Home ಶಿವಮೊಗ್ಗಆರೋಗ್ಯನಕಲಿ ವೈದ್ಯನಿಗೆ ಶಿಕ್ಷೆ ವಿಧಿಸಿದ ನ್ಯಾಯಾಲಯ..!

ನಕಲಿ ವೈದ್ಯನಿಗೆ ಶಿಕ್ಷೆ ವಿಧಿಸಿದ ನ್ಯಾಯಾಲಯ..!

by EDITOR NEWS WARRIORS
0 comments



ಶಿವಮೊಗ್ಗ: ನಕಲಿ ಪರವಾನಿಗೆಯನ್ನು ಸೃಷ್ಟಿಸಿಕೊಂಡು ವೈದ್ಯ ವೃತ್ತಿ ಮಾಡುತ್ತಿದ್ದ ಆರೋಪಿ ಹಕೀಂ ಅಲಿಯಾಸ್ ಡಾ.ಅಮೀರ್ ಜಾನ್‍ಗೆ 2ನೇ ಜೆಎಂಎಫ್‍ಸಿ ನ್ಯಾಯಾಲಯ ಒಟ್ಟು 03 ವರ್ಷ ಕಾರಾಗೃಹವಾಸ ಸಜೆ ಮತ್ತು ರೂ.15 ಸಾವಿರ ದಂಡ ವಿಧಿಸಿ ತೀರ್ಪು ನೀಡಿದೆ.


ಶಿವಮೊಗ್ಗ ನಗರದ ವಸತಿಗೃಹವೊಂದರಲ್ಲಿ ಬೋರ್ಡ್ ಹಾಕಿಕೊಂಡು ನಕಲಿ ದಾಖಲೆಗಳನ್ನು ಸೃಷ್ಟಿಸಿ ವೈದ್ಯನೆಂದು ಹೇಳಿಕೊಂಡು ಕಲಂ ನಂ-12 ರಲ್ಲಿ ವೈದ್ಯ ವೃತ್ತಿ ನಡೆಸುತ್ತಿದ್ದು, ಸಾಕ್ಷಿಗಳೊಂದಿಗೆ ದಾಳಿ ನಡೆಸಿ ನಕಲಿ ವೈದ್ಯ ವೃತ್ತಿಗೆ ಬಳಸಿದ ಔಷಧಿಗಳು, ಬೋರ್ಡ್, ಇತರೆ ವಸ್ತುಗಳನ್ನು ವಶಪಡಿಸಿಕೊಂಡು ಭಾರತ ದಂಡ ಸಂಹಿತೆಯ ಕಲಂ 465, 420 ರೀತ್ಯಾ ಆರೋಪವೆಸಗಿದ್ದಾನೆ ಎಂದು ದೊಡ್ಡಪೇಟೆ ಪೊಲೀಸರು ಪ್ರಕರಣ ದಾಖಲಿಸಿ, ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.

ವೈದ್ಯನಿಗೆ ಶಿಕ್ಷೆ ವಿಧಿಸಿದ ನ್ಯಾಯಾಲಯ:


ಪ್ರಕರಣವನ್ನು ಶಿವಮೊಗ್ಗ ಮಾನ್ಯ 2ನೇ ಜೆಎಂಎಫ್‍ಸಿ ನ್ಯಾಯಾಲಯದಲ್ಲಿ ವಿಚಾರಣೆ ನಡೆಸಿ, ಆರೋಪಿಗೆ ನ್ಯಾಯಾಧೀಶರಾದ ಎಸ್.ಆರ್.ಸನ್ಮತಿ ಇವರು ಐಪಿಸಿ ಕಲಂ 465 ಅಪರಾಧಕ್ಕೆ 1 ವರ್ಷ ಕಾರಾಗೃಹವಾಸ ಸಜೆ ಮತ್ತು ರೂ. 5 ಸಾವಿರ ದಂಡ ಹಾಗೂ ಕಲಂ 420 ಅಪರಾಧಕ್ಕೆ 02 ವರ್ಷಗಳ ಕಾರಾಗೃಹ ವಾಸ ಸಜೆ ಮತ್ತು ರೂ.10 ಸಾವಿರ ದಂಡ ವಿಧಿಸಿ ಜ.25 ರಂದು ತೀರ್ಪು ನೀಡಿರುತ್ತಾರೆ. ಸರ್ಕಾರದ ಪರವಾಗಿ ಸಹಾಯಕ ಸರ್ಕಾರಿ ಅಭಿಯೋಜಕ ಜಿ.ಕೆ.ಕಿರಣ್‍ಕುಮಾರ್ ಪ್ರಕರಣದ ವಿಚಾರಣೆ ನಡೆಸಿ ವಾದ ಮಂಡಿಸಿದ್ದರು. (ಮಾಹಿತಿ ಕರ್ನಾಟಕ ವಾರ್ತೆ)


ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ:9449553305

Related Articles

Leave a Comment

Latest news
ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...