Home ಶಿವಮೊಗ್ಗಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಮೆಟ್ರಿಕ್ ಪೂರ್ವ ವಿದ್ಯಾರ್ಥಿಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ..!!

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಮೆಟ್ರಿಕ್ ಪೂರ್ವ ವಿದ್ಯಾರ್ಥಿಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ..!!

by EDITOR NEWS WARRIORS
0 comments

ಶಿವಮೊಗ್ಗ : ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ 2022-23 ನೇ ಸಾಲಿಗೆ ಮೆಟ್ರಿಕ್ ಪೂರ್ವ(6 ರಿಂದ 10ನೇ ತರಗತಿ) ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.


ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾ/ಪ.ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ದಿ:30/06/2022 ಕಡೆಯ ದಿನವಾಗಿದೆ. ಪ್ರವರ್ಗ-1, ಎಸ್‍ಸಿ ಮತ್ತು ಎಸ್‍ಟಿ ಆದಾಯ ಮಿತಿ ರೂ.1.00 ಲಕ್ಷ ಹಾಗೂ ಪ್ರವರ್ಗ-2ಎ, 2ಬಿ, 3ಎ, 3ಬಿ ಇತರೆ ಹಿಂದುಳಿದ ವರ್ಗ ಹಾಗೂ ಇತರೆ ಆದಾಯ ಮಿತಿ ರೂ.44,500 ಗಳು ಇರುತ್ತದೆ.

ಅರ್ಜಿ ಸಲ್ಲಿಸಲು ಹಾಗೂ ತಾಲ್ಲೂಕುವಾರು ವಿದ್ಯಾರ್ಥಿನಿಲಯಗಳ ವಿವರ ಹಾಗೂ ವಿದ್ಯಾರ್ಥಿನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ ಮತ್ತು ಸರ್ಕಾರದ ಆದೇಶಕ್ಕಾಗಿ ಇಲಾಖೆಯ ವೆಬ್‍ಸೈಟ್ www.bcwd.karnataka.gov.in ನ್ನು ವೀಕ್ಷಿಸುವುದು. ತಾಂತ್ರಿಕ ತೊಂದರೆಗಳಾದಲ್ಲಿ [email protected] ಗೆ ಇ-ಮೇಲ್ ಮುಖಾಂತರ ಅಥವಾ ಜಿಲ್ಲಾ/ತಾಲ್ಲೂಕು ಅಧಿಕಾರಿಗಳು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಇವರನ್ನು ಅಗತ್ಯ ದಾಖಲೆಗಳೊಂದಿಗೆ ಸಂಪರ್ಕಿಸಬಹುದು ಹಾಗೂ ಸಹಾಯವಾಣಿ ಸಂಖ್ಯೆ 080-65970006/08182-222129/08182-240078 ಗಳನ್ನು ಸಂಪರ್ಕಿಸಬಹುದೆಂದು ಶಿವಮೊಗ್ಗ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳು ಪ್ರಕಟಣೆ ತಿಳಿಸಿರುತ್ತಾರೆ.

ರಘುರಾಜ್ ಹೆಚ್.ಕೆ…9449553305….

Related Articles

Leave a Comment

Latest news
ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...