Home ರಾಜ್ಯಸಿಎಂ ಕಾಮನ್‌ ಅಲ್ಲ ಕಾಸ್ಟ್ಲಿ ಮ್ಯಾನ್‌: ಕೆಪಿಸಿಸಿ ವಕ್ತಾರ ಕೆಂಗಲ್‌ ಶ್ರೀಪಾದ್‌ ರೇಣು ಹೇಳಿಕೆ ರಾಜ್ಯ ಮುಳುಗುತ್ತಿದ್ದರೆ ಸಿಎಂ ಖಾಸಗಿ ಕಾರ್ಯಕ್ರಮಗಳಲ್ಲಿ ಬ್ಯೂಸಿ!

ಸಿಎಂ ಕಾಮನ್‌ ಅಲ್ಲ ಕಾಸ್ಟ್ಲಿ ಮ್ಯಾನ್‌: ಕೆಪಿಸಿಸಿ ವಕ್ತಾರ ಕೆಂಗಲ್‌ ಶ್ರೀಪಾದ್‌ ರೇಣು ಹೇಳಿಕೆ ರಾಜ್ಯ ಮುಳುಗುತ್ತಿದ್ದರೆ ಸಿಎಂ ಖಾಸಗಿ ಕಾರ್ಯಕ್ರಮಗಳಲ್ಲಿ ಬ್ಯೂಸಿ!

by EDITOR NEWS WARRIORS
0 comments

ಬೆಂಗಳೂರು >ನವೆಂಬರ್‌> 22: ಅಕಾಲಿಕ ಮಳೆಯಿಂದಾಗಿ ರಾಜ್ಯದ ಹಾಗೂ ಬೆಂಗಳೂರು ನಗರದ ಜನರು ಪರಿತಪಿಸುತ್ತಿದ್ದರೆ ಜನರು ಹಾಗೂ ರೈತರ ಬಗ್ಗೆ ಯಾವುದೇ ಕಾಳಜಿ ತೋರಿಸದೇ ಇರುವ ಮುಖ್ಯಮಂತ್ರಿಗಳು ಕಾಮನ್‌ ಅಲ್ಲ ಕಾಸ್ಟ್ಲಿ ಮ್ಯಾನ್‌ ಎಂದು ಕೆಪಿಸಿಸಿ ವಕ್ತಾರ ಕೆಂಗಲ್ ಶ್ರೀಪಾದ ರೇಣು ಟೀಕಿಸಿದ್ದಾರೆ.

ಈ ಬಗ್ಗೆ ಪತ್ರಿಕಾ ಹೇಳಿಕೆಯನ್ನು ಬಿಡುಗಡೆ ಮಾಡಿರುವ ಅವರು, ಕಳೆದೊಂದು ವಾರದಿಂದ ರಾಜ್ಯದಲ್ಲಿ ಬಿಡದೆ ಮಳೆ ಸುರಿಯುತ್ತಿದೆ. ಮಳೆಯಿಂದಾಗಿ ರಾಜ್ಯದ ರೈತರು ತೀವ್ರ ತೊಂದರೆಗೀಡಾಗಿದ್ದಾರೆ. ಬೆಂಗಳೂರು ನಗರದಲ್ಲೂ ಹಲವಾರು ಪ್ರದೇಶಗಳು ಜಲಾವೃತವಾಗಿವೆ. ಇತರೆ ಮುಖ್ಯಮಂತ್ರಿಗಳು ಇಂತಹ ಸಂಧರ್ಭದಲ್ಲಿ ಮಳೆಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ ಪರಿಹಾರ ಕಾರ್ಯದಲ್ಲಿ ತೊಡಗಿಕೊಂಡಿರುತ್ತಿದ್ದರು. ನವದೆಹಲಿಗೆ ತೆರಳುವ ಸಂಧರ್ಭದಲ್ಲಿ ಜನರ ತೆರಿಗೆ ಹಣದಲ್ಲಿ ವಿಶೇಷ ವಿಮಾನ ವ್ಯವಸ್ಥೆ ಮಾಕೊಳ್ಳುವ ಸಿಎಂ, ಕನಿಷ್ಠ ಹೆಲಿಕ್ಯಾಪ್ಟರ್‌ ನಲ್ಲಾದರೂ ಸಮೀಕ್ಷೆ ಮಾಡಬಹುದಿತ್ತು. ರೈತರ ಸಹಾಯಕ್ಕೆ ಧಾವಿಸುವ ಬದಲಾಗಿ ನಮ್ಮ ಮುಖ್ಯಮಂತ್ರಿಗಳು ಬೆಂಗಳೂರು ನಗರದಲ್ಲಿ ಖಾಸಗಿ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಕಾಲಹರಣ ಮಾಡುತ್ತಿದ್ದಾರೆ ಎಂದು ಆಕ್ರೋಶವ್ಯಕ್ತಪಡಿಸಿದ್ದಾರೆ.

ಬೆಂಗಳೂರು ನಗರದ ಉಸ್ತುವಾರಿಯೂ ಆಗಿರುವ ಮುಖ್ಯಮಂತ್ರಿಗಳು ಇದುವರೆಗೆ ಒಂದೇ ಒಂದು ಬಾರಿ ಮಳೆಯಿಂದ ತೊಂದರೆಗೀಡಾದ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಇನ್ನು ಹೊಸಕೋಟೆ ಮತ್ತು ಚಿಕ್ಕಬಳ್ಳಾಪುರಕ್ಕೆ ಫ್ಲೈಯಿಂಗ್‌ ವಿಸಿಟ್‌ ಮಾಡಿದ್ದಾರೆ. ಇಂತಹ ಕಣ್ಣೊರೆಸುವ ತಂತ್ರಗಳನ್ನು ಬಿಟ್ಟು ಕಾಮನ್‌ ಮ್ಯಾನ್‌ ಗಿರುವ ಬದ್ದತೆಯನ್ನು ತೋರಿಸಬೇಕು ಎಂದು ಆಗ್ರಹಿಸಿದ್ದಾರೆ.

ಜನಸಾಮಾನ್ಯರ ಮುಖ್ಯಮಂತ್ರಿ ನಾನು ಕಾಮನ್‌ ಮ್ಯಾನ್‌ ಎಂದು ತಮ್ಮ ಎದೆ ತಟ್ಟಿಕೊಂಡಿದ್ದ ಮುಖ್ಯಮಂತ್ರಿಗಳು ಬದ್ದತೆ ಕೇವಲ ಖಾಸಗಿ ಕಾರ್ಯಕ್ರಮಗಳಲ್ಲಿ ಭಾಗಿಯಾಗುವುದೋ ಎಂದು ಟೀಕಿಸಿದ್ದಾರೆ.

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ:9449553305/7892830899…

Related Articles

Leave a Comment

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...