದೇನೆ. ಈ ಘಟನೆ ಸಂಭವಿಸಬಾರದಾಗಿತ್ತು ಎಂದರು.
ಮೃತ ಖಮೈನಿ ಅವರ ಆತ್ಮಕ್ಕೆ ಚಿರಶಾಂತಿ ಬಯಸುವುದಾಗಿ ತಿಳಿಸಿದ ಅವರು, ಅಮೇರಿಕಾ ಅ‍ಧ್ಯಕ್ಷರು ಮಾತಿನಂತೆ ನಡೆದುಕೊಳ್ಳುತ್ತಿಲ್ಲ. ವಿಶ್ವಶಾಂತಿಯ ಬಗ್ಗೆ ಸದಾ ಮಾತನಾಡುವ ಅವರು, ಯುದ್ಧಕ್ಕೆ ಹಾತೊರೆಯುತ್ತಿರುವ ದ್ವಿಮುಖ ನೀತಿ ಸರಿಯಲ್ಲ ಎಂದರು. ಈ ಅನಿರೀಕ್ಷಿತವಾಗಿ ಆರಂಭವಾಗಿರುವ ಈ ಯುದ್ದದಿಂದಾಗಿ ಮದ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಅನೇಕ ಜನ ಸಕಾಲದಲ್ಲಿ ತಮ್ಮ ನಿರೀಕ್ಷೆಯಂತೆ ಪ್ರಯಾಣ ಮುಂದುವರೆಸಲಾದೇ ಆತಂಕದಲ್ಲಿದ್ದಾರೆ. ದುಬೈನಲ್ಲಿ ಸುಮಾರು 35ಕ್ಕೂ ಹೆಚ್ಚಿನ ಜನ ಸಿಲುಕಿಕೊಂಡಿರುವುದು ಗಮನಕ್ಕೆ ಬಂದಿದೆ. ಅಲ್ಲದೇ ಅಲ್ಲಿನ ಏರ್‌ಪೋರ್ಟ್‌ಗಳಲ್ಲಿ ವಿಮಾನಯಾನ ಸ್ಥಗಿತಗೊಂಡಿರುವ ಹಿನ್ನೆಲೆಯಲ್ಲಿ ಸಮಸ್ಯೆಯಾಗಿದೆ. ಮುಂದಿನ 2-3 ದಿನಗಳಲ್ಲಿ ಯುದ್ಧದ ಕಾರ್ಮೋಡ ಸರಿದು ವಾತಾವರಣ ತಿಳಿಯಾಗಿ ಮೊದಲಿನಂತೆ ವಾತಾವರಣ ನಿರ್ಮಾಣಗೊಳ್ಳುವ ಆಶಯ ತಮಗಿದೆ ಎಂದರು.
ಕನ್ನಡಿಗರ ರಕ್ಷಣೆಗೆ ಸರ್ಕಾರ ಸಿದ್ಧ :
ಹೊರದೇಶಗಳಲ್ಲಿ ಸಮಸ್ಯೆಯಲ್ಲಿ ಸಿಲುಕಿರುವ ಕನ್ನಡಿಗರ ಸುರಕ್ಷತೆಗೆ ಸಂಬಂಧಿಸಿದಂತೆ ರಾಜ್ಯದ ಮುಖ್ಯ ಮತ್ತು ಪ್ರಧಾನ ಕಾರ್ಯದರ್ಶಿಗಳೊಂದಿಗೆ ಸಮಾಲೋಚನೆ ನಡೆಸಿ, ಮಾಹಿತಿ ಪಡೆದುಕೊಂಡಿದ್ದೇನೆ. ಅಲ್ಲದೇ ಕೇಂದ್ರದ ವಿದೇಶಾಂಗ ಸಚಿವಾಲಯದ ಅಧಿಕಾರಿಗಳೊಂದಿಗೆ ನಿರಂತರವಾಗಿ ಸಂಪರ್ಕಿಸಿ ಕಾಲಕಾಲಕ್ಕೆ ಮಾಹಿತಿ ಪಡೆದುಕೊಳ್ಳಲಾಗುತ್ತಿದೆ. ಅವರೆಲ್ಲರನ್ನು ರಾಜ್ಯಕ್ಕೆ ಸುರಕ್ಷಿತವಾಗಿ ಕರೆತರಲಾಗುವುದು ಎಂದ ಅವರು ರಾಜ್ಯದ ವಿಧಾನ ಪರಿಷತ್‌ಸದಸ್ಯ ಎಸ್.ಎಲ್.ಭೋಜೆಗೌಡ ಕುಟುಂಬದವರು ದುಬೈ ದೇಶದಲ್ಲಿ ಸುರಕ್ಷಿತವಾಗಿದ್ದು, ಅವರೊಂದಿಗೆ ಮೊಬೈಲ್‌ನಲ್ಲಿ ಮಾತನಾಡಿ ಸುರಕ್ಷಿತವಾಗಿರುವ ವಿಷಯ ತಿಳಿದುಕೊಂಡಿದ್ದೇನೆ. ಎಂದರು.
ಮೃತ ಸಂಕೇತ್‌ನ ಕುಟುಂಬದವರಿಗೆ ಸರ್ಕಾರದಿಂದ ಅಗತ್ಯ ನೆರವು, ಸಹಕಾರ ನೀಡಲಾಗುವುದು. ಅಲ್ಲದೇ ಅವರ ಮನೆಗೆ ತೆರಳಿ ಸಾಂತ್ವನ ಹೇಳಲಾಗುವುದು .ಮಕ್ಕಳ ಶೈಕ್ಷಣಿಕ ಹಿತದೃಷ್ಠಿಯಿಂದ ಸರ್ಕಾರಿ ಪ್ರೌಢಶಾಲೆಗಳಲ್ಲಿ ಪ್ರತಿದಿನ ಸಂಜೆ ವಿಶೇಷ ತರಗತಿಗಳನ್ನು ನಡೆಸಲಾಗುತ್ತಿದ್ದು, ತರಗತಿಯ ನಂತರ ವಿದ್ಯಾರ್ಥಿಗಳು ಸಕಾಲದಲ್ಲಿ ಮನೆಗೆ ಸುರಕ್ಷಿತವಾಗಿ ಹಿಂದಿರುಗುವ ಬಗ್ಗೆ ಪೋಷಕರು ಗಮನಹರಿಸಬೇಕು. ಜಿಲ್ಲೆ, ರಾಜ್ಯ ಮಾತ್ರವಲ್ಲ ದೇಶದಾದ್ಯಂತ ಮಾದಕ ವಸ್ತುಗಳ ಸರಬರಾಜು, ಸಾಗಾಣಿಕೆ ಮತ್ತು ಬಳಕೆ ಬಗ್ಗೆ ನಿಯಂತ್ರಣ ಕಾರ್ಯಗಳಾಗಬೇಕು. ಇಂತಹ ಅಕ್ರಮಗಳಲ್ಲಿ ತೊಡಗಿರುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲೆಯ ಪೊಲೀಸ್‌ವರಿಷ್ಠಾಧಿಕಾರಿಗಳಿಗೆ ಈಗಾಗಲೇ ಸೂಚಿಸಲಾಗಿದೆ. ಅಲ್ಲದೇ ಜಿಲ್ಲಾ ಪಂಚಾಯಿತಿ ಪ್ರಗತಿ ಪರಿಶೀಲನಾ ಸಭೆಗಳಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಜಿಲ್ಲೆಯಲ್ಲಿ ಹೆಚ್ಚಿನ ಪ್ರಕರಣಗಳನ್ನು ದಾಖಲಿಸಲಾಗಿದೆ ಆದರೆ, ಅವರನ್ನು ಕಠಿಣ ಶಿಕ್ಷೆಗೆ, ದಂಡನೆಗೆ ಗುರಿಪಡಿಸಬೇಕು  , ಈ ಸಂಬಂಧ ಮಾನ್ಯ ಮುಖ್ಯಮಂತ್ರಿಗಳೊಂದಿಗೆ ಸಮಾಲೋಚನೆ ನಡೆಸಲಾಗಿದೆ .ಜಿಲ್ಲೆಯಲ್ಲಿ ಶಿಕ್ಷಕರೊಬ್ಬರ ಮೇಲೆ ಫೋಕ್ಸೋ ಪ್ರಕರಣವೊಂದು ದಾಖಲಾಗಿದೆ. ಅವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಲಾಗುವುದು. ಇತ್ತೀಚೆಗೆ ಖಾಸಗಿ ಬಸ್ ಅಗ್ನಿ ಅವಘಡಕ್ಕೆ ತುತ್ತಾಗಿರುವುದು ಕಂಡುಬಂದಿದೆ. ಖಾಸಗಿ ವಾಹನಗಳ ಸುರಕ್ಷತಾ ಪ್ರಯಾಣಕ್ಕೆ ಸಂಬಂಧಿಸಿದಂತೆ ಸಾರಿಗೆ ಅಧಿಕಾರಿಗಳು ಕ್ರಮ ಕೈಗೊಳ್ಳುವಂತೆ ಸೂಚಿಸಲಾಗುವುದು  .ನಿನ್ನೆಯಷ್ಟೆ ದ್ವಿತೀಯ ಪಿ.ಯು.ಸಿ. ವಾರ್ಷೀಕ ಪರೀಕ್ಷೆಗಳು ಆರಂಭಗೊಂಡಿದ್ದು, ಯಾವುದೇ ಅಹಿತಕರ ಘಟನೆಗಳಿಲ್ಲದಂತೆ ವ್ಯವಸ್ಥಿತವಾಗಿ ಮುಂದುವರೆದಿದೆ. ಎಲ್ಲಾ ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗುವಂತೆ ಶುಭ ಹಾರೈಸುತ್ತೇನೆ  .1995ರ ನಂತರ ಖಾಸಗಿ ಕನ್ನಡ ಶಾಲೆಗಳನ್ನು ಅನುದಾನದ ವ್ಯಾಪ್ತಿಗೊಳಪಡಿಸುವ ವಿಷಯವನ್ನು ಪ್ರಸಕ್ತ ಬಜೆಟ್‌ನಲ್ಲಿ ಸೇರ್ಪಡೆಗೊಳಿಸುವ ಸಂಬಂಧ ಮಾನ್ಯ ಮುಖ್ಯಮಂತ್ರಿಗಳೊಂದಿಗೆ ಸಮಾಲೋಚನೆ ನಡೆಸಲಾಗಿದೆ. ಅಲ್ಲದೇ ಅದಕ್ಕಾಗಿ ಅಗತ್ಯವಿರುವ ಅನುದಾನವನ್ನು ಹಣಕಾಸು ಇಲಾಖೆಗೆ ಬಿಡುಗಡೆಗೆ ಕ್ರಮ ವಹಿಸಬೇಕಾಗುವುದು. ಈ ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದಂತೆ ವೇಗಹೆಚ್ಚಿಸಲು ಸೂಚಿಸಲಾಗಿದೆ. ಮುಂದಿನ ಶೈಕ್ಷಣಿಕ ವರ್ಷದ ಆರಂಭದಿಂದಲೇ ನೂತನ ಶಿಕ್ಷಕರ ಸೇವೆಯನ್ನು ಬಳಸಿಕೊಳ್ಳುವ ಆಶಯ ತಮಗಿದೆ .ಕರ್ನಾಟಕ ಪಬ್ಲಿಕ್‌ಶಾಲೆಗಳ ಉದ್ಘಾಟನೆ ರಾಜ್ಯ ಮಟ್ಟದ ಕಾರ್ಯಕ್ರಮವನ್ನು ಶಿವಮೊಗ್ಗದಲ್ಲಿ ಬಜೆಟ್‌ನಂತರದಲ್ಲಿ ಆಯೋಜಿಸುವ ಉದ್ದೇಶ ಹೊಂದಲಾಗಿದೆ  ಇದೇ ಅವಧಿಯಲ್ಲಿ ಶರಾವತಿ ಸಂತ್ರಸ್ಥರ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಉದ್ದೇಶಿಸಲಾಗಿದೆ.
ಕಾರ್ಯಕ್ರಮವನ್ನು ಶಿವಮೊಗ್ಗದಲ್ಲಿ ಬಜೆಟ್‌ನಂತರದಲ್ಲಿ ಆಯೋಜಿಸುವ ಉದ್ದೇಶ ಹೊಂದಲಾಗಿದೆ  ಇದೇ ಅವಧಿಯಲ್ಲಿ ಶರಾವತಿ ಸಂತ್ರಸ್ಥರ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಉದ್ದೇಶಿಸಲಾಗಿದೆ.

ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ.

ಈ ಸಂದರ್ಭದಲ್ಲಿ ಗಣ್ಯರು, ಅಧಿಕಾರಿಗಳು ಉಪಸ್ಥಿತರಿದ್ದರು.

Related Posts

Latest news
Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga : ದೊಡ್ಡಪೇಟೆ ಪೊಲೀಸರ ಮಹತ್ವದ ಕಾರ್ಯಾಚರಣೆ ನೇಪಾಳಿ ಮಂಜ ಅಂದರ್..! Railway shivamogga: ರೈಲ್ವೆ ಹಳಿಗೆ ಬಿದ್ದ ಮಹಿಳೆ ಯಾರು..?! Health department: ಆರೋಗ್ಯ ಇಲಾಖೆಗೆ ಮೇಜರ್ ಸರ್ಜರಿ ಮಾಡಿದ್ದ ಹರ್ಷ ಗುಪ್ತಾ ವರ್ಗಾವಣೆ..! 26 ವರ್ಷ ಸೇವೆ 30 ಸಲ ಎತ... North East police:ಯಲಹಂಕ ನ್ಯೂಟೌನ್ ಪೊಲೀಸರ ಮಹತ್ವದ ಕಾರ್ಯಾಚರಣೆ..! ವಿದೇಶಿ ಪ್ರಜೆಯಿಂದ ₹2 ಕೋಟಿ ಮೌಲ್ಯದ 2 ಕೆ.ಜ... ತೀರ್ಥಹಳ್ಳಿ : ನಾಬಳ ಶಚಿಂದ್ರ ಹೆಗ್ಡೆ ಪತ್ನಿ ಶ್ರೀಮತಿ ಅಚಲಾ ಶಚಿಂದ್ರ ಹೆಗ್ಡೆ ಇನ್ನಿಲ್ಲ...! ಏನಾಗಿತ್ತು ಇವರಿಗೆ..?!... ವೈದ್ಯಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ..! Shivamogga police : ಅಡಿಶನಲ್ ಎಸ್ ಪಿ ರಮೇಶ್ ಕುಮಾರ್ ಜೊತೆ ಕ್ರೈಂ ವಿಭಾಗದ ಇಬ್ಬರಿಗೆ ಮುಖ್ಯಮಂತ್ರಿ ಪದಕ..! ಸರ್ಕಾರಿ ಶಾಲಾ-ಪಿಯುಸಿ ಕಾಲೇಜುಗಳ ಭೂಮಿ ರಕ್ಷಣೆಯ ಐತಿಹಾಸಿಕ ಮಸೂದೆಗೆ ವಿಧಾನ ಪರಿಷತ್ತಿನಲ್ಲೂ ಒಮ್ಮತದ ಅಂಗೀಕಾರ..!