Home ರಾಜ್ಯದಣಿವರಿಯದ ನಾಯಕ ಜೆಡಿಎಸ್ ವರಿಷ್ಠ ಹೆಚ್, ಡಿ ದೇವೇಗೌಡರಿಗೆ ಹುಟ್ಟುಹಬ್ಬದ ಸಂಭ್ರಮ ..! ಪ್ರಶ್ನಾತೀತ ನಾಯಕರ ಮನೆಗೆ ಭೇಟಿ ನೀಡಿ ಹುಟ್ಟುಹಬ್ಬದ ಶುಭಾಶಯ ಕೋರಿದ ಗೃಹ ಸಚಿವ ಆರಗ ಜ್ಞಾನೇಂದ್ರ..!! ಪಕ್ಷ ಭೇದ ಮರೆತು ಪ್ರಧಾನಿ ಮೋದಿ ಸೇರಿದಂತೆ ದೇಶ-ವಿದೇಶದ ಗಣ್ಯರಿಂದ ಶುಭಾಶಯ ಕೋರಿಕೆ..!ಶಿವಮೊಗ್ಗದಲ್ಲಿ ಜೆಡಿಎಸ್ ಕಾರ್ಯಕರ್ತರಿಂದ ಮೇಗನ್ ಆಸ್ಪತ್ರೆಯ ಒಳರೋಗಿಗಳಿಗೆ ಬ್ರೆಡ್, ಬನ್, ಬಿಸ್ಕತ್ತು ವಿತರಣೆ..!!

ದಣಿವರಿಯದ ನಾಯಕ ಜೆಡಿಎಸ್ ವರಿಷ್ಠ ಹೆಚ್, ಡಿ ದೇವೇಗೌಡರಿಗೆ ಹುಟ್ಟುಹಬ್ಬದ ಸಂಭ್ರಮ ..! ಪ್ರಶ್ನಾತೀತ ನಾಯಕರ ಮನೆಗೆ ಭೇಟಿ ನೀಡಿ ಹುಟ್ಟುಹಬ್ಬದ ಶುಭಾಶಯ ಕೋರಿದ ಗೃಹ ಸಚಿವ ಆರಗ ಜ್ಞಾನೇಂದ್ರ..!! ಪಕ್ಷ ಭೇದ ಮರೆತು ಪ್ರಧಾನಿ ಮೋದಿ ಸೇರಿದಂತೆ ದೇಶ-ವಿದೇಶದ ಗಣ್ಯರಿಂದ ಶುಭಾಶಯ ಕೋರಿಕೆ..!ಶಿವಮೊಗ್ಗದಲ್ಲಿ ಜೆಡಿಎಸ್ ಕಾರ್ಯಕರ್ತರಿಂದ ಮೇಗನ್ ಆಸ್ಪತ್ರೆಯ ಒಳರೋಗಿಗಳಿಗೆ ಬ್ರೆಡ್, ಬನ್, ಬಿಸ್ಕತ್ತು ವಿತರಣೆ..!!

by EDITOR NEWS WARRIORS
0 comments

ಬೆಂಗಳೂರು: ಹಿರಿಯ ರಾಜಕಾರಣಿ, ಮಾಜಿ ಪ್ರಧಾನಿ, ಮಾಜಿ ಮುಖ್ಯಮಂತ್ರಿ , ದಣಿವರಿಯದ ನಾಯಕ ಜೆಡಿಎಸ್ ಪಕ್ಷದ ವರಿಷ್ಠ ಎಚ್. ಡಿ. ದೇವೇಗೌಡ ಅವರಿಗೆ 90 ನೇ ವರ್ಷದ ಹುಟ್ಟು ಹಬ್ಬದ ಸಂಭ್ರಮ.

ದೇಶ ವಿದೇಶಗಳಿಂದ ಹಲವು ಗಣ್ಯರ ಶುಭಾಶಯ:

ಪ್ರಧಾನಿ ಮೋದಿ, ಕಾಂಗ್ರೆಸ್ ಪಕ್ಷದ ಅಧಿನಾಯಕಿ ಸೋನಿಯಾ ಗಾಂಧಿ, ಮುಲಾಯಂ ಸಿಂಗ್ ಯಾದವ್, ಸೇರಿದಂತೆ ದೇಶ ವಿದೇಶದ ನಾನಾ ಗಣ್ಯರು ಮಾಜಿ ಪ್ರಧಾನಿ ದೇವೇಗೌಡರಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ್ದಾರೆ.

ಕರ್ನಾಟಕದಲ್ಲಿ ಮುಖ್ಯಮಂತ್ರಿ ಬೊಮ್ಮಾಯಿ ಹಾಗೂ ಗೃಹ ಸಚಿವರಿಂದ ಶುಭಾಶಯ ಕೋರಿಕೆ:

ಕರ್ನಾಟಕದಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ವೈ, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಗೃಹ ಸಚಿವರಾದ ಆರಗ ಜ್ಞಾನೇಂದ್ರ ಸೇರಿದಂತೆ ಬಿಜೆಪಿ ಮುಖಂಡರುಗಳಾದ ಆರ್ ಅಶೋಕ್, ಸಿಟಿ ರವಿ, ಕಾಂಗ್ರೆಸ್ನ ನ ಜಿ ,ಪರಮೇಶ್ವರ್ ಸೇರಿದಂತೆ ಹಲವು ನಾಯಕರುಗಳು ಪಕ್ಷಬೇಧ ಮರೆತು ಹಿರಿಯ ರಾಜಕಾರಣಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ್ದಾರೆ.

ರಾಜ್ಯದ ಮೂಲೆ ಮೂಲೆಗಳಲ್ಲಿ ಮಾಜಿ ಪ್ರಧಾನಿ ದೇವೇಗೌಡರ ಹುಟ್ಟು ಹಬ್ಬದ ಸಂಭ್ರಮಾಚರಣೆ :

ಕರ್ನಾಟಕ ರಾಜ್ಯದ ಮೂಲೆ ಮೂಲೆಗಳಲ್ಲಿ ಅವರ ಅಭಿಮಾನಿಗಳು ಕಾರ್ಯಕರ್ತರು ಮಾಜಿ ಪ್ರಧಾನಿ ಹೆಚ್, ಡಿ ದೇವೇಗೌಡರ ಹುಟ್ಟು ಹಬ್ಬದ ಸಂಭ್ರಮಾಚರಣೆಯನ್ನು ಮಾಡಿದ್ದಾರೆ.

ಶಿವಮೊಗ್ಗದಲ್ಲಿ ಜೆಡಿಎಸ್ ಕಾರ್ಯಕರ್ತರಿಂದ ಪ್ರಧಾನಿಯ ಹುಟ್ಟು ಹಬ್ಬದ ಪ್ರಯುಕ್ತ ಒಳರೋಗಿಗಳಿಗೆ ಬ್ರೆಡ್, ಬನ್, ಬಿಸ್ಕತ್ ವಿತರಣೆ:

ಜೆಡಿಎಸ್ ವರಿಷ್ಟ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರ 90ನೇ ಹುಟ್ಟುಹಬ್ಬದ ಅಂಗವಾಗಿ ಇಂದು ನಗರದ ಮೆಗ್ಗಾನ್ ಆಸ್ಪತ್ರೆಯಲ್ಲಿ ಜೆಡಿಎಸ್ ಕಾರ್ಯಕರ್ತರು ಒಳರೋಗಿಗಳಿಗೆ ಬ್ರೆಡ್, ಬನ್, ಬಿಸ್ಕೇಟ್ ಅನ್ನು ವಿತರಿಸಿದರು.

ಈ ಸಂದರ್ಭದಲ್ಲಿ ಮಾಜಿ ಮೇಯರ್ ನಾಗರಾಜ್ ಕಂಕಾರಿ, ಮಾಜಿ ಉಪಮೇಯರ್ ಹೆಚ್. ಫಾಲಾಕ್ಷಿ, ಪ್ರಮುಖರಾದ ಭಾಸ್ಕರ್, ನವುಲೆ ಮಂಜುನಾಥ್, ಪ್ರಶಾಂತ್, ಬಸವರಾಜ್, ದಿವಾಕರ್ ಮೊದಲಾದವರಿದ್ದರು.

ನ್ಯೂಸ್ ವಾರಿಯರ್ಸ್ ಪತ್ರಿಕೆ ಬಳಗದ ವತಿಯಿಂದ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರಿಗೆ ಹುಟ್ಟುಹಬ್ಬದ ಶುಭಾಶಯಗಳು…

ರಘುರಾಜ್.ಹೆಚ್.ಕೆ…

#####################################

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ:9449553305…


Related Articles

Leave a Comment

Latest news
Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ... ಸರ್ಕಾರದಿಂದ ಬಂದಿರುವ ಕೋಟಿ ಕೋಟಿ ಹಣವನ್ನು ಲೂಟಿ ಮಾಡಲು ಇಳಿದಿರುವ ಪಾಲಿಕೆಯ ಭ್ರಷ್ಟ ಅಧಿಕಾರಿಗಳು..! ಸರ್ಕಾರದಿಂದ ಬಂದಿರುವ ಕೋಟಿ ಕೋಟಿ ಹಣವನ್ನು ಲೂಟಿ ಮಾಡಲು ಇಳಿದಿರುವ ಪಾಲಿಕೆಯ ಭ್ರಷ್ಟ ಅಧಿಕಾರಿಗಳು..! ಅಮೃತ ಯೋಜನೆಯಡಿ ಕೈಗೊಂಡ ರಸ್ತೆ, ಚರಂಡಿ,ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಿ: ಬಿ.ಬಿ.ಕಾವೇರಿ ..!