Home ಶಿವಮೊಗ್ಗಶಿವಮೊಗ್ಗದ ಯುವಕ ಹರ್ಷ ಹತ್ಯೆಗೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಿದ ಪೊಲೀಸರು..! ಶಿವಮೊಗ್ಗದ ಪ್ರಸ್ತುತ ಪರಿಸ್ಥಿತಿ ಬಗ್ಗೆ ಎಡಿಜಿಪಿ ಮುರುಗನ್ ಹೇಳಿದ್ದೇನು?

ಶಿವಮೊಗ್ಗದ ಯುವಕ ಹರ್ಷ ಹತ್ಯೆಗೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಿದ ಪೊಲೀಸರು..! ಶಿವಮೊಗ್ಗದ ಪ್ರಸ್ತುತ ಪರಿಸ್ಥಿತಿ ಬಗ್ಗೆ ಎಡಿಜಿಪಿ ಮುರುಗನ್ ಹೇಳಿದ್ದೇನು?

by EDITOR NEWS WARRIORS
0 comments

ಶಿವಮೊಗ್ಗ: ನಗರದಲ್ಲಿ ನಿನ್ನೆ ನಡೆದ ಹರ್ಷ ಎಂಬ ಬಜರಂಗದಳದ ಯುವಕನ ಹತ್ಯೆಗೆ ಸಂಬಂಧಿಸಿದಂತೆ. ಶಿವಮೊಗ್ಗ ನಗರದಾದ್ಯಂತ ಬಿಗಿ ವಾತಾವರಣ ನಿರ್ಮಾಣಗೊಂಡಿದ್ದು. ಅಲ್ಲಲ್ಲಿ ಸಣ್ಣಪುಟ್ಟ ಗಲಾಟೆಗಳು ನಡೆದಿವೆ. ಟೈರ್ ಸುಟ್ಟು ಬೆಂಕಿ ಹಾಕಿರುವ ಘಟನೆಗಳು ಜರುಗಿವೆ.

ಇಬ್ಬರು ಪತ್ರಕರ್ತರಿಗೆ ತಲೆಗೆ ತೀವ್ರ ಪೆಟ್ಟು:

ಗಲಾಟೆ ದೃಶ್ಯಗಳನ್ನು ಸೆರೆ ಹಿಡಿಯಲು ಹೋದ ಇಬ್ಬರು ಪತ್ರಿಕಾ ಛಾಯಾಗ್ರಾಹಕರಿಗೆ ತಲೆಗೆ ತೀವ್ರ ಪೆಟ್ಟು ಬಿದ್ದಿದ್ದು ಆಸ್ಪತ್ರೆಗೆ ಸೇರಿಸಲಾಗಿದೆ.

ಸ್ಥಳದಲ್ಲೇ ಮೊಕ್ಕಾಂ ಹೂಡಿ ಪರಿಸ್ಥಿತಿ ಅವಲೋಕಿಸಿ ತಿರುವ ಎಡಿಜಿಪಿ ಮುರುಗನ್:

ಘಟನೆ ತೀವ್ರ ಸ್ವರೂಪ ಪಡೆದುಕೊಳ್ಳುವ ವಿಷಯ ತಿಳಿದಂತೆ ಶಿವಮೊಗ್ಗಕ್ಕೆ ತೆರಳಿ ಮೊಕ್ಕಾಂ ಹೂಡಿ ಪರಿಸ್ಥಿತಿಯನ್ನು ಅವಲೋಕಿಸುತಿರುವ ಮುರುಗನ್ ಅವರು ಪತ್ರಿಕೆ ಜೊತೆ ಮಾತನಾಡಿ ,

ಪೊಲೀಸರು ಹಾಗೂ ಜಿಲ್ಲಾಡಳಿತ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ. ಕೆಲವೊಂದು ಕಡೆ ಸಣ್ಣಪುಟ್ಟ ಘಟನೆಗಳಾಗಿವೆ. ಆ ಸ್ಥಳಗಳಲ್ಲಿ ಬಿಗಿ ಕ್ರಮ ಕೈಗೊಳ್ಳಲಾಗಿದೆ. ಈ ಪ್ರಕರಣದಲ್ಲಿ ಭಾಗಿಯಾಗಿರುವವರ ವಿರುದ್ಧ ಕಾನೂನು ರೀತಿ ಕ್ರಮ ತೆಗೆದುಕೊಳ್ಳುತ್ತೇವೆ ಎಂದರು.

ಹರ್ಷ ಅವರ ಪಾರ್ಥಿವ ಶರೀರದ ಮೆರವಣಿಗೆ ಸಂದರ್ಭದಲ್ಲಿ ಕಲ್ಲುತೂರಾಟ ನಡೆಸಿ ಆಸ್ತಿಪಾಸ್ತಿಗೆ ಧಕ್ಕೆ ಮಾಡಿದವರು ಯಾರೇ ಆದರೂ ಅವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು.

ನಗರದಲ್ಲಿ ಶಾಂತಿ ಕಾಪಾಡಿ ಎಡಿಜಿಪಿ ಮುರುಗನ್ ಮನವಿ:

ಇದೇ ವೇಳೆ ಎಡಿಜಿಪಿ ಮುರುಗನ್ ಅವರು ಸಾರ್ವಜನಿಕರಲ್ಲಿ ಶಾಂತಿ ಕಾಪಾಡುವಂತೆ ಮನವಿ ಮಾಡಿಕೊಂಡಿದ್ದಾರೆ. ನಿಮ್ಮ ನಗರಕ್ಕೆ ಬೆಂಕಿ ಹಚ್ಚಬೇಡಿ. ಆಸ್ತಿಪಾಸ್ತಿ ಹಾಳುಮಾಡಿಕೊಳ್ಳುವುದು ಬೇಡ ನಾವು ನಿಮ್ಮ ಜತೆ ಇರುತ್ತೇವೆ ಯಾರು ಗಾಬರಿಯಾಗುವ ಅವಶ್ಯಕತೆ ಇಲ್ಲ ಎಂದು ಅವರು ತಿಳಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ವಶಕ್ಕೆ:

ಭಜರಂಗದಳ ಕಾರ್ಯಕರ್ತ ಹರ್ಷ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ ಪೊಲೀಸರು ತನಿಖೆ ಕೈಗೊಂಡು ಇಬ್ಬರನ್ನು ಬಂಧಿಸಿ ಮೂವರನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದ್ದಾರೆ.ಇದುವರೆಗಿನ ತನಿಖೆ ಪ್ರಕಾರ, ಕೊಲೆಗೆ ಹಳೆಯ ದ್ವೇಷವೇ ಕಾರಣ ಎಂದು ಕಂಡುಬರುತ್ತಿದೆ ಎಂದು ಪೊಲೀಸ್ ಮಾಹಿತಿಗಳಿಂದ ತಿಳಿದು ಬರುತ್ತಿದ್ದು. ಉನ್ನತ ತನಿಖೆಯಿಂದಷ್ಟೇ ಸತ್ಯ ಬಹಿರಂಗವಾಗ ಬೇಕಾಗಿದೆ.

ಶಿವಮೊಗ್ಗದ ಒಂದು ಪೊಲೀಸ್ ತಂಡ ಬೆಂಗಳೂರಿಗೆ ಹೋಗಿದ್ದು, ಸ್ಥಳೀಯ ಪೊಲೀಸರ ನೆರವಿನಿಂದ ಜೆಜೆ ನಗರದಲ್ಲಿ ಶಂಕಿತ ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಒಂದು ತಂಡ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲ್ಲೂಕಿಗೆ ಹೋಗಿದ್ದು, ಅಲ್ಲಿನ ಬಳ್ಳಾರಿ ಕ್ಯಾಂಪ್‍ನಲ್ಲಿ ಅಡಗಿ ಕುಳಿತಿದ್ದ ಆರೋಪಿಯೊಬ್ಬನನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದ್ದು, ಉಳಿದ ಆರೋಪಿಗಳಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.

ಒಟ್ಟಾರೆಯಾಗಿ ಶಿವಮೊಗ್ಗದ ಪ್ರಸ್ತುತ ಪರಿಸ್ಥಿತಿ ಅಲ್ಲಲ್ಲಿ ಸಣ್ಣಪುಟ್ಟ ಗಲಾಟೆಗಳು ಆಗುತ್ತಿದ್ದರು ಕೂಡ ತೀವ್ರ ಸ್ವರೂಪವನ್ನು ಪಡೆದುಕೊಂಡಿಲ್ಲ.

ಪೊಲೀಸ್ ಇಲಾಖೆ ಎಲ್ಲಾ ತರದ ಮುಂಜಾಗ್ರತೆ ಕ್ರಮಗಳನ್ನು ತೆಗೆದುಕೊಂಡು ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತೆಗೆದುಕೊಳ್ಳುತ್ತಿದೆ.

#####################################

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ:9449553305…

Related Articles

Leave a Comment

Latest news
ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್...! ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ...?! ಡಾ. ಮೈತ್ರಿ... Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ...