Home ರಾಜ್ಯಹುಬ್ಬಳ್ಳಿ ಗಲಭೆ ನಡೆದ ಸ್ಥಳಕ್ಕೆ ಗೃಹ ಸಚಿವ ಆರಗ ಜ್ಞಾನೇಂದ್ರ ಭೇಟಿ ಪ್ರಹ್ಲಾದ್ ಜೋಷಿ ಸಾಥ್..!! ಏನಂದ್ರು ಗೃಹ ಸಚಿವರು ಯಾರಿದ್ದಾರೆ ಈ ಗಲಭೆಯ ಹಿಂದೆ ?

ಹುಬ್ಬಳ್ಳಿ ಗಲಭೆ ನಡೆದ ಸ್ಥಳಕ್ಕೆ ಗೃಹ ಸಚಿವ ಆರಗ ಜ್ಞಾನೇಂದ್ರ ಭೇಟಿ ಪ್ರಹ್ಲಾದ್ ಜೋಷಿ ಸಾಥ್..!! ಏನಂದ್ರು ಗೃಹ ಸಚಿವರು ಯಾರಿದ್ದಾರೆ ಈ ಗಲಭೆಯ ಹಿಂದೆ ?

by EDITOR NEWS WARRIORS
0 comments

ಹುಬ್ಬಳ್ಳಿ: ಇಂದು ಗೃಹಸಚಿವರಾದ ಆರಗ ಜ್ಞಾನೇಂದ್ರ ಅವರು ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಷಿ ಅವರ ಜೊತೆ ಗಲಭೆ ನಡೆದ ಸಂದರ್ಭದಲ್ಲಿ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ ಹಳೇ ಹುಬ್ಬಳ್ಳಿಯ ದಿಡ್ಡಿ ಓಣಿಯ ಹನುಮಾನ್ ದೇವಸ್ಥಾನಕ್ಕೆ ಗೃಹ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಡಿಜೆ ಹಳ್ಳಿ ಕೆಜಿ ಹಳ್ಳಿ ಪ್ರಕರಣಕ್ಕೆ ಹೋಲಿಸಿದ ಗೃಹ ಸಚಿವರು:

ಹುಬ್ಬಳ್ಳಿಯಲ್ಲಿ ನಡೆದ ಕೋಮುಗಲಭೆ ಯಾಕೆ ಬೇಟಿ ನೀಡಿದ ಗೃಹಸಚಿವರು ನಂತರ ಮಾತನಾಡುತ್ತಾ ಹುಬ್ಬಳ್ಳಿಯ ಪೊಲೀಸರನ್ನು ಅಭಿನಂದಿಸುತ್ತೇನೆ. ಏಕೆಂದರೆ ಸುಮಾರು ಸಾವಿರ ಜನ ಇದ್ದ ಗುಂಪನ್ನು ನಿಯಂತ್ರಿಸಿದ್ದಾರೆ. ಆಗುತ್ತಿದ್ದ ದೊಡ್ಡ ಅನಾಹುತವನ್ನು ತಪ್ಪಿಸಿದ್ದಾರೆ. ಇಲ್ಲವಾದಲ್ಲಿ ಡಿಜೆ ಹಳ್ಳಿ ಕೆಜಿಹಳ್ಳಿ ಘಟನೆ ಇಲ್ಲಿ ಪುನರಾವರ್ತನೆ ಆಗುವ ಸಾಧ್ಯತೆ ಇತ್ತು. ಅದನ್ನು ಹುಬ್ಬಳ್ಳಿಯ ಪೊಲೀಸರು ತಡೆದಿದ್ದು ಕೆಲವೊಬ್ಬ ಪೊಲೀಸರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಈ ಪ್ರಕರಣವನ್ನು ತನಿಖೆ ಗೆ ವಯಸುತ್ತಿದ್ದು. ಈ ಪ್ರಕರಣದಲ್ಲಿ ಯಾವುದೇ ಸಂಘಟನೆಗಳ ಪಾತ್ರವಿದ್ದರೆ ಅವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು ಶಾಂತಿ-ಸುವ್ಯವಸ್ಥೆ ಕಾಪಾಡಲು ಎಲ್ಲಾ ರೀತಿಯ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದರು.


ಗೃಹ ಸಚಿವರ ಭೇಟಿಯ ಸಂದರ್ಭದಲ್ಲಿ ಶಾಸಕರಾದ ಜಗದೀಶ ಶೆಟ್ಟರ್, ಶಾಸಕ ಅರವಿಂದ ಬೆಲ್ಲದ ಸೇರಿದಂತೆ ಬಿಜೆಪಿ ಮುಖಂಡರು ಸಾಥ್ ನೀಡಿದರು. ಸ್ಥಳದಲ್ಲಿ 144 ನಿಷೇಧಾಜ್ಞೆ ಜಾರಿಯಲ್ಲಿದ್ದರೂ ನೂರಾರು ಬಿಜೆಪಿ ಕಾರ್ಯಕರ್ತರು, ಸಾರ್ವಜನಿಕರು ಮುಖಂಡರುಗಳು ಸೇರಿದ್ದರು.

ಇದು ಉದ್ದೇಶಪೂರ್ವಕವಾಗಿ ಆದ ಗಲಭೆ ಎನ್ನುವ ಮಾಹಿತಿಗಳು ಲಭ್ಯವಾಗಿದ್ದು ಇದರ ಹಿಂದೆ ಯಾರಿದ್ದಾರೆ ಇವರ ಉದ್ದೇಶವೇನು? ಎನ್ನುವ ಮಾಹಿತಿಗಳು ತನಿಖೆಯಿಂದಷ್ಟೇ ಬಹಿರಂಗವಾಗಬೇಕು .

ರಘುರಾಜ್ ಹೆಚ್.ಕೆ,….9449553305….

#####################################

Related Articles

Leave a Comment

Latest news
ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...