Home ರಾಜ್ಯನಿರ್ಗಮನದ ಹಾದಿಯಲ್ಲಿ ಬಿಎಸ್ವೈ, ಯಾರಾಗುತ್ತಾರೆ ಮುಂದಿನ ಸಿಎಂ? ಹಲವು ಸಚಿವರಿಗೆ ಕೋಕ್, ಹೊಸಬರಿಗೆ ಆದ್ಯತೆ, ಫುಲ್ ಡೀಟೇಲ್ಸ್…..

ನಿರ್ಗಮನದ ಹಾದಿಯಲ್ಲಿ ಬಿಎಸ್ವೈ, ಯಾರಾಗುತ್ತಾರೆ ಮುಂದಿನ ಸಿಎಂ? ಹಲವು ಸಚಿವರಿಗೆ ಕೋಕ್, ಹೊಸಬರಿಗೆ ಆದ್ಯತೆ, ಫುಲ್ ಡೀಟೇಲ್ಸ್…..

by EDITOR NEWS WARRIORS
0 comments
ತೀವ್ರ ಕುತೂಹಲ ಕೆರಳಿಸಿರುವ ಕರ್ನಾಟಕ ರಾಜ್ಯ ರಾಜಕೀಯ ಹಲವು ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಹಾಲಿ ಮುಖ್ಯಮಂತ್ರಿ ಬಿಎಸ್ ಯುಡಿಯೂರಪ್ಪ ರಾಜೀನಾಮೆ ನೀಡುತ್ತಾರೆ ಎನ್ನುವ ವದಂತಿ ಬೆನ್ನಲ್ಲೇ ಹಲವರ ಹೆಸರುಗಳು ಮುಖ್ಯಮಂತ್ರಿ ರೇಸ್ ನಲ್ಲಿ ಇದೆ. ಅದರಲ್ಲೂ ಪ್ರಮುಖವಾಗಿ ಕೇಂದ್ರ್ರ ಸಚಿವ ಪ್ರಹ್ಲಾದ್ ಜೋಶಿ, ಮುರುಗೇಶ್ ನಿರಾಣಿ, ಸಿಟಿ ರವಿ, ಬಿಎಲ್ ಸಂತೋಷ್, ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಹೆಸರುಗಳು ಪ್ರಮುಖವಾಗಿವೆ.

ಅದೇ ತರಹ ಈಗಿರುವ ಸಚಿವರು ಬದಲಾವಣೆಯಾಗುವ ಸಾಧ್ಯತೆ ಇದ್ದು. ಅದರಲ್ಲೂ ಪ್ರಮುಖವಾಗಿ ಹಿರಿಯ ಸಚಿವರಾದ ಜಗದೀಶ್ ಶೆಟ್ಟರ್, ಈಶ್ವರಪ್ಪ, ಗೋವಿಂದ ಕಾರಜೋಳ, ರಂತಹ ಸಚಿವರುಗಳಿಗೆ ಕೋಕ್ ನೀಡುವ ಸಾಧ್ಯತೆ ಇದ್ದು. ಹಾಗೆ ಮಾಡಿದ್ದೇ ಆದಲ್ಲಿ ಬಿಜೆಪಿಯಲ್ಲಿ ಭಿನ್ನಮತ ಸ್ಫೋಟ ಆಗುವುದರಲ್ಲಿ ಸಂಶಯವಿಲ್ಲ. ಹಾಗೆ ಹೊಸ ಸಚಿವರುಗಳಿಗೆ ಆದ್ಯತೆ ನೀಡುವ ಸಾಧ್ಯತೆ ಇದೆ. ಅದರಲ್ಲಿ ಪ್ರಮುಖವಾಗಿ ತೀರ್ಥಹಳ್ಳಿ ಶಾಸಕರಾದ ಆರಗ ಜ್ಞಾನೇಂದ್ರ, ಸಾಗರ ಶಾಸಕರಾದ ಹಾಲಪ್ಪ, ಗೂಳಿಹಟ್ಟಿ ಶೇಖರ್, ರೇಣುಕಾಚಾರ್ಯ, ರಂತಹ ಹೊಸ ಮುಖಗಳಿಗೆ ಆದ್ಯತೆ ಸಿಗುವ ಸಾಧ್ಯತೆ ಇದೆ. ಸಮಸ್ಯೆ ಆಗಿರುವುದು 17 ಶಾಸಕರ ಬಗ್ಗೆ ಇವರ ಬಗ್ಗೆ ಬಿಜೆಪಿ ಸರ್ಕಾರ ಅದರಲ್ಲೂ ಹೈಕಮಾಂಡ್ ಯಾವ ನಿರ್ಧಾರ ತೆಗೆದುಕೊಳ್ಳುತ್ತದೆ ಕಾದುನೋಡಬೇಕು. ಮುಖ್ಯಮಂತ್ರಿ ರೇಸ್ ನಲ್ಲಿರುವ ಕೆಲವು ಹೆಸರುಗಳು ಆಟಕ್ಕುಂಟು ಲೆಕ್ಕಕ್ಕಿಲ್ಲ ಪ್ರಮುಖವಾಗಿ ಪ್ರಹ್ಲಾದ್ ಜೋಶಿ, ಬಿಎಲ್ ಸಂತೋಷ್, ವಿಶ್ವೇಶ್ವರ ಹೆಗಡೆ ಕಾಗೇರಿ, ಅನ್ನೋದು ಉನ್ನತ ಮೂಲಗಳಿಂದ ಮಾಹಿತಿ .

ಒಟ್ಟಿನಲ್ಲಿ ರಾಜ್ಯ ರಾಜಕೀಯದಲ್ಲಿ ಕುತೂಹಲ ಕೆರಳಿಸಿರುವ ರಾಜೀನಾಮೆ ಪ್ರಸಂಗಕ್ಕೆ ಸೋಮವಾರ ಅಂತ್ಯ ಬೀಳಲಿದ್ದು. ಕೊನೆ ಹಂತದಲ್ಲಿ ಯಾವ ಬೆಳವಣಿಗೆ ಬೇಕಾದರೂ ಆಗಬಹುದು… (ವರದಿ ರಘುರಾಜ್ ಹೆಚ್, ಕೆ)..

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ….9449553305/7892830899…

Related Articles

Leave a Comment

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...