Home ಶಿವಮೊಗ್ಗರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಂದ ಅವೈಜ್ಞಾನಿಕ ಕಾಮಗಾರಿ ಅನುಷ್ಠಾನ – ಬೃಹತ್ ಮರಗಳ ಬುಡಕ್ಕೆ ಹಿಟಾಚಿ ಬಳಸಿ ಮಣ್ಣು ತೆಗೆಸಿದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ – ಸೂಕ್ತ ಕ್ರಮಕ್ಕೆ ಅರಣ್ಯ ಇಲಾಖೆಗೆ ದೂರು..!!

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಂದ ಅವೈಜ್ಞಾನಿಕ ಕಾಮಗಾರಿ ಅನುಷ್ಠಾನ – ಬೃಹತ್ ಮರಗಳ ಬುಡಕ್ಕೆ ಹಿಟಾಚಿ ಬಳಸಿ ಮಣ್ಣು ತೆಗೆಸಿದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ – ಸೂಕ್ತ ಕ್ರಮಕ್ಕೆ ಅರಣ್ಯ ಇಲಾಖೆಗೆ ದೂರು..!!

by EDITOR NEWS WARRIORS
0 comments

ಸಾಗರ:- ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು ಸೊರಬ ವಿಧಾನಸಭಾ ಕ್ಷೇತ್ರದ ಕಂಡಿಕಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್. ಬಿ. ಕಾಲೇಜು ಸನಿಹದಲ್ಲೇ ರಾಷ್ಟ್ರೀಯ ಹೆದ್ದಾರಿ ಅಕ್ಕ ಪಕ್ಕದಲ್ಲಿ ಬೆಳೆದಿರುವ ಬೃಹತ್ ಮರಗಳ ಬುಡದಲ್ಲಿ ಅವೈಜ್ಞಾನಿಕವಾಗಿ ಹಿಟಾಚಿ ಬಳಸಿ ಮಣ್ಣು ತೆಗೆದಿದ್ದಾರೆ.

ಮಲೆನಾಡು ಭೂಮಿಯ ಮಣ್ಣು ಅತೀ ಮೃದುವಾಗಿರುತ್ತದೆ. ಮಳೆಗಾಲ ಇನ್ನೇನೂ ಕೆಲವೇ ದಿನಗಳಲ್ಲಿ ಆರಂಭವಾಗುತ್ತಿರುವ ಹಿನ್ನಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಬೃಹತ್ ಮರಗಳ ಬುಡದಲ್ಲೇ ಅವೈಜ್ಞಾನಿಕವಾಗಿ ಮಣ್ಣು ತೆಗೆಸಿರುವುದು ಮುಂದೊಂದು ದಿನ ಪಾದಚಾರಿಗಳು, ಸಂಚರಿಸುವ ವಾಹನಗಳ ಮೇಲೆ ಮರಗಳು ಬೀಳುವ ಸಾಧ್ಯತೆ ಹೆಚ್ಚಿದೆ.

ಮರಗಳ ಬುಡದ ಮಣ್ಣು ತೆಗೆಸಿರುವುದರಿಂದ ಮಳೆಗಾಲದಲ್ಲಿ ಬೃಹತ್ ಮರಗಳಿಂದ ಸಂಭವಿಸುವ ಅವಘಡಕ್ಕೆ ಜವಾಬ್ದಾರರು ಯಾರು……….?!

ಕಣ್ಣಿದ್ದೂ ಕುರುಡರಾದ ಅರಣ್ಯ ಸಂಪತ್ತು ಉಳಿಸಬೇಕಾದ ಅರಣ್ಯ ಇಲಾಖೆಯ ಅಧಿಕಾರಿಗಳು ಹಾಗೂ ಸುರಕ್ಷತಾ ಕ್ರಮ ಅನುಪಾಲನೆ ಮಾಡಬೇಕಾದ ಪೊಲೀಸ್ ಇಲಾಖೆಯ ಅಧಿಕಾರಿಗಳು.

” ಕಾಮಗಾರಿ ನಿರ್ಲಕ್ಷತನ ಅನುಷ್ಠಾನದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಹಾಗೂ ಗುತ್ತಿಗೆದಾರರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಸಂಭಂದ ಪಟ್ಟ ಅರಣ್ಯ ಸಚಿವರಿಗೆ, ಅರಣ್ಯ ಇಲಾಖೆಯ ಅಧಿಕಾರಿಗಳಿಗೆ, ಶಿವಮೊಗ್ಗ ಜಿಲ್ಲಾಧಿಕಾರಿಗಳಿಗೆ ಸಾರ್ವಜನಿಕರ, ಪಾದಚಾರಿಗಳ, ವಾಹನ ಸವಾರರ ಹಿತದೃಷ್ಟಿಯಿಂದ ಲಿಖಿತ ಹಾಗೂ mail ಮೂಲಕ ದೂರುಗಳನ್ನು ಸಲ್ಲಿಸಿದ್ದು ಯಾವ ರೀತಿ ಕಾನೂನು ಕ್ರಮ ಕೈಗೊಳ್ಳುವರೋ ಕಾದು ನೋಡೋಣ.

ಓಂಕಾರ ಎಸ್. ವಿ. ತಾಳಗುಪ್ಪ

####################################

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ:9449553305…

Related Articles

Leave a Comment

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...