Home ರಾಜ್ಯದಾವಣಗೆರೆ: ಜಪ್ತಿ ಮಾಡಲಾದ ಪಡಿತರ ಅಕ್ಕಿ, ರಾಗಿ ಬಹಿರಂಗ ಹರಾಜು…!

ದಾವಣಗೆರೆ: ಜಪ್ತಿ ಮಾಡಲಾದ ಪಡಿತರ ಅಕ್ಕಿ, ರಾಗಿ ಬಹಿರಂಗ ಹರಾಜು…!

by EDITOR NEWS WARRIORS
0 comments

ದಾವಣಗೆರೆ: ದಾವಣಗೆರೆ ತಾಲ್ಲೂಕಿನ ಅನೌಪಚಾರಿಕ ಪಡಿತರ ಪ್ರದೇಶದಲ್ಲಿ ವಿವಿಧೆಡೆ ಅಕ್ರಮವಾಗಿ ಸಂಗ್ರಹಿಸಿಟ್ಟುಕೊಳ್ಳಲಾಗಿದ್ದ ಪಡಿತರ ಅಕ್ಕಿ, ರಾಗಿ ಹಾಗೂ ಭತ್ತವನ್ನು ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ ಸಹಾಯಕ ನಿರ್ದೇಶಕರು ಪತ್ತೆ ಮಾಡಿ, ಜಪ್ತಿ ಮಾಡಿಕೊಂಡಿದ್ದು, ಈ ಧಾನ್ಯವನ್ನು ಜ. 06 ಹಾಗೂ ಜ. 11 ರಂದು ಬೆ. 10.30 ಕ್ಕೆ ದಾವಣಗೆರೆಯ ಎಪಿಎಂಸಿ ಆವರಣದಲ್ಲಿನ ಕೆಎಸ್‍ಸಿಎಫ್‍ಸಿ ಬಹಿರಂಗ ಹರಾಜು ಹಾಕಲಾಗುವುದು.

ಸಗಟು ಮಳಿಗೆ 2 ರಲ್ಲಿ ಬಹಿರಂಗ ಹರಾಜು ಮಾಡಲಾಗುತ್ತಿದ್ದು, ಆಸಕ್ತರು ಹರಾಜು ಪ್ರಕ್ರಿಯೆಯಲ್ಲಿ ಭಾಗವಹಿಸುವಂತೆ ಸೂಚನೆ ನೀಡಲಾಗಿದೆ.ದಾವಣಗೆರೆ ಅನೌಪಚಾರಿಕ ಪಡಿತರ ಪ್ರದೇಶದ ಜಿಲ್ಲಾ ಪಂಚಾಯತ್ ಕಚೇರಿ ಮುಂಭಾಗದ ರಸ್ತೆಯಲ್ಲಿ ಕಳೆದ ಜು.27 ರಂದು ಹರಿಹರದಿಂದ ಚಿತ್ರದುರ್ಗ ಕಡೆಗೆ ಸಾಗುತ್ತಿದ್ದ ಅಶೋಕ ಲೈಲ್ಯಾಂಡ್ ವಿಕೋಮೇಟ್ 2 ಲಾರಿಗಳಲ್ಲಿ ಅಕ್ರಮವಾಗಿ ಸಂಗ್ರಹಿಸಲಾಗಿದ್ದ 363.65 ಕ್ವಿಂ. ಅಕ್ಕಿ ಹಾಗೂ 11.05 ಕ್ವಿಂ. ಭತ್ತ ಪತ್ತೆಹಚ್ಚಿ ಜಪ್ತಿ ಮಾಡಿಕೊಳ್ಳಲಾಗಿತ್ತು.

ಕಳೆದ ಸೆ. 24 ರಂದು ದಾವಣಗೆರೆಯಿಂದ ಚಿತ್ರದುರ್ಗ ಕಡೆ ಶ್ಯಾಮನೂರು ಸರ್ವಿಸ್ ರಸ್ತೆ ಮೂಲಕ ಸಾಗುತ್ತಿದ್ದ ಅಶೋಕ್ ಲೈಲ್ಯಾಂಡ್ ಲಾರಿಯಲ್ಲಿ 216.30 ಕ್ವಿಂ. ರಾಗಿಯನ್ನು ಆಹಾರ ಇಲಾಖೆ ಅಧಿಕಾರಿಗಳು ಪತ್ತೆ ಮಾಡಿ, ಜಪ್ತಿ ಮಾಡಿಕೊಂಡಿದ್ದರು. ಜಪ್ತಿ ಮಾಡಿಕೊಳ್ಳಲಾಗಿರುವ ಅಕ್ಕಿ, ಭತ್ತ ಮತ್ತು ರಾಗಿಯನ್ನು ಜಿಲ್ಲಾಧಿಕಾರಿಗಳ ನಿರ್ದೇಶನದಂತೆ ಜ.06 ರಂದು ಬೆಳಿಗ್ಗೆ 10.30ಕ್ಕೆ ದಾವಣಗೆರೆಯ ಎಪಿಎಂಸಿ ಆವರಣದಲ್ಲಿನ ಕೆಎಸ್‍ಸಿಎಫ್‍ಸಿ ಸಗಟು ಮಳಿಗೆ 2 ರಲ್ಲಿ ಬಹಿರಂಗ ಹರಾಜು ಮಾಡಲಾಗುವುದು, ಆಸಕ್ತರು ಹರಾಜು ಪ್ರಕ್ರಿಯೆಯಲ್ಲಿ ಭಾಗವಹಿಸುವಂತೆ ಸೂಚನೆ ನೀಡಲಾಗಿದೆ.

ಅದೇ ರೀತಿ ಕಳೆದ ಅಕ್ಟೋಬರ್ 11 ರಂದು ದಾವಣಗೆರೆಯಿಂದ ಚಿತ್ರದುರ್ಗ ಕಡೆಗೆ ಸಾಗುತ್ತಿದ್ದ ಲಾರಿಯಲ್ಲಿ ಸಂಗ್ರಹಿಸಲಾಗಿದ್ದ 239.60 ಕ್ವಿಂ. ಅಕ್ಕಿ. ಹಾಗೂ ಕಳೆದ ಅಕ್ಟೋಬರ್ 20 ರಂದು ಇದೇ ಮಾರ್ಗದಲ್ಲಿ ಸಾಗುತ್ತಿದ್ದ ಲಾರಿಯಲ್ಲಿ ಸಂಗ್ರಹಿಸಲಾಗಿದ್ದ 231.50 ಕ್ವಿಂ. ಅಕ್ಕಿಯನ್ನು ಆಹಾರ ಇಲಾಖೆ ಅಧಿಕಾರಿಗಳು ಪತ್ತೆ ಮಾಡಿ, ಜಪ್ತಿ ಮಾಡಿಕೊಂಡಿದ್ದರು. ಜಪ್ತಿ ಮಾಡಿಕೊಳ್ಳಲಾಗಿರುವ ಅಕ್ಕಿ, ಭತ್ತ ಮತ್ತು ರಾಗಿಯನ್ನು ಜಿಲ್ಲಾಧಿಕಾರಿಗಳ ನಿರ್ದೇಶನದಂತೆ ಜ.11 ರಂದು ಬೆಳಿಗ್ಗೆ 10.30ಕ್ಕೆ ಆಸಕ್ತರು ಹರಾಜು ಪ್ರಕ್ರಿಯೆಯಲ್ಲಿ ಭಾಗವಹಿಸುವಂತೆ ಸೂಚನೆ ನೀಡಲಾಗಿದೆ.

ಹರಾಜಿನಲ್ಲಿ ಭಾಗವಹಿಸುವ ಬಿಡ್ಡುದಾರರು ಎಪಿಎಂಸಿ ಟ್ರೇಡ್ ಲೈಸೆನ್ಸ್‍ನೊಂದಿಗೆ ಹಾಜರಾಗಬೇಕು. ಬಿಡ್ಡುದಾರರು ಹರಾಜು ದಿನ ಒಂದು ಗಂಟೆ ಮುಂಚೆ ಬಂದು ಶೇ. 10 ರಷ್ಟು ಮೊಬಲಗನ್ನು ಮುಂಗಡ ಠೇವಣಿಯಾಗಿ ಇಡಬೇಕು. ತಪ್ಪಿದಲ್ಲಿ ಅಂತಹವರಿಗೆ ಹರಾಜಿನಲ್ಲಿ ಭಾಗವಹಿಸಲು ಅವಕಾಶವಿಲ್ಲ. ಹೆಚ್ಚಿನ ಮಾಹಿತಿಯನ್ನು ಆಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಿಂದ ಪಡೆಯಬಹುದು ಎಂದು ಪ್ರಕಟಣೆ ತಿಳಿಸಿದೆ.

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ:9449553305

Related Articles

Leave a Comment

Latest news
Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?!