Home ಶಿವಮೊಗ್ಗಶ್ರೀ ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮಿಗಳು ಶ್ರೀ ಕ್ಷೇತ್ರ ಹೊಂಬುಜ, ಇವರ ಆಶೀರ್ವಾದದೊಂದಿಗೆ ಗೃಹ ಸಚಿವರ ಸಮ್ಮುಖದಲ್ಲಿ ಹೊನ್ನೆತಾಳು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ನೂತನ ವರ್ಷದ ಕ್ಯಾಲೆಂಡರ್ ಅನ್ನು ಬಿಡುಗಡೆಗೊಳಿಸಲಾಯಿತು…!

ಶ್ರೀ ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮಿಗಳು ಶ್ರೀ ಕ್ಷೇತ್ರ ಹೊಂಬುಜ, ಇವರ ಆಶೀರ್ವಾದದೊಂದಿಗೆ ಗೃಹ ಸಚಿವರ ಸಮ್ಮುಖದಲ್ಲಿ ಹೊನ್ನೆತಾಳು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ನೂತನ ವರ್ಷದ ಕ್ಯಾಲೆಂಡರ್ ಅನ್ನು ಬಿಡುಗಡೆಗೊಳಿಸಲಾಯಿತು…!

by EDITOR NEWS WARRIORS
0 comments

ತೀರ್ಥಹಳ್ಳಿ : ತಾಲೂಕಿನ ಹೊನ್ನೆತಾಳು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನೂತನ ವರ್ಷದ ಕ್ಯಾಲೆಂಡರ್ ಪೋಷಕರಿಗೆ ವಿತರಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಾಬಳ ಸಚೀಂದ್ರ ಹೆಗ್ಡೆ ಪ್ರಗತಿಪರ ಕೃಷಿಕರು,ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷರು ಹೊನ್ನೆತಾಳು ಇವರು ಶಾಲೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಶಾಲೆಯ ವಿನೂತನ ಚಟುವಟಿಕೆಗಳಿಗೆ ಸಹಾಯ ನೀಡುವುದಾಗಿ ತಿಳಿಸಿದರು.


ಎ.ಪಿ.ಎಂ.ಸಿ ತೀರ್ಥಹಳ್ಳಿ ನಿರ್ದೇಶಕರಾದ ಹಸಿರುಮನೆ ಮಹಾಬಲೇಶ್ ಇವರು ನಮ್ಮ ಶಾಲೆಯ ಪರಿಸರದ ಬಗ್ಗೆ ಸಂತಸ ವ್ಯಕ್ತಪಡಿಸಿ ಶಾಲೆಯ ಚಟುವಟಿಕೆಯ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸಿ ಶಾಲೆಯ ಯಾವುದೇ ಶೈಕ್ಷಣಿಕ ಚಟುವಟಿಕೆಗೆ ನೆರವಿನ ಕೊರತೆಗೆ ತೊಂದರೆಯಾಗದಂತೆ ನಮ್ಮ ಸಹಕಾರ ಎಂದಿಗೂ ಇರುತ್ತದೆಂದು ತಿಳಿಸಿದರು.


ಕಾಂತೇಶ್ ಮ್ಯಾನೇಜರ್ ಕೆನರಾ ಬ್ಯಾಂಕ್ ಆಗುಂಬೆ ಇವರು ಮಾತನಾಡಿ ಪ್ರತಿ ವರ್ಷ SC, ST ಮಕ್ಕಳಿಗೆ ವಿದ್ಯಾರ್ಥಿ ವೇತನ ನೀಡುವುದಾಗಿ ತಿಳಿಸಿದರು.


ಹೊನ್ನೇತಾಳು ಗ್ರಾಮ ಪಂಚಾಯತ್ ಸದಸ್ಯರಾದ ರಾಘವೇಂದ್ರ ಕುಂದಾದ್ರಿ ಇವರು ಮಾತನಾಡಿ ಪೋಷಕರು ತಮ್ಮ ಅಕ್ಕ ಪಕ್ಕದ ಮಕ್ಕಳನ್ನು ನಮ್ಮ ಶಾಲೆಗೆ ಸೇರಿಸಲು ಪ್ರೇರೇಪಿಸಬೇಕು ಎಂದು ತಿಳಿಸಿದರು.


.ಈ ಸಂದರ್ಭದಲ್ಲಿ ಶಾಲಾ ಶಿಕ್ಷಕರು ಮತ್ತು ಎಸ್ ಡಿ ಎಂ ಸಿ ಅಧ್ಯಕ್ಷರು,ಉಪಾಧ್ಯಕ್ಷರು, ಹಾಗೂ ಪೋಷಕರು ಮತ್ತು ಪ್ರೀತಿಯ ವಿದ್ಯಾರ್ಥಿಗಳು ಹಾಜರಿದ್ದರು.

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ:9449553305….

Related Articles

Leave a Comment

Latest news
Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ...?! ಡಾ. ಮೈತ್ರಿ... Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..!