Home ಶಿವಮೊಗ್ಗಆರೋಗ್ಯಪಿ.ಸಿ ಮತ್ತು ಪಿ.ಎನ್.ಡಿ.ಟಿ ಕಾರ್ಯಾಗಾರ ಹೆಣ್ಣು ಭ್ರೂಣ ಪತ್ತೆ ಮತ್ತು ಹತ್ಯೆ ತಡೆಗೆ ಎಲ್ಲರೂ ಕೈಜೋಡಿಸಬೇಕು: ಜಿಲ್ಲಾಧಿಕಾರಿಗಳ ಕರೆ..!!

ಪಿ.ಸಿ ಮತ್ತು ಪಿ.ಎನ್.ಡಿ.ಟಿ ಕಾರ್ಯಾಗಾರ ಹೆಣ್ಣು ಭ್ರೂಣ ಪತ್ತೆ ಮತ್ತು ಹತ್ಯೆ ತಡೆಗೆ ಎಲ್ಲರೂ ಕೈಜೋಡಿಸಬೇಕು: ಜಿಲ್ಲಾಧಿಕಾರಿಗಳ ಕರೆ..!!

by EDITOR NEWS WARRIORS
0 comments


ಶಿವಮೊಗ್ಗ:ಹೆಣ್ಣು ಭ್ರೂಣ ಪತ್ತೆ ಮತ್ತು ಹತ್ಯೆ ಮಾಡದಂತೆ ಹಾಗೂ ಹೆಣ್ಣು ಮಕ್ಕಳ ಲಿಂಗಾನುಪಾತವನ್ನು ಹೆಚ್ಚಿಸುವ ಉದ್ದೇಶದಿಂದ ಸರ್ಕಾರ ಜಾರಿಗೆ ತಂದಿರುವ ಗರ್ಭಧಾರಣ ಪೂರ್ವ ಮತ್ತು ಪ್ರಸವಪೂರ್ವ ಪತ್ತೆತಂತ್ರ ವಿಧಾನಗಳ (ಲಿಂಗ ಆಯ್ಕೆ ನಿಷೇಧ) ಕಾಯ್ದೆ 1994 ನ್ನು ಪರಿಣಾಮಕಾರಿಯಾಗಿ ಅನುಷ್ಟಾನಗೊಳಿಸಲು ಆರೋಗ್ಯ ಇಲಾಖೆಯೊಂದಿಗೆ ಎಲ್ಲ ಇಲಾಖೆಗಳು, ಸಂಘ ಸಂಸ್ಥೆಗಳು ಕೈಜೋಡಿಸಬೇಕೆಂದು ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಹೇಳಿದರು.


ರಾಷ್ಟ್ರೀಯ ಆರೋಗ್ಯ ಅಭಿಯಾನ, ರಾಜ್ಯ ಪಿ.ಸಿ ಮತ್ತು ಪಿ.ಎನ್.ಡಿ.ಟಿ ಕೋಶ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳು ಬೆಂಗಳೂರು ವಿಭಾಗ ಇವರ ವತಿಯಿಂದ ಇಂದು ನಗರದ ಬಿ.ಹೆಚ್.ರಸ್ತೆಯ ರಾಯಲ್ ಆರ್ಕಿಡ್ ಸೆಂಟ್ರಲ್ ಇಲ್ಲಿ ಏರ್ಪಡಿಸಲಾಗಿದ್ದ ವಿಭಾಗೀಯ ಮಟ್ಟದ ಪಿ.ಸಿ. ಮತ್ತು ಪಿ.ಎನ್.ಡಿ.ಟಿ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.


ರೋಗ ಪತ್ತೆಯಂತಹ ಒಳ್ಳೆಯ ಉದ್ದೇಶಕ್ಕೆ ಬಳಕೆಯಾಗಬೇಕಾದ ಅಲ್ಟ್ರಾಸೌಂಡ್ ಸ್ಕ್ಯಾನಿಂಗ್ ತಂತ್ರಜ್ಞಾನವನ್ನು ಹೆಣ್ಣು ಭ್ರೂಣ ಪತ್ತೆಗಾಗಿ ದುರುಪಯೋಗ ಪಡೆಸಿಕೊಳ್ಳಲಾಗುತ್ತಿದೆ. ಈ ದುರುಪಯೋಗವನ್ನು ನಿಯಂತ್ರಿಸಲು ಜಿಲ್ಲಾ ಮಟ್ಟದಲ್ಲಿ ಜಿಲ್ಲಾ ಸಲಹಾ ಮಂಡಳಿ ಹಾಗೂ ತಪಾಸಣಾ ಸಮಿತಿಗಳಿದ್ದು, ಬಹಳಷ್ಟು ಸ್ಟಿಂಗ್ ಕಾರ್ಯಾಚರಣೆಗಳನ್ನು ಕೈಗೊಳ್ಳಲಾಗುತ್ತಿದೆ. ಆದರೂ ಸಹ ಈ ಜಿಲ್ಲೆಯಿಂದ ಬೇರೆ ಜಿಲ್ಲೆ, ಬೇರೆ ಪ್ರದೇಶಗಳಿಗೆ ಹೋಗಿ ಹೆಣ್ಣು ಭ್ರೂಣ ಪತ್ತೆ ಮತ್ತು ಹತ್ಯೆಯಾಗುತ್ತಿರುವುದನ್ನು ಕಾಣುತ್ತಿದ್ದೇವೆ.
ಹಾಗೂ ಅನಧಿಕೃತವಾಗಿ ಅಲ್ಟ್ರಾಸೌಂಡ್ ಸ್ಕ್ಯಾನಿಂಗ್ ಮಷೀನ್‍ಗಳನ್ನು ಇರಿಸಿಕೊಂಡು ವ್ಯವಹರಿಸಲಾಗುತ್ತಿದೆ. ಸಮಿತಿಗಳಿದ್ದರೂ ಸಹ ಸಂಪೂರ್ಣವಾಗಿ ಇದನ್ನು ತಡೆಗಟ್ಟಲು ಆಗಿಲ್ಲ. ಇದನ್ನು ತಡೆಗಟ್ಟಲು ಕೇವಲ ಆರೋಗ್ಯ ಇಲಾಖೆಯಿಂದ ಮಾತ್ರ ಸಾಧ್ಯವಿಲ್ಲ, ಆರೋಗ್ಯ ಇಲಾಖೆಗೆ ಸಂಬಂಧಿಸಿದ ಎಲ್ಲ ವಿಭಾಗಗಳು, ಐಎಂಎ, ಎನ್‍ಜಿಓ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳು ಕೈಜೋಡಿಸಬೇಕು ಎಂದರು.
ಮುಖ್ಯವಾಗಿ ಸಮಾಜ ಹೆಣ್ಣುಮಕ್ಕಳನ್ನು ನೋಡುವ ದೃಷ್ಟಿಕೋನ ಬದಲಾಗಬೇಕು. ಸಮುದಾಯದಲ್ಲಿನ ಮೂಢನಂಬಿಕೆ ಹೋಗಲಾಡಿಸಲು ಹೆಚ್ಚಿನ ಪ್ರಯತ್ನಗಳು ಆಗಬೇಕು. ಹಾಗೂ ಇದಕ್ಕೆ ಎಲ್ಲರೂ ಸಹಕರಿಸಬೇಕೆಂದರು.


ಇಂದಿನ ಕಾರ್ಯಾಗಾರದಲ್ಲಿ ಬೆಂಗಳೂರು ವಿಭಾಗ ವ್ಯಾಪ್ತಿಯ 09 ಜಿಲ್ಲೆಗಳ ಡಿಹೆಚ್‍ಓ ಸೇರಿದಂತೆ ಪಿಸಿ & ಪಿಎನ್‍ಡಿಸಿಟಿ ಸದಸ್ಯರು, ವೈದ್ಯರು ಬಂದಿದ್ದು ಎಲ್ಲ ಸೇರಿ ಹೆಣ್ಣು ಭ್ರೂಣ ಹತ್ಯೆ ತಡೆ ಹಾಗೂ ಹೆಣ್ಣು ಮಕ್ಕಳ ಲಿಂಗಾನುಪಾತ ಹೆಚ್ಚಿಸಲು ಒಂದು ಮೂಲ ನಕ್ಷೆ ತಯಾರಿಸಬೇಕು. ಕಾರ್ಯಕ್ರವನ್ನು ಅರ್ಥಪೂರ್ಣಗೊಳಿಸಿ ಫಲಪ್ರದವಾಗುವಂತೆ ಮಾಡಬೇಕೆಂದು ಕರೆ ನೀಡಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವೈಶಾಲಿ ಎಂ.ಎಲ್ ಮಾತನಾಡಿ, ಹೆಣ್ಣು ಭ್ರೂಣ ಪತ್ತೆ ಮತ್ತು ಹತ್ಯೆ ತಡೆಯುವ ನಿಟ್ಟಿನಲ್ಲಿ ಡಿಹೆಚ್‍ಓ ನೇತೃತ್ವದ ತಂಡ ಜಿಲ್ಲೆಯಲ್ಲಿ ಅನೇಕ ಬಾರಿ ದಿಢೀರ್ ದಾಳಿ ನಡೆಸುತ್ತ ಬಂದಿದೆ. ಈ ತಂಡ ಇನ್ನೂ ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸಬೇಕು. ಜೊತೆಗೆ ನಿಯಮಿತವಾಗಿ ಜಿಲ್ಲೆಯಲ್ಲಿ ಒಟ್ಟು ಗರ್ಭಧಾರಣೆ, ಪ್ರಸವ ಮತ್ತು ಇವರೆಡರ ನಡುವಿನ ವ್ಯತ್ಯಾಸ ಮತ್ತು ಅದಕ್ಕೆ ಕಾರಣಗಳನ್ನು ಪರಿಶೀಲಿಸುತ್ತಾ ಇರಬೇಕು. ಯಾರಾದರೂ ಕಾನೂನುಬಾಹಿರವಾಗಿ ಭ್ರೂಣ ಪತ್ತೆ ಅಥವಾ ಹತ್ಯೆಗೆ ಕೇಳಿಕೊಂಡರೆ ಅಂತಹವರಿಗೆ ಮನವರಿಕೆ ಮಾಡಬೇಕು ಎಂದರು.

#####################################

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ:9449553305…

Related Articles

Leave a Comment

Latest news
ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್...! ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ...?! ಡಾ. ಮೈತ್ರಿ... Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ...