Home ಶಿವಮೊಗ್ಗಆರೋಗ್ಯವೈದ್ಯಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ..!

ವೈದ್ಯಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ..!

by EDITOR NEWS WARRIORS
0 comments

 

ಶಿವಮೊಗ್ಗ, : ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಛೇರಿಯ ಅಧೀನದಲ್ಲಿರುವ ವಿವಿಧ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಖಾಲಿ ಇರುವ ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳ ಹುದ್ದೆಗಳಿಗೆ ನೇರ ಸಂದರ್ಶನ ಆಯೋಜಿಸಲಾಗಿದೆ.

ಹುದ್ದೆಗಳ ವಿವರ:
ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳ ಒಟ್ಟು 09 ಹುದ್ದೆಗಳು ಇದ್ದು ತಾತ್ಕಾಲಿಕವಾಗಿ ಒಂದು ವರ್ಷದ ಅವಧಿಗೆ ಗುತ್ತಿಗೆ ಆಧಾರದ ಮೇಲೆ (ರೋಸ್ಟರ್ ಮತ್ತು ಮೆರಿಟ್ ಆಧಾರದಲ್ಲಿ) ಆಯ್ಕೆ ಮಾಡಲಾಗುವುದು.ಎಂ.ಬಿ.ಬಿ.ಎಸ್ (MBBS) ಪದವೀಧರರಾಗಿರಬೇಕು.
ಖಾಲಿ ಇರುವ ಸ್ಥಳಗಳು..!
ಜಿಲ್ಲೆಯ ಬ್ಯಾಕೋಡು, ತುಮರಿ, ಕಾರ್ಗಲ್, ತಾಳಗುಪ್ಪ, ತಡಗಳಲೆ, ಮೂಡಿದೋಡಿಕೊಪ್ಪ, ಚಂದ್ರಗುತ್ತಿ, ಬೆಟ್ಟಬಸವಾನಿ ಹಾಗೂ ರಿಪ್ಪನಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ನಿಯೋಜಿಸಲಾಗುವುದು.
ಸಂದರ್ಶನದ ವಿವರ:
ದಿನಾಂಕ: 01/04/2026 ರಂದು ಸಮಯ: ಬೆಳಿಗ್ಗೆ 11:00 ರಿಂದ ಮಧ್ಯಾಹ್ನ 1:00 ಗಂಟೆಯವರೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಛೇರಿ, ಬಿ.ಹೆಚ್ ರಸ್ತೆ, ಶಿವಮೊಗ್ಗ ಇಲ್ಲಿ ನೇರ ಸಂದರ್ಶನ ನಡೆಯಲಿದೆ.
ಒಂದು ಪಕ್ಷ ಹುದ್ದೆಗಳು ಪೂರ್ಣ ಭರ್ತಿಯಾಗದಿದ್ದಲ್ಲಿ ಪ್ರತಿ ದಿನ ಇದೇ ವೇಳೆ ಮತ್ತು ಸ್ಥಳದಲ್ಲಿ ಹುದ್ದೆಗಳು ಭರ್ತಿ ಆಗುವವರೆಗೆ ನೇರ ಸಂದರ್ಶನ ನಡೆಯಲಿದೆ. ಆಸಕ್ತ ಅಭ್ಯರ್ಥಿಗಳು ಸಂದರ್ಶನಕ್ಕೆ ಹಾಜರಾಗುವ ವೇಳೆ ವಿದ್ಯಾರ್ಹತೆ, ಹುಟ್ಟಿದ ದಿನಾಂಕ ಮತ್ತು ಮೀಸಲಾತಿಗೆ ಸಂಬಂಧಿಸಿದ ಎಲ್ಲಾ ಮೂಲ ದಾಖಲಾತಿಗಳು ಮತ್ತು ದಾಖಲೆಗಳ ಒಂದು ಸೆಟ್ ನಕಲು ಪ್ರತಿಗಳು ಹಾಗೂ ಇತ್ತೀಚಿನ ಎರಡು ಭಾವಚಿತ್ರಗಳನ್ನು ತರಬೇಕು.
ಹೆಚ್ಚಿನ ಮಾಹಿತಿಗಾಗಿ:;
ನೇರವಾಗಿ ಕಚೇರಿಗೆ ಭೇಟಿ ನೀಡಬಹುದು ಅಥವಾ ದೂರವಾಣಿ ಸಂಖ್ಯೆ: 08182-222382 ಅನ್ನು ಸಂಪರ್ಕಿಸಬಹುದು ಎಂದು ಡಿಹೆಚ್ ಓ ಡಾ. ನಟರಾಜ್ ತಿಳಿಸಿದ್ದಾರೆ.

Related Articles

Latest news
ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್...! ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ...?! ಡಾ. ಮೈತ್ರಿ... Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ...