Home ಶಿವಮೊಗ್ಗ“ಸಹಕಾರ ರತ್ನ” ಪ್ರಶಸ್ತಿಗೆ ಪಾತ್ರರಾದ ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ ಅಧ್ಯಕ್ಷರಾದ ಎಂ.ಬಿ. ಚನ್ನವೀರಪ್ಪ ..!!

“ಸಹಕಾರ ರತ್ನ” ಪ್ರಶಸ್ತಿಗೆ ಪಾತ್ರರಾದ ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ ಅಧ್ಯಕ್ಷರಾದ ಎಂ.ಬಿ. ಚನ್ನವೀರಪ್ಪ ..!!

by EDITOR NEWS WARRIORS
0 comments
   ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ ಅಧ್ಯಕ್ಷರಾದ  ಎಂ.ಬಿ. ಚನ್ನವೀರಪ್ಪ ಇವರಿಗೆ ಕರ್ನಾಟಕ ರಾಜ್ಯ ಸರ್ಕಾರದಿಂದ “ ಸಹಕಾರ ರತ್ನ ”  ಪ್ರಶಸ್ತಿಯನ್ನು ನೀಡಲಾಗಿದ್ದು ದಿನಾಂಕ 20.03.2022 ರಂದು ಬೆಂಗಳೂರಿನಲ್ಲಿ ನಡೆಯಲಿರುವ ಸಮಾರಂಭದಲ್ಲಿ ಮುಖ್ಯ ಮಂತ್ರಿಗಳಾದ  ಬಸವರಾಜ ಬೊಮ್ಮಾಯಿಯವರು ಸಹಕಾರ ರತ್ನ ಪ್ರಶಸ್ತಿಯನ್ನು  ಪ್ರಧಾನ ಮಾಡಲಿದ್ದಾರೆ.  

         ಎಂ.ಬಿ.ಚನ್ನವೀರಪ್ಪ ಇವರು 1994-95 ನೇ ಸಾಲಿನಿಂದ ಸಹಕಾರ ಕ್ಷೇತ್ರದಲ್ಲಿ ಅವಿರತವಾಗಿ ತಮ್ಮ ಸೇವೆಯನ್ನು ಸಲ್ಲಿಸುತ್ತಿದ್ದು,  ದಿ ಅರ್ಬನ್ ಕೋ-ಅಪರೇಟಿವ್ ಬ್ಯಾಂಕ್ ಲಿ. ಶಿಕಾರಿಪುರ ಇದರಲ್ಲಿ ಕಳೆದ 28 ವರ್ಷಗಳಿಂದ ನಿರಂತರವಾಗಿ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದು ದಿ.01.04.2015 ರಿಂದ 02.05.2017 ರವರೆಗೆ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿರುತ್ತಾರೆ. ಅಲ್ಲದೇ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನಿಯಮಿತ ಬೆಂಗಳೂರಿನಲ್ಲಿ 7 ವರ್ಷಗಳ ಕಾಲ ನಿರ್ದೇಶಕರಾಗಿ, ಮಲೆನಾಡು ಅಡಿಕೆ ಮಾರಾಟ ಸಹಕಾರ ಸಂಘದಲ್ಲಿ 5 ವರ್ಷಗಳ ಕಾಲ ನಿರ್ದೇಶಕರಾಗಿ,  ಟಿ.ಎ.ಪಿ.ಸಿ,ಎಂ.ಎಸ್ ಶಿಕಾರಿಪುರದಲ್ಲಿ 10 ವರ್ಷಗಳ ಕಾಲ ನಿರ್ದೇಶಕಾಗಿಯೂ ಸೇವೆ ಸಲ್ಲಿಸಿರುತ್ತಾರೆ.

      ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿಗೆ 1998-99 ರಲ್ಲಿ ನಿರ್ದೇಶಕರಾಗಿ ಪಾದಾರ್ಪಣೆ ಮಾಡಿದ್ದು 2006 ರಿಂದ 2010 ರವರೆಗೆ ಹಾಗೂ 2019 ರಿಂದ 2020 ರವರೆಗೆ ಉಪಾಧ್ಯಕ್ಷರಾಗಿಯೂ, ಸೇವೆಸಲ್ಲಿಸಿರುತ್ತಾರೆ,  ಪ್ರಸ್ತುತ ನವೆಂಬರ್-2020 ರಿಂದ ಬ್ಯಾಂಕಿನ ಅಧ್ಯಕ್ಷರಾಗಿದ್ದು, ಬ್ಯಾಂಕ್ ಹಿಂದೆಂದಿಗಿಂತಲೂ ಹೆಚ್ಚಿನ ಲಾಭ ಹಾಗೂ  ಪ್ರಗತಿಯನ್ನು ಸಾಧಿಸುವಲ್ಲಿ ಕಾರಣಕರ್ತರಾಗಿದ್ದಾರೆ.

      ಎಂ.ಬಿ. ಚನ್ನವೀರಪ್ಪ ಇವರಿಗೆ ಸಂದ ಈ ಪುರಸ್ಕಾರವು ಜಿಲ್ಲೆಯ ಸಹಕಾರಿ ಕ್ಷೇತ್ರಕ್ಕೆ ಸಂದ ಗೌರವವಾಗಿದ್ದು ಬ್ಯಾಂಕಿನ ಆಡಳಿತ ಮಂಡಳಿ, ಬ್ಯಾಂಕಿನ ಸಿಬ್ಬಂದಿಗಳು ಹಾಗೂ ಜಿಲ್ಲೆಯ ಎಲ್ಲಾ ಸಹಕಾರಿ ಸಂಸ್ಥೆಗಳ  ಪರವಾಗಿ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

###################################
ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ:9449553305...

Related Articles

Leave a Comment

Latest news
ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...