Home ರಾಜ್ಯರಾಜ್ಯ “ಖಾಸಗಿ” ನೌಕರರಿಗೆ ಗುಡ್ ನ್ಯೂಸ್ ನೀಡಿದ ಹೈ ಕೋರ್ಟ್..!!

ರಾಜ್ಯ “ಖಾಸಗಿ” ನೌಕರರಿಗೆ ಗುಡ್ ನ್ಯೂಸ್ ನೀಡಿದ ಹೈ ಕೋರ್ಟ್..!!

by EDITOR NEWS WARRIORS
0 comments

ಧಾರವಾಡ: ಖಾಸಗಿ ನೌಕರರ ನಿವೃತ್ತಿಯ ವಯಸ್ಸನ್ನು 58 ವರ್ಷದಿಂದ 60 ವರ್ಷಕ್ಕೆ ಏರಿಸಬೇಕು ಎಂಬ ಸರ್ಕಾರದ ಆದೇಶವನ್ನು ಧಾರವಾಡ ಹೈಕೋರ್ಟ್ ನ್ಯಾಯಪೀಠವು ಎತ್ತಿ ಹಿಡಿದಿದೆ.

ಏನಿದು ಪ್ರಕರಣ…?

ಕರ್ನಾಟಕ ಕೈಗಾರಿಕಾ ಉದ್ಯೋಗ ಸ್ಥಾಯಿ ಆದೇಶಗಳ ತಿದ್ದುಪಡಿ ನಿಯಮಗಳ ಮಾದರಿ ಅನ್ವಯ ನೌಕರರ ನಿವೃತ್ತಿ ವಯಸ್ಸು ಏರಿಸಿ, ಸರ್ಕಾರ ಆದೇಶಿಸಿತ್ತು. ರಾಜ್ಯ ಸರ್ಕಾರದ ಈ ಆದೇಶವನ್ನು ಹರಿಹರದ ಗ್ರಾಸಿಂ ಇಂಡಸ್ಟ್ರೀಸ್ ಕಂಪನಿಯು ಪ್ರಶ್ನಿಸಿ, ಹೈಕೋರ್ಟ್ ಮೊರೆ ಹೋಗಿತ್ತು.

ಹೈಕೋರ್ಟ್ ಏಕ ಸದಸ್ಯತ್ವ ಪೀಠ ವಜಾಗೊಳಿಸಿದ ಅರ್ಜಿಯನ್ನು ಎತ್ತಿ ಹಿಡಿದ ಹೈಕೋರ್ಟ್ :


ಕಂಪನಿ ಸಲ್ಲಿಸಿದ್ದಂತ ಅರ್ಜಿಯನ್ನು ಹೈಕೋರ್ಟ್ ಏಕಸದಸ್ಯ ಪೀಠವು 2021, ಸೆಪ್ಟೆಂಬರ್ 17ರಂದು ವಜಾಗೊಳಿಸಿತ್ತು. ಈ ವಜಾ ಆದೇಶವನ್ನು ಪ್ರಶ್ನಿಸಿ ಮತ್ತೆ ಮೇಲ್ಮನವಿ ಸಲ್ಲಿಸಲಾಗಿತ್ತು. ಈ ಸಂಬಂಧದ ಸುದೀರ್ಘ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ಪೀಠವು ಸರ್ಕಾರದ ಆದೇಶವನ್ನು ಎತ್ತಿ ಹಿಡಿದಿದೆ. ಅಲ್ಲದೇ 2018ರ ಮಾರ್ಚ್ 17 ಅಥವಾ ನಂತ್ರದಲ್ಲಿ 59 ವರ್ಷಗಳನ್ನು ಪೂರೈಸಿ ನಿವೃತ್ತರಾದವರಿಗೆ ನಿವೃತ್ತಿ ದಿನಾಂಕ ಮತ್ತು ಅವರು 60 ವರ್ಷ ತಲುಪಿದ ದಿನಾಂಕದ ನಡುವಿನ ಅವಧಿಗೆ ಶೇ.50ರಷ್ಟು ವೇತನವನ್ನು ಮರುಪಾವತಿ ಮಾಡಬೇಕು ಎಂದು ಮೇಲ್ಮನವಿದಾರರಿಗೆ ಸೂಚಿಸಿದೆ.

ಈ ಮೂಲಕ ಖಾಸಗಿ ನೌಕರರಿಗೆ ಹೈಕೋರ್ಟ್ ಶುಭಸುದ್ದಿ ನೀಡಿದೆ..

ರಘುರಾಜ್ ಹೆಚ್.ಕೆ…9449553305….

Related Articles

Leave a Comment

Latest news
ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್...! ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ...?! ಡಾ. ಮೈತ್ರಿ... Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ...