Home ರಾಜ್ಯದಿಡೀರನೆ ಸುದ್ದಿಗೋಷ್ಠಿ ನಡೆಸಲು ಮುಂದಾದ ಸಿಎಂ..!! ಶಿಸ್ತಿನ ಪಕ್ಷದ ರೆಬಲ್ ಶಾಸಕ ಯತ್ನಾಳ್ ವಿರುದ್ಧ ಕ್ರಮಕ್ಕೆ ಮುಂದಾಗುತ್ತಾರಾ..? ಸಚಿವ ಸಂಪುಟದ ಸುಳಿವು ನೀಡುತ್ತಾರಾ..? ವಿರೋಧಪಕ್ಷಗಳಿಗೆ ಪ್ರತ್ಯುತ್ತರ ನೀಡುತ್ತಾರಾ..?

ದಿಡೀರನೆ ಸುದ್ದಿಗೋಷ್ಠಿ ನಡೆಸಲು ಮುಂದಾದ ಸಿಎಂ..!! ಶಿಸ್ತಿನ ಪಕ್ಷದ ರೆಬಲ್ ಶಾಸಕ ಯತ್ನಾಳ್ ವಿರುದ್ಧ ಕ್ರಮಕ್ಕೆ ಮುಂದಾಗುತ್ತಾರಾ..? ಸಚಿವ ಸಂಪುಟದ ಸುಳಿವು ನೀಡುತ್ತಾರಾ..? ವಿರೋಧಪಕ್ಷಗಳಿಗೆ ಪ್ರತ್ಯುತ್ತರ ನೀಡುತ್ತಾರಾ..?

by EDITOR NEWS WARRIORS
0 comments

ಬೆಂಗಳೂರು: ಇಂದು ಸಂಜೆ 4 ಗಂಟೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದಿಡೀರನೆ ಪತ್ರಿಕಾಗೋಷ್ಠಿ ಕರೆದಿದ್ದು. ಹಲವು ಅನುಮಾನ ಹಾಗೂ ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ.

ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ 4ಗಂಟೆಗೆ ಸುದ್ದಿಗೋಷ್ಠಿ:

ಬೆಂಗಳೂರಿನ ಖಾಸಗಿ ಹೋಟೆಲಿನಲ್ಲಿ ಇಂದು ಸಂಜೆ 4 ಗಂಟೆಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ದಿಡೀರನೆ ಪತ್ರಿಕಾಗೋಷ್ಠಿ ಕರೆದಿದ್ದು ಬೊಮ್ಮಾಯಿ ಜೊತೆಗೆ ಬಿಜೆಪಿಯ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಿಟಿ ರವಿ ಪಾಲ್ಗೊಳ್ಳುವ ಸಾಧ್ಯತೆ ಇದೆ.

ವಿರೋಧಪಕ್ಷಗಳ ದಾಳಿಗೆ ಪ್ರತಿ ಉತ್ತರ ನೀಡುತ್ತಾರಾ? ಸ್ವಪಕ್ಷದ ರೆಬೆಲ್ ಶಾಸಕ ಬಸನಗೌಡ ಯತ್ನಾಳ ಹೇಳಿಕೆಗೆ ಪ್ರತಿಕ್ರಿಯೆ ನೀಡುತ್ತಾರಾ?


ನಿರಂತರವಾಗಿ ವಿರೋಧಪಕ್ಷಗಳು ಸರ್ಕಾರದ ವಿರುದ್ಧ ಮಾಡುತ್ತಿರುವ ಆರೋಪಗಳಿಗೆ ಇಂದು ಬಸವರಾಜ್ ಬೊಮ್ಮಾಯಿ ತಿರುಗೇಟು ನೀಡುತ್ತಾರಾ? ಪಿಎಸ್ಐ ಹುದ್ದೆ ನೇಮಕಾತಿ ಅಕ್ರಮ, ಸ್ವಪಕ್ಷದ ರೆಬೆಲ್ ಶಾಸಕ ಬಸನಗೌಡ ಯತ್ನಾಳ್ ನೀಡಿದ ಹೇಳಿಕೆ ಬಿಜೆಪಿ ಪಾಳ್ಯದಲ್ಲಿ ಅಲ್ಲೋಲಕಲ್ಲೋಲ ಮೂಡಿಸಿದ್ದು ಸಿಎಂ ಹುದ್ದೆಗೇರಲು 2, 500 ಕೋಟಿ ಕೇಳಿದ್ದರು ಎನ್ನುವ ಹೇಳಿಕೆಗೆ ಮುಖ್ಯಮಂತ್ರಿಗಳು ಯಾವ ರೀತಿ ಪ್ರತಿಕ್ರಿಯೆ ನೀಡುತ್ತಾರೆ.

ಬಿಜಾಪುರದ ರೆಬಲ್ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ವಿರುದ್ಧ ಕ್ರಮಕ್ಕೆ ಮುಂದಾಗುತ್ತಾರಾ ಮುಖ್ಯಮಂತ್ರಿಗಳು :

ನನಗೆ ಮುಖ್ಯಮಂತ್ರಿ ಹುದ್ದೆ ನೀಡಲು 2500 ಕೋಟಿಯನ್ನು ಕೇಳಿದ್ದರು ಎನ್ನುವ ಹೇಳಿಕೆ ನೀಡಿರುವ ಶಿಸ್ತಿನ ಪಕ್ಷದ ಶಾಸಕ ಯತ್ನಾಳ್ ವಿರುದ್ಧ ಮುಖ್ಯಮತ್ರಿಗಳು ಯಾವ ಕ್ರಮ ತೆಗೆದುಕೊಳ್ಳುತ್ತಾರೆ. ಒಂದು ವೇಳೆ ಯಾವುದೇ ಕ್ರಮ ತೆಗೆದುಕೊಳ್ಳದಿದ್ದರೆ ಯತ್ನಾಳ್ ಹೇಳಿಕೆ ನಿಜ ಎಂದು ಒಪ್ಪಿಕೊಂಡಂತಾಗುತ್ತದೆ. ಹಾಗಾಗಿ ಮುಖ್ಯಮಂತ್ರಿಗಳ ಪತ್ರಿಕಾಗೋಷ್ಠಿ ಮಹತ್ವದ್ದಾಗಿದೆ.

ಸಚಿವ ಸಂಪುಟ ವಿಸ್ತರಣೆ ಬಗ್ಗೆ ಸುಳಿವು ನೀಡುತ್ತಾರ ಮುಖ್ಯಮಂತ್ರಿಗಳು:

ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಸುಳಿವು ನೀಡುತ್ತಾರಾ ಎನ್ನುವ ಕುತೂಹಲ ಮೂಡಿಸಿದೆ.

ಒಟ್ಟಿನಲ್ಲಿ ಇಂದು 4ಗಂಟೆಗೆ ಮುಖ್ಯಮಂತ್ರಿಗಳಿಗೂ ಕರೆದಿರುವ ಮಹತ್ವದ ಪತ್ರಿಕಾಗೋಷ್ಠಿ ಕುತೂಹಲದಿಂದ ಕೂಡಿದ್ದು ಪಿಎಸ್ಐ ಹಗರಣ, ಯತ್ನಾಳ್ ಹೇಳಿಕೆ, ಸಂಪುಟದ ವಿಸ್ತರಣೆ, ಮುಖ್ಯಮಂತ್ರಿಗಳ ಬದಲಾವಣೆ, ವಿರೋಧಪಕ್ಷಗಳ ನಿರಂತರ ಟೀಕೆ ಹೀಗೆ ಹಲವು ವಿಷಯಗಳಿಂದ ಮಹತ್ವ ಪಡೆದುಕೊಂಡಿದೆ.

ರಘುರಾಜ್‌..ಹೆಚ್.ಕೆ…

############################₹₹₹##₹₹₹#₹₹

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ:9449553305..

Related Articles

Leave a Comment

Latest news
ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...