Home ಶಿವಮೊಗ್ಗಆರೋಗ್ಯಮೆಗ್ಗಾನ್ ಆಸ್ಪತ್ರೆಯಲ್ಲಿ ಬೆಂಕಿ ಇದೇ ಮೊದಲೇನಲ್ಲ , ಮಹಿಳಾ ಮತ್ತು ಮಕ್ಕಳ ವಾರ್ಡ್ ಸರಿಯೇ ಇಲ್ಲ

ಮೆಗ್ಗಾನ್ ಆಸ್ಪತ್ರೆಯಲ್ಲಿ ಬೆಂಕಿ ಇದೇ ಮೊದಲೇನಲ್ಲ , ಮಹಿಳಾ ಮತ್ತು ಮಕ್ಕಳ ವಾರ್ಡ್ ಸರಿಯೇ ಇಲ್ಲ

by EDITOR NEWS WARRIORS
0 comments

ಶಿವಮೊಗ್ಗ: ಇಂದು ಶಾರ್ಟ್ ಸೆರ್ಕ್ಯೂಟ್​​​ನಿಂದಾಗಿ ಮೆಗ್ಗಾನ್ ಆಸ್ಪತ್ರೆಯ ಮಕ್ಕಳ ವಿಭಾಗದ ಒಬಿಜಿಯಲ್ಲಿನ ಐಸಿಯುಗೆ ಬೆಂಕಿ ಹೊತ್ತಿಕೊಂಡು ಅವಘಡ ಸಂಭವಿಸಿದ್ದು.

ಈ ಅವಘಡಕ್ಕೆ ಹೆದರಿದ ಜನರು ಕೆಲಕಾಲ ಭಯಭೀತರಾಗಿದ್ದು. ವಾರ್ಡ್ ಇಂದ ಹೊರಗೆ ಓಡಿ ಬಂದಿದ್ದಾರೆ.

ಮಹಿಳಾ ಮತ್ತು ಮಕ್ಕಳ ವಿಭಾಗದಲ್ಲಿ ಆದ ಅವಗಡ:
ಈ ವಾರ್ಡ್ ನಲ್ಲಿದ್ದ ಐಸಿಯನಲ್ಲಿ ಶಾರ್ಟ್ ಸೆರ್ಕ್ಯೂಟ್ ಆಗಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿಗೆ ದಟ್ಟವಾದ ಹೊಗೆ ಕಾಣಿಸಿಕೊಂಡಿದ್ದು, ಬೆಂಕಿ ಕಾಣಿಸಿಕೊಂಡ ಕೂಡಲೇ ಮೆಗ್ಗಾನ್ ಮಕ್ಕಳ ಕಟ್ಟಡದ ಬಹುತೇಕ ವಾರ್ಡ್ ನಲ್ಲಿ ವಿದ್ಯುತ್ ಸಂಪರ್ಕ ಕಡಿತವಾಗಿದೆ. ಸದ್ಯ ಒಬಿಜಿ ವಾರ್ಡ್ ನಲ್ಲಿದ್ದ ಇಬ್ಬರು ಮಹಿಳೆಯರು ಮತ್ತು ಮಕ್ಕಳನ್ನ ಬೇರೆಡೆ ಶಿಫ್ಟ್ ಮಾಡಲಾಗಿದ್ದು. ಘಟನೆಯಲ್ಲಿ ಯಾರಿಗೂ ಅಪಾಯ ಸಂಭವಿಸಿಲ್ಲ


ಸ್ಥಳಕ್ಕೆ ಅಗ್ನಿಶಾಮಕದಳದ ಸಿಬ್ಬಂದಿ ಆಗಮಿಸಿದ್ದು, ಒಬಿಜಿಯಲ್ಲಿದ್ದ ಉಳಿದ ಉಪಕರಣಗಳನ್ನ ಹೊರಗೆ ತರುವ ಕಾರ್ಯ ಮಾಡಲಾಗುತ್ತಿದೆ. ಘಟನೆ ಬಗ್ಗೆ ಮಾಹಿತಿ ತಿಳಿದ ಕೂಡಲೇ ಮೆಗ್ಗಾನ್ ಅಧೀಕ್ಷಕ ಶ್ರೀಧರ್ ಭೇಟಿ ನೀಡಿದ್ದಾರೆ.

ಇಲ್ಲಿ ಎಲ್ಲವೂ ಸರಿಯಿಲ್ಲ ನಿರಂತರ ಸಮಸ್ಯೆಗಳೇ:

ಮೇಗನ್ ಮಹಿಳಾ ಮತ್ತು ಮಕ್ಕಳ ವಾರ್ಡ್ನಲ್ಲಿ ಎಲ್ಲವೂ ಸರಿಯಿಲ್ಲ ನಿರಂತರ ಸಮಸ್ಯೆಗಳು ಕಂಡುಬರುತ್ತಿದ್ದು. ತಾಯಂದಿರು ಅವರ ಪೋಷಕರು ಈ ವಾರ್ಡ್ ನಲ್ಲಿ ಹೆರಿಗೆ ಮಾಡಿಸಿಕೊಳ್ಳಲು ಭಯಪಡುವ ವಾತಾವರಣ ನಿರ್ಮಾಣವಾಗಿದೆ. ಪತ್ರಿಕಾ ಮಾಧ್ಯಮಗಳಲ್ಲಿ ನಿರಂತರವಾಗಿ ವರದಿಗಳು ಪ್ರಕಟ ಮಾಡುತ್ತಿದ್ದರು ಎಚ್ಚೆತ್ತುಕೊಳ್ಳದ ಆಡಳಿತ ಮಂಡಳಿ .ಇದು ಹೀಗೆ ಮುಂದುವರಿದರೆ ಮುಂದಿನ ದಿನಗಳಲ್ಲಿ ಪ್ರಮುಖರ ತಲೆದಂಡ ವಾಗುವುದು ಖಚಿತ.

ಇದು ಎರಡನೇ ಸಲ ಆದ ಬೆಂಕಿ ಅವಗಡ:

ಇದೆ ವಾರ್ಡ್ನಲ್ಲಿ 2019ರಲ್ಲಿ ಅಗ್ನಿ ಅವಘಡ ಸಂಭವಿಸಿದ್ದು.ಆ ಸಮಯದಲ್ಲಿ ನಿರ್ದೇಶಕರಾದ ಡಾಕ್ಟರ್ ಡಾ.ಲೇಪಾಪಕ್ಷಿ ಹೊಣೆಗಾರರನ್ನಾಗಿ ಮಾಡಿ ನಿರ್ದೇಶಕ ಸ್ಥಾನದಿಂದ ತೆಗೆಯಲಾಗಿತ್ತು.

ಈಗಿನ ನಿರ್ದೇಶಕರ ತಲೆದಂಡ ಆಗುತ್ತದೆಯಾ?

2019ರಲ್ಲಿ ಆದ ಘಟನೆ ಮತ್ತೆ ಪುನರಾವರ್ತನೆ ಆಗಿದ್ದು 2021 ರ ಘಟನೆಗೆ ಈಗಿನ ನಿರ್ದೇಶಕರನ್ನು ಹೊಣೆಗಾರರನ್ನಾಗಿ ಮಾಡಿ ಅವರ ತಲೆದಂಡ ಆಗುತ್ತದೆಯಾ? ಕಾದುನೋಡಬೇಕು…

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ:9449553305/7892830899…

Related Articles

Leave a Comment

Latest news
ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್...! ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ...?! ಡಾ. ಮೈತ್ರಿ... Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ...