Home ರಾಜ್ಯದಾವಣಗೆರೆ ಜಿಲ್ಲೆಯ ಎರಡು ಮದ್ಯದಂಗಡಿಗಳ ಪರವಾನಿಗೆ ರದ್ದು ಕಾರಣವೇನು..?ಯಾವುದು ಅಂಗಡಿಗಳು..?

ದಾವಣಗೆರೆ ಜಿಲ್ಲೆಯ ಎರಡು ಮದ್ಯದಂಗಡಿಗಳ ಪರವಾನಿಗೆ ರದ್ದು ಕಾರಣವೇನು..?ಯಾವುದು ಅಂಗಡಿಗಳು..?

by EDITOR NEWS WARRIORS
0 comments

ದಾವಣಗೆರೆ: ಜಿಲ್ಲಾ ಅಬಕಾರಿ ಅಧಿಕಾರಿಗಳು ನೀಡುವ ಎಚ್ಚರಿಕೆ ಮೀರಿ ಪದೇ ಪದೇ ಸನ್ನದುದಾರರು ಸನ್ನದು ಷರತ್ತುಗಳನ್ನು ಉಲ್ಲಂಘಿಸಿದ ಮೇರೆಗೆ ದಾವಣಗೆರೆ ಜಿಲ್ಲೆಯ ಎರಡು ಮದ್ಯದಂಗಡಿಗಳ ಪರವಾನಿಗೆಯನ್ನು ಮುಂದಿನ ಆದೇಶದವರೆಗೆ ಅಮಾನತುಗೊಳಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

ಹೊನ್ನಾಳಿ ಪಟ್ಟಣದ ಹೆಚ್.ಇ.ಮೈನುದ್ದೀನ್‌ ಪಾಷ ಇವರ ಒಡೆತನದ ಸುಗಂದಾ ಬಾರ್ ಅಂಡ್ ರೆಸ್ಟೋರೆಂಟ್ ಮತ್ತು ಹರಿಹರ ತಾಲ್ಲೂಕಿನ ಹನಗವಾಡಿ ಗ್ರಾಮದ (ಬೈಪಾಸ್ ಬಳಿಯ) ಕೃಷ್ಣ ಸಾ ಭೂತೆ ಒಡೆತನದ ರಾಘವೇಂದ್ರ ಬಾರ್ ಅಂಡ್ ರೆಸ್ಟೋರೆಂಟ್ ಅಮಾನತ್ತಾದ ಮದ್ಯದ ಅಂಗಡಿಗಳು.

ಪ್ರಸ್ತುತ ಅಬಕಾರಿ ವರ್ಷದಲ್ಲಿ ಪರವಾನಿಗೆ ಷರತ್ತುಗಳನ್ನು ಉಲ್ಲಂಘಿಸಿದ ಮೇರೆಗೆ ಮೇಲಿನ ಪ್ರತಿ ಬಾರ್ ಮೇಲೆ ಮೂರು ಪ್ರಕರಣಗಳು ದಾಖಲಾಗಿರುತ್ತವೆ. ಆಯಾ ತಾಲ್ಲೂಕಿನ ಅಬಕಾರಿ ಅಧಿಕಾರಿಗಳು ಹಾಗೂ ಅಬಕಾರಿ ಉಪ ಆಯುಕ್ತರು, ದಾವಣಗೆರೆ ಇವರ ಶಿಫಾರಸ್ಸಿನ ಮೇರೆಗೆ ಜಿಲ್ಲಾಧಿಕಾರಿಗಳು, ದಾವಣಗೆರೆ ಇವರು ಸದರಿ ಬಾರ್ ಗಳನ್ನು ಮುಂದಿನ ಆದೇಶದವರೆಗೆ ಅಮಾನತ್ತುಪಡಿಸಿ ಆದೇಶ ಹೊರಡಿಸಿದ್ದಾರೆ.

ಈ ಎರಡು ಮದ್ಯದ ಅಂಗಡಿಗಳನ್ನು ತಾಲೂಕು ಅಬಕಾರಿ ಅಧಿಕಾರಿಗಳು ಸ್ತಗಿತಗೊಳಿಸಿದ್ದಾರೆ.

#####################################

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ: ,9449553305..

Related Articles

Leave a Comment

Latest news
ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...