Friday, 30 October 2026 — News Warriors

News Warriors

Kannada News Portal Shimoga : Local News

BREAKING NEWS
ರಾಜ್ಯ Big news: ರಾಜ್ಯ ಆರೋಗ್ಯ ಇಲಾಖೆಗೆ ಭರ್ಜರಿ ಸರ್ಜರಿ – ಶಿವಮೊಗ್ಗ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲೂ ಮಹತ್ವದ ಬದಲಾವಣೆ..! ರಾಜ್ಯ Shivamogga :ಪ್ರಭಾವಿಗಳಿಂದಲೇ ಕೆರೆ ಒತ್ತುವರಿ ತೆರವು ಆರಂಭಿಸಿ ಅಧಿಕಾರಿಗಳಿಗೆ ಖಂಡ್ರೆ ಖಡಕ್ ಆದೇಶ..!ಕುಡಿಯುವ ನೀರಿಗೆ ₹67 ಸಾವಿರ ಕೋಟಿ | ರಾಜ್ಯದಲ್ಲಿ 1,000 ಬಸ್ ನಿಲ್ದಾಣಗಳ ನಿರ್ಮಾಣಕ್ಕೆ ಯೋಜನೆ..! 24 ಗಂಟೆಯಲ್ಲಿ ನೀರಿನ ಸಮಸ್ಯೆಗೆ ಸ್ಪಂದಿಸದಿದ್ದರೆ ಶಿಸ್ತುಕ್ರಮ..! ರಾಜ್ಯ Big news :ಶಿವಮೊಗ್ಗ ದಸರಾ ಮೆರವಣಿಗೆಯಲ್ಲಿ ಆನೆ ರಂಪಾಟ: ಅರಣ್ಯ ಇಲಾಖೆಗೆ ಸಚಿವ ರಾಮಲಿಂಗಾ ರೆಡ್ಡಿ ಖಡಕ್ ಸೂಚನೆ..! ಶಿವಮೊಗ್ಗ ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ರಾಜ್ಯ ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್…! ರಾಜ್ಯ ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗ ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! ರಾಜ್ಯ Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ…?! ಡಾ. ಮೈತ್ರಿ ಹೆಚ್ ಪಿ,.ಎಸ್ ವರ್ಗಾವಣೆ ಎಲ್ಲಿಗೆ..?! ಕುತೂಹಲ ಮೂಡಿಸಿದ ವರ್ಗಾವಣೆ ಪ್ರಕರಣ..! ರಾಜ್ಯ Big news: ರಾಜ್ಯ ಆರೋಗ್ಯ ಇಲಾಖೆಗೆ ಭರ್ಜರಿ ಸರ್ಜರಿ – ಶಿವಮೊಗ್ಗ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲೂ ಮಹತ್ವದ ಬದಲಾವಣೆ..! ರಾಜ್ಯ Shivamogga :ಪ್ರಭಾವಿಗಳಿಂದಲೇ ಕೆರೆ ಒತ್ತುವರಿ ತೆರವು ಆರಂಭಿಸಿ ಅಧಿಕಾರಿಗಳಿಗೆ ಖಂಡ್ರೆ ಖಡಕ್ ಆದೇಶ..!ಕುಡಿಯುವ ನೀರಿಗೆ ₹67 ಸಾವಿರ ಕೋಟಿ | ರಾಜ್ಯದಲ್ಲಿ 1,000 ಬಸ್ ನಿಲ್ದಾಣಗಳ ನಿರ್ಮಾಣಕ್ಕೆ ಯೋಜನೆ..! 24 ಗಂಟೆಯಲ್ಲಿ ನೀರಿನ ಸಮಸ್ಯೆಗೆ ಸ್ಪಂದಿಸದಿದ್ದರೆ ಶಿಸ್ತುಕ್ರಮ..! ರಾಜ್ಯ Big news :ಶಿವಮೊಗ್ಗ ದಸರಾ ಮೆರವಣಿಗೆಯಲ್ಲಿ ಆನೆ ರಂಪಾಟ: ಅರಣ್ಯ ಇಲಾಖೆಗೆ ಸಚಿವ ರಾಮಲಿಂಗಾ ರೆಡ್ಡಿ ಖಡಕ್ ಸೂಚನೆ..! ಶಿವಮೊಗ್ಗ ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ರಾಜ್ಯ ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್…! ರಾಜ್ಯ ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗ ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! ರಾಜ್ಯ Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ…?! ಡಾ. ಮೈತ್ರಿ ಹೆಚ್ ಪಿ,.ಎಸ್ ವರ್ಗಾವಣೆ ಎಲ್ಲಿಗೆ..?! ಕುತೂಹಲ ಮೂಡಿಸಿದ ವರ್ಗಾವಣೆ ಪ್ರಕರಣ..!
ರಾಜ್ಯ

Big news: ರಾಜ್ಯ ಆರೋಗ್ಯ ಇಲಾಖೆಗೆ ಭರ್ಜರಿ ಸರ್ಜರಿ – ಶಿವಮೊಗ್ಗ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲೂ ಮಹತ್ವದ ಬದಲಾವಣೆ..!

ಶಿವಮೊಗ್ಗ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲೂ ಮಹತ್ವದ ಬದಲಾವಣೆ..! ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಮಹತ್ವದ ಆಡಳಿತಾತ್ಮಕ ಬದಲಾವಣೆಗಳಿಗೆ ಸರ್ಕಾರ ಮುಂದಾಗಿದ್ದು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ವೈದ್ಯಾಧಿಕಾರಿಗಳು ಹಾಗೂ ಆರೋಗ್ಯ ಇಲಾಖೆಯ ಹಿರಿಯ…

ಶಿವಮೊಗ್ಗ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲೂ ಮಹತ್ವದ ಬದಲಾವಣೆ..!

ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಮಹತ್ವದ ಆಡಳಿತಾತ್ಮಕ ಬದಲಾವಣೆಗಳಿಗೆ ಸರ್ಕಾರ ಮುಂದಾಗಿದ್ದು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ವೈದ್ಯಾಧಿಕಾರಿಗಳು ಹಾಗೂ ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ.ಅಕ್ಟೋಬರ್ 28, 2026ರಂದು ರಾಜ್ಯ ಸರ್ಕಾರ ಹೊರಡಿಸಿರುವ ಅಧಿಕೃತ ಅಧಿಸೂಚನೆಯ ಪ್ರಕಾರ, ಆಡಳಿತಾತ್ಮಕ ಹಾಗೂ ಸಾರ್ವಜನಿಕ ಹಿತದೃಷ್ಟಿಯಿಂದ ಹಲವು ವೈದ್ಯಾಧಿಕಾರಿಗಳಿಗೆ ಹೊಸ ಹುದ್ದೆ ಮತ್ತು ಕರ್ತವ್ಯ ಸ್ಥಳಗಳನ್ನು ನಿಗದಿಪಡಿಸಲಾಗಿದೆ.ಈ ವರ್ಗಾವಣೆ ಪ್ರಕ್ರಿಯೆಯಲ್ಲಿ ಶಿವಮೊಗ್ಗ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯೂ ಸೇರಿದ್ದು, ಜಿಲ್ಲೆಯ ಪ್ರಮುಖ ಆರೋಗ್ಯಾಧಿಕಾರಿಗಳ ಹುದ್ದೆಗಳಲ್ಲಿ ಬದಲಾವಣೆಗೆ ಆದೇಶಿಸಲಾಗಿದೆ.

ಶಿವಮೊಗ್ಗ ಜಿಲ್ಲಾ ಆರೋಗ್ಯಾಧಿಕಾರಿ ಹುದ್ದೆಗೆ ಹೊಸ ನೇಮಕ..!

ಶಿವಮೊಗ್ಗ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಹುದ್ದೆಗೆ ಡಾ. ಕೆ.ಪಿ. ಕಾಂತರಾಜು ಅವರನ್ನು ನಿಯೋಜಿಸಿರುವುದು ವರ್ಗಾವಣೆ ಆದೇಶದಲ್ಲಿನ ಪ್ರಮುಖ ಬೆಳವಣಿಗೆಯಾಗಿದೆ.

ಹಾಸನ ಜಿಲ್ಲೆಯ ಹೊಳೆನರಸೀಪುರ ಸಾರ್ವಜನಿಕ ಆಸ್ಪತ್ರೆಯಲ್ಲಿ ನೇತ್ರ ತಜ್ಞರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಡಾ. ಕೆ.ಪಿ. ಕಾಂತರಾಜ್ ಅವರನ್ನು ಶಿವಮೊಗ್ಗ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಹುದ್ದೆಗೆ, ಡಾ. ನಟರಾಜ್ ಅವರ ಸ್ಥಾನಕ್ಕೆ ನಿಯೋಜಿಸಲಾಗಿದೆ.

.ಶಿವಮೊಗ್ಗ ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಹುದ್ದೆಯಲ್ಲೂ ಬದಲಾವಣೆ..!

ಶಿವಮೊಗ್ಗ ಜಿಲ್ಲೆಯ ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಹುದ್ದೆಗೂ ವರ್ಗಾವಣೆ ಆದೇಶದಲ್ಲಿ ಹೊಸ ನಿಯೋಜನೆ ಮಾಡಲಾಗಿದೆ.ತುಮಕೂರು ಜಿಲ್ಲೆಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಹಿರಿಯ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಡಾ. ಮಂಜುನಾಥ ನಾಗಲೇಕರ್ ಅವರನ್ನು ಶಿವಮೊಗ್ಗ ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ (DFWO) ಹುದ್ದೆಗೆ ನಿಯೋಜಿಸಲಾಗಿದೆ.ಈ ಹುದ್ದೆಯಲ್ಲಿ ಡಾ. ವೆಂಕಟೇಶ್ ಅವರು ಕಾರ್ಯನಿರ್ವಹಿಸುತ್ತಿದ್ದ ಸ್ಥಾನಕ್ಕೆ ಹೊಸ ನಿಯೋಜನೆ ಮಾಡಿರುವುದಾಗಿ ಆದೇಶದಲ್ಲಿ ಉಲ್ಲೇಖಿಸಲಾಗಿದೆ.

ರಾಜ್ಯಾದ್ಯಂತ ಆರೋಗ್ಯ ಇಲಾಖೆಯಲ್ಲಿ ವ್ಯಾಪಕ ಬದಲಾವಣೆರಾಜ್ಯ ಸರ್ಕಾರದ ಈ ವರ್ಗಾವಣೆ ಆದೇಶವು ಶಿವಮೊಗ್ಗ ಜಿಲ್ಲೆಗೆ ಮಾತ್ರ ಸೀಮಿತವಾಗಿಲ್ಲ.ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು, ಜಿಲ್ಲಾ ಶಸ್ತ್ರಚಿಕಿತ್ಸಕರು, ಜಿಲ್ಲಾ ಕುಷ್ಠರೋಗ ನಿಯಂತ್ರಣಾಧಿಕಾರಿಗಳು, ಸಂತಾನೋತ್ಪತ್ತಿ ಮತ್ತು ಮಕ್ಕಳ ಆರೋಗ್ಯಾಧಿಕಾರಿಗಳು, ತಾಲೂಕು ಆರೋಗ್ಯಾಧಿಕಾರಿಗಳು ಸೇರಿದಂತೆ ವಿವಿಧ ಹಂತಗಳ ಅಧಿಕಾರಿಗಳ ವರ್ಗಾವಣೆ ಹಾಗೂ ನಿಯೋಜನೆಗೆ ಆದೇಶಿಸಲಾಗಿದೆ.

ರಘುರಾಜ್ ಹೆಚ್. ಕೆ… 9449553305..

EDITOR NEWS WARRIORS