Home ರಾಜ್ಯಪಶ್ಚಿಮ ಘಟ್ಟ ಕರಡು ಅಧಿಸೂಚನೆ ವಿರೋಧಿಸಿ ಮಲೆನಾಡು ಶಾಸಕರ ಸಭೆ ಕರೆದ ಗೃಹ ಸಚಿವ ಆರಗ ಜ್ಞಾನೇಂದ್ರ..!!

ಪಶ್ಚಿಮ ಘಟ್ಟ ಕರಡು ಅಧಿಸೂಚನೆ ವಿರೋಧಿಸಿ ಮಲೆನಾಡು ಶಾಸಕರ ಸಭೆ ಕರೆದ ಗೃಹ ಸಚಿವ ಆರಗ ಜ್ಞಾನೇಂದ್ರ..!!

by EDITOR NEWS WARRIORS
0 comments

ಪಶ್ಚಿಮ ಘಟ್ಟ ಪ್ರದೇಶದಲ್ಲಿ ವಾಸಿಸುವ ಜನತೆಯ, ಭವಿಷ್ಯಕ್ಕೆ ಮಾರಕ ವಾಗುವ ಪಶ್ಚಿಮಘಟ್ಟ ಕುರಿತ, ಕೇಂದ್ರ ಪರಿಸರ ಸಚಿವಾಲಯದ, ಅಧಿಸೂಚನೆ ವಿರೋಧಿಸಿ, ಮಲೆನಾಡು ಪ್ರದೇಶ ವನ್ನು ಪ್ರತಿನಿಧಿಸುವ ಶಾಸಕರ ಸಭೆಯನ್ನು, ಇದೇ ದಿನಾಂಕ ಜುಲೈ ೧೮ ರಂದು, ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ ರವರು ಕರೆದಿದ್ದಾರೆ.

ಕಳೆದ ವಾರ, ಕೇಂದ್ರ ಪರಿಸರ ಮತ್ತು ಅರಣ್ಯ ಸಚಿವಾಲಯ, ಕರ್ನಾಟಕ ರಾಜ್ಯವೂ ಒಳಗೊಂಡಂತೆ ಒಟ್ಟು ೫೬೮೨೬ ಚದರ ಕಿಲೋ ಮೀಟರ್ ಪ್ರದೇಶವನ್ನು ಪರಿಸರ ಸೂಕ್ಷ್ಮ ಪ್ರದೇಶವೆಂದು ಅಧಿಸೂಚನೆ ಹೊರಡಿಸಿದ್ದು, ಆಕ್ಷೇಪಣೆ ಸಲ್ಲಿಸಲು, ಎರಡು ತಿಂಗಳು ಗಡುವು ನೀಡಲಾಗಿದೆ.

” ಒಂದು ವೇಳೆ ಈ ಅಧಿಸೂಚನೆ ಅನುಷ್ಠಾನ ಗೊಂಡರೆ, ಮಲೆನಾಡು ನಿವಾಸಿಗಳ ಬದುಕು ಮಸುಕಾಗುತ್ತದೆ, ಅಭಿವೃದ್ದಿ ಕುಂಟುತ್ತದೆ ಹಾಗೂ ತೀವ್ರ ಆರ್ಥಿಕ ಹಾನಿಗೆ
ತುತ್ತಾಗಬೇಕಾಗುತ್ತದೆ”.

ಕರ್ನಾಟಕ ಸರಕಾರ ಈ ಹಿಂದೆ Dr ಕಸ್ತೂರಿರಂಗನ್ ಸಮಿತಿ ವರದಿಯನ್ನು ತಿರಸ್ಕರಿಸಿದೆ ಹಾಗೂ ತನ್ನ ನಿಲುವಿನ ಬಗ್ಗೆ ಸ್ಪಷ್ಟ ಅಭಿಪ್ರಾಯ ತಿಳಿಸಿದೆ, ಆ ನಿಲುವಿನಲ್ಲಿ ಯಾವುದೇ ಬದಲಾವಣೆ ಮಾಡಬಾರದೆಂಬ ಈ ಭಾಗದ ಶಾಸಕರ ಆಗ್ರಹವಾಗಿದೆ, ಎಂದಿರುವ ಸಚಿವರು, ಸೋಮವಾರದ ಸಭೆಯಲ್ಲಿ, ಅಧಿಸೂಚನೆ ಯನ್ನು ವಿರೋಧಿಸಿ, ಗೊತ್ತುವಳಿಯನ್ನು ಮಂಡನೆ ಮಾಡಲಾಗುವುದು, ಎಂದೂ ತಿಳಿಸಿದ್ದಾರೆ.

ರಘುರಾಜ್ ಹೆಚ್. ಕೆ…9449553305….

Related Articles

Leave a Comment

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...