Home ಅಂತಾರಾಷ್ಟ್ರೀಯತೀರ್ಥಹಳ್ಳಿ ತಾಲ್ಲೂಕು ಆರೋಗ್ಯ ಇಲಾಖಾ ನೌಕರರ ಸಂಘದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಯಶಸ್ವಿಯಾಗಿ ಆಚರಿಸಲಾಯಿತು..!!

ತೀರ್ಥಹಳ್ಳಿ ತಾಲ್ಲೂಕು ಆರೋಗ್ಯ ಇಲಾಖಾ ನೌಕರರ ಸಂಘದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಯಶಸ್ವಿಯಾಗಿ ಆಚರಿಸಲಾಯಿತು..!!

by EDITOR NEWS WARRIORS
0 comments

ತೀರ್ಥಹಳ್ಳಿ: ಇಂದು ಅಂತರಾಷ್ಟ್ರೀಯ ಮಹಿಳೆಯರ ದಿನಾಚರಣೆ ಇದರ ಪ್ರಯುಕ್ತ ತೀರ್ಥಹಳ್ಳಿಯಲ್ಲಿ ತಾಲೂಕು ಆರೋಗ್ಯ ಇಲಾಖೆ ನೌಕರರ ಸಂಘದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಯಶಸ್ವಿಯಾಗಿ ಆಚರಿಸಲಾಯಿತು.

ಸಂದರ್ಭದಲ್ಲಿ ಪ್ರಾಸ್ತಾವಿಕ ಮಹಿಳೆಯರ ದಿನಾಚರಣೆ ಉದ್ದೇಶಿಸಿ ಪ್ರಾಸ್ತಾವಿಕ ನುಡಿಗಳನ್ನಾಡಿದ ತಾಲ್ಲೂಕು ಸರ್ಕಾರಿ ನೌಕರರ ಸಂಘ ಹಾಗೂ ಆರೋಗ್ಯ ಇಲಾಖಾ ನೌಕರರ ಸಂಘದ ಅಧ್ಯಕ್ಷ ಟಿ ವಿ ಸತೀಶ, ಮಹಿಳೆಯ ಹಕ್ಕು ಮತ್ತು ಸ್ವಾತಂತ್ರ್ಯದ ಬಗ್ಗೆ ಜಾಗೃತಿ ಮೂಡಿಸುವ ದಿಸೆಯಲ್ಲಿ1911 ರ ಮಾರ್ಚ್ 8 ರಂದು ಕ್ಲಾರಾ ಜೆಟ್ ಕಿನ್ ಎಂಬ ದಿಟ್ಟ ಮಹಿಳೆಯಿಂದಾಗಿ ಆರಂಭಗೊಂಡ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ಇಂದು ವಿಶ್ವದಾದ್ಯಂತ ಆಚರಿಸಲ್ಪಡುತ್ತಿದೆ. ವಿವಿಧ ಒತ್ತಡಗಳ ನಡುವೆಯೂ ಕುಟುಂಬ ಮಾತ್ರವಲ್ಲ ವಿವಿಧ ಕ್ಷೇತ್ರಗಳಲ್ಲಿನ ಜವಬ್ದಾರಿಗಳನ್ನು ಯಶಸ್ವಿಯಾಗಿ ನಿರ್ವಹಿಸುವ ಮೂಲಕ ಕುಟುಂಬ ಹಾಗೂ ಸಾಮಾಜಿಕ ಸ್ವಾಸ್ಥ್ಯವನ್ನು ಕಾಪಾಡಲು ಶ್ರಮಿಸುತ್ತಿರುವ ಸಹೃದಯಿ ಮಹಿಳೆಯರಿಗೆ ಒಂದು ಪುಟ್ಟ ಧನ್ಯವಾದಗಳನ್ನು ಹೇಳುವುದು ನಮ್ಮ ಕರ್ತವ್ಯ ಆ ದಿಸೆಯಲ್ಲಿ ಈ ಪುಟ್ಟ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದರು.

‌ ಈ ಸಂದರ್ಭದಲ್ಲಿ ಎಲ್ಲಾ ಸಹೃದಯಿ ಮಹಿಳೆಯರ ಪರವಾಗಿ ಸಾಂಕೇತಿಕವಾಗಿ ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಡಾ.ಆಶಾಲತಾ, ಪ್ರಾ.ಆ.ಕೇಂದ್ರ ಹುಂಚದಕಟ್ಟೆಯ ವೈದ್ಯಾಧಿಕಾರಿ ಡಾ.ಶೋಭಾದೇವಿ, ಪ್ರಾ.ಆ.ಕೇಂದ್ರ ಮಾಳೂರಿನ ಹಿರಿಯ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಯಶೋಧ,ಪ್ರಾ.ಆ.ಕೇಂದ್ರ ಅರಳಸುರಳಿಯ ಆಶಾ ಕಾರ್ಯಕರ್ತೆ ಪ್ರೇಮರವರನ್ನು ಗೌರವಿಸಲಾಯಿತು ಮತ್ತು ಸಭೆಯಲ್ಲಿದ್ದ ಎಲ್ಲಾ ಮಹಿಳೆಯರಿಗೂ ಹೂಗುಚ್ಚ ನೀಡಿ ಅಭಿನಂದಿಸಲಾಯಿತು.

ವಿಡಿಎಲ್ ಉಪನಿರ್ದೇಶಕ ಡಾ.ಗುಡದಪ್ಪ ಕಸಬಿ, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ನಟರಾಜ್,ಜಿಲ್ಲಾ ಮೇಲ್ವಿಚಾರಕ ವೆಂಕಟಕೃಷ್ಣ, ವೈದ್ಯಾಧಿಕಾರಿಗಳಾದ ಡಾ.ಅನಿಕೇತನ್, ಡಾ.ಸುರೇಶ್, ತಾಲ್ಲೂಕು ಆರೋಗ್ಯ ಇಲಾಖಾ ನೌಕರರ ಸಂಘದ ಖಜಾಂಚಿ ಎ ಎಂ ಜಗದೀಶ್, ಜಂಟಿ ಕಾರ್ಯದರ್ಶಿ ಈಶ್ವರ್, ತಾಲ್ಲೂಕು ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳು ಮತ್ತು ಆರೋಗ್ಯ ನಿರೀಕ್ಷಣಾಧಿಕಾರಿಗಳ ಸಂಘದ ಕಾರ್ಯದರ್ಶಿ ಕೃಷ್ಣಮೂರ್ತಿ ಅತಿಥಿಗಳಾಗಿ ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ತಾಲ್ಲೂಕಿನ ಎಲ್ಲಾ ಆರೋಗ್ಯ ಸಂಸ್ಥೆಗಳ ವೈದ್ಯಾಧಿಕಾರಿಗಳು,ಸಿಬ್ಬಂದಿಗಳು ಮತ್ತು ಆಶಾ ಕಾರ್ಯಕರ್ತೆಯರು ಇದ್ದರು.

#####################################

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ:9449553305…

Related Articles

Leave a Comment

Latest news
ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್...! ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ...?! ಡಾ. ಮೈತ್ರಿ... Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ...