Home ರಾಜ್ಯಸರ್ಕಾರಿ ಶಾಲಾ-ಪಿಯುಸಿ ಕಾಲೇಜುಗಳ ಭೂಮಿ ರಕ್ಷಣೆಯ ಐತಿಹಾಸಿಕ ಮಸೂದೆಗೆ ವಿಧಾನ ಪರಿಷತ್ತಿನಲ್ಲೂ ಒಮ್ಮತದ ಅಂಗೀಕಾರ..!

ಸರ್ಕಾರಿ ಶಾಲಾ-ಪಿಯುಸಿ ಕಾಲೇಜುಗಳ ಭೂಮಿ ರಕ್ಷಣೆಯ ಐತಿಹಾಸಿಕ ಮಸೂದೆಗೆ ವಿಧಾನ ಪರಿಷತ್ತಿನಲ್ಲೂ ಒಮ್ಮತದ ಅಂಗೀಕಾರ..!

by EDITOR NEWS WARRIORS
0 comments
ವಿಧಾನಸಭೆಯ ಬೆನ್ನಲ್ಲೇ, ಇಂದು ವಿಧಾನ ಪರಿಷತ್ತಿನಲ್ಲಿಯೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಅತ್ಯಂತ ಮಹತ್ವದ ‘ಕರ್ನಾಟಕ ಸರ್ಕಾರಿ ಶೈಕ್ಷಣಿಕ ಸಂಸ್ಥೆಗಳ ಭೂಮಿಗಳ (ರಕ್ಷಣೆ ಮತ್ತು ಸಕ್ರಮಾತಿ) ವಿಧೇಯಕ-2026’ ಅನ್ನು ಮಂಡಿಸಲಾಯಿತು. ಈ ಮಸೂದೆಗೆ ಮೇಲ್ಮನೆಯ ಎಲ್ಲಾ ಹಿರಿಯ ಸದಸ್ಯರು ಪಕ್ಷಭೇದ ಮರೆತು, ಸುದೀರ್ಘ ಚರ್ಚೆಸಿ ಒಮ್ಮತದ ಬೆಂಬಲ ಸೂಚಿಸಿ ಅಂಗೀಕರಿಸಲಾಯಿತು.
ದಶಕಗಳ ಹಿಂದೆ ಸರ್ಕಾರಿ ಶಾಲೆಗಳ ಉಳಿವಿಗಾಗಿ ಹಾಗೂ ಮಕ್ಕಳ ಶಿಕ್ಷಣಕ್ಕಾಗಿ ತಮ್ಮ ಸ್ವಂತ ಜಮೀನುಗಳನ್ನು ನಿಸ್ವಾರ್ಥವಾಗಿ ನೀಡಿದ ದಾನಿಗಳ ಆಶಯವನ್ನು ಈ ಮಸೂದೆ ಎತ್ತಿಹಿಡಿಯಲಿದೆ. ದಾಖಲೆಗಳ ಕೊರತೆಯಿಂದ ಆಗಿದ್ದ ಸಮಸ್ಯೆಗಳನ್ನು ಸರಿಪಡಿಸಿ, ಜಮೀನುಗಳನ್ನು ಅಧಿಕೃತವಾಗಿ ಇಲಾಖೆಯ ಸುಪರ್ದಿಗೆ ತರುವ ಜೊತೆಗೆ ದಾನಿಗಳ ಹೆಸರನ್ನು ಉಳಿಸುವ ಪ್ರಾಮಾಣಿಕ ಪ್ರಯತ್ನ ಇದಾಗಿದೆ.
ಕಳೆದ 12 ವರ್ಷಗಳಿಗೂ ಹೆಚ್ಚು ಕಾಲದಿಂದ ಸರ್ಕಾರಿ ಶಾಲೆಗಳು ಕಾರ್ಯನಿರ್ವಹಿಸುತ್ತಿರುವ, ಆದರೆ ಇಲಾಖೆಯ ಹೆಸರಿಗೆ ನೋಂದಣಿಯಾಗದ ಖಾಸಗಿ ಅಥವಾ ಇತರೆ ಜಮೀನುಗಳನ್ನು ಕಾನೂನುಬದ್ಧವಾಗಿ ಸಕ್ರಮಗೊಳಿಸಿ ಇಲಾಖೆಯ ಸುಪರ್ದಿಗೆ ಪಡೆಯಲು ಈ ವಿಧೇಯಕ ಹಾದಿ ಸುಗಮಗೊಳಿಸಿದೆ.
ಶಾಲೆಗಳ ಜಮೀನುಗಳು ಯಾವುದೇ ಕಾರಣಕ್ಕೂ ಒತ್ತುವರಿಯಾಗದಂತೆ ತಡೆಯಲು ಮತ್ತು ಅನ್ಯ ಕಾರ್ಯಗಳಿಗೆ ಬಳಕೆಯಾಗದಂತೆ ಕಟ್ಟುನಿಟ್ಟಿನ ರಕ್ಷಣೆ ಒದಗಿಸಲು ಈ ಕಾನೂನು ಬಲ ತುಂಬಲಿದೆ.
ಮಕ್ಕಳ ಭವಿಷ್ಯ ಹಾಗೂ ಸರ್ಕಾರಿ ಶಾಲೆಗಳ ಸಬಲೀಕರಣವೇ ನಮ್ಮ ಸರ್ಕಾರದ ಮೂಲ ಮಂತ್ರ. ಈ ಮಸೂದೆಯ ಮೇಲಿನ ಚರ್ಚೆಯಲ್ಲಿ ಭಾಗವಹಿಸಿ, ತಮ್ಮ ಅತ್ಯಮೂಲ್ಯವಾದ ಸಲಹೆ-ಸೂಚನೆಗಳನ್ನು ನೀಡಿ ಒಮ್ಮತದ ಅಂಗೀಕಾರಕ್ಕೆ ಕಾರಣರಾದ  ಸಭಾಪತಿಗಳಿಗೆ ಹಾಗೂ ವಿಧಾನ ಪರಿಷತ್ತಿನ ಎಲ್ಲಾ ಸದಸ್ಯರಿಗೂ ಶಿಕ್ಷಣ ಸಚಿವ ಮಧು ಬಂಗಾರಪ್ಪನವರು ಇಂದು ಧನ್ಯವಾದ ತಿಳಿಸಿದ್ದಾರೆ.

Related Articles

Latest news
ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್...! ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ...?! ಡಾ. ಮೈತ್ರಿ... Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ...