Home ರಾಜ್ಯಅಲ್ಪಸಂಖ್ಯಾತರ ವಿದ್ಯಾರ್ಥಿವೇತನ-ಕೌಶಲ್ಯ ತರಬೇತಿಗಳ ಕುರಿತು ಹೆಚ್ಚಿನ ಪ್ರಚಾರ ನೀಡುವಂತೆ ಜಿಲ್ಲಾಧಿಕಾರಿಗಳ ಸೂಚನೆ..!!!!!

ಅಲ್ಪಸಂಖ್ಯಾತರ ವಿದ್ಯಾರ್ಥಿವೇತನ-ಕೌಶಲ್ಯ ತರಬೇತಿಗಳ ಕುರಿತು ಹೆಚ್ಚಿನ ಪ್ರಚಾರ ನೀಡುವಂತೆ ಜಿಲ್ಲಾಧಿಕಾರಿಗಳ ಸೂಚನೆ..!!!!!

by EDITOR NEWS WARRIORS
0 comments



ಶಿವಮೊಗ್ಗ: ಅಲ್ಪಸಂಖ್ಯಾತರಿಗೆ ಲಭ್ಯವಿರುವ ವಿದ್ಯಾರ್ಥಿವೇತನಗಳು, ಸ್ವಯಂ ಉದ್ಯೋಗ, ಕೌಶಲ್ಯಾಭಿವೃದ್ದಿ ಸೇರಿದಂತೆ ವಿವಿಧ ಯೋಜನೆಗಳ ಕುರಿತು ಹೆಚ್ಚಿನ ಪ್ರಚಾರ ನೀಡಿ, ಫಲಾನುಭವಿಗಳು ಇವುಗಳ ಉಪಯೋಗ ಪಡೆಯುವಂತೆ ಮಾಡಬೇಕೆಂದು ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.


ಇಂದು ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿ ಪ್ರಧಾನಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮದ ಜಿಲ್ಲಾ ಮಟ್ಟದ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಶಿಕ್ಷಣ ಇಲಾಖೆ, ಅಲ್ಪಸಂಖ್ಯಾತರ ಇಲಾಖೆಗಳು ಸಮನ್ವಯ ಸಾಧಿಸಿ ಅಲ್ಪಸಂಖ್ಯಾತ ಮುಸ್ಲಿಂ ವಿದ್ಯಾರ್ಥಿಗಳಿಗೆ ಲಭ್ಯವಿರುವ ವಿವಿಧ ರೀತಿಯ ವಿದ್ಯಾರ್ಥಿವೇತನಗಳ ಬಗ್ಗೆ ಹೆಚ್ಚಿನ ಪ್ರಚಾರ ನೀಡಬೇಕು. ಆ ಮೂಲಕ ಹೆಚ್ಚಿನ ವಿದ್ಯಾರ್ಥಿಗಳು ಇದರ ಉಪಯೋಗ ಪಡೆಯುವಂತೆ ಆಗಬೇಕು.


ಕೌಶಲ್ಯಾಭಿವೃದ್ದಿ ಇಲಾಖೆ, ಜಿಲ್ಲಾ ಕೈಗಾರಿಕಾ ಕೇಂದ್ರ, ಇತರೆ ಇಲಾಖೆಗಳು ಇವರಿಗೆ ಲಭ್ಯವಿರುವ ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ತರಬೇತಿಗಳು, ಸ್ವಂತ ಉದ್ಯೋಗ ಕೈಗೊಳ್ಳಲು ಅಗತ್ಯವಾದ ಸಾಲ ಯೋಜನೆಗಳ ಬಗ್ಗೆ ಹೆಚ್ಚಿನ ಪ್ರಚಾರ ನೀಡಬೇಕು. ಪ್ರಧಾನಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮ ಸಮಿತಿಯ ನಾಮನಿರ್ದೇಶಿತ ಸದಸ್ಯರು ಸಹ ಈ ಬಗ್ಗೆ ತಮ್ಮ ಸಮುದಾಯದಲ್ಲಿ ತಿಳಿಸಬೇಕು ಎಂದರು. ಹಾಗೂ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳು ನಿಯಮಿತವಾಗಿ ಮೌಲ್ವಿಗಳೊಂದಿಗೆ ಸಭೆ ನಡೆಸುತ್ತಿದ್ದು, ಮೌಲ್ವಿಯವರ ಮೂಲಕ ಸಹ ಸಮುದಾಯಕ್ಕೆ ಈ ವಿಚಾರಗಳ ಬಗ್ಗೆ ತಿಳಿಸುವಂತೆ ಅವರು ಕೋರಿದರು.


ಶಾಲೆ ಬಿಟ್ಟ ಅಲ್ಪಸಂಖ್ಯಾತ ಮಕ್ಕಳನ್ನು ಅಧಿಕಾರಿಗಳು, ನಾಮನಿರ್ದೇಶಿತ ಸದಸ್ಯರು ಗುರುತಿಸಿ ಶಾಲೆಗೆ ತರುವ ಕೆಲಸ ಮಾಡಬೇಕು. ಈ ಕುರಿತು ಯೋಜನೆ ರೂಪಿಸಿ ಮಕ್ಕಳು ನಿಯಮಿತವಾಗಿ ಶಾಲೆಗೆ ಬರುವ ಹಾಗೆ ಕ್ರಮ ವಹಿಸಬೇಕು ಎಂದು ತಿಳಿಸಿದರು.


ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಸಮಗ್ರ ಶಿಶು ಅಭಿವೃದ್ದಿ ಕಾರ್ಯಕ್ರಮದಡಿ ಅಂಗನವಾಡಿ ಮಕ್ಕಳಿಗೆ ಸಮರ್ಪಕವಾಗಿ ಆಹಾರ ವಿತರಣೆಯಾಗದಿರುವ ಬಗ್ಗೆ ನಾಮನಿರ್ದೇಶಿತ ಸದಸ್ಯ ಮನ್ಸೂರ್ ಮಿರಾನ್ ಸಭೆ ಗಮನಕ್ಕೆ ತಂದರು. ಜಿಲ್ಲಾಧಿಕಾರಿಗಳು, ಜಿ.ಪಂ ಯ ಉಪ ಕಾರ್ಯದರ್ಶಿಗಳು ಈ ಬಗ್ಗೆ ಪರಿಶೀಲನೆ ನಡೆಸಿ ವರದಿ ನೀಡುವಂತೆ ಸೂಚಿಸಿದರು.
ಗ್ರಾಮೀಣ ವಸತಿ ಯೋಜನೆಯಾದ ಇಂದಿರಾ ಆವಾಸ್ ಯೋಜನೆ, ಪ್ರಧಾನ ಮಂತ್ರಿ ಗ್ರಾಮೀಣ ಆವಾಸ್ ಯೋಜನೆ, ಬಸವ ವಸತಿ ಯೋಜನೆಗಳಡಿ ನಿಗದಿತ ಗುರಿ ಸಾಧನೆ ಇನ್ನೂ ಬಾಕಿ ಇದೆ. ಇದನ್ನು ಶೀಘ್ರದಲ್ಲೇ ಸಾಧಿಸಲು ಕ್ರಮ ವಹಿಸಬೇಕು ಎಂದ ಅವರು ಜಿಲ್ಲಾ ಕೈಗಾರಿಕಾ ಕೇಂದ್ರದ ಪಿಎಂ ಉದ್ಯೋಗ ಸೃಜನೆಯಲ್ಲಿ ಉತ್ತಮ ಪ್ರಗತಿಯಾಗಿದೆ ಎಂದರು.


ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮದಡಿ ಫಲಾನುಭವಿ ಆಯ್ಕೆ ವಿಳಂಬವಾಗಿರುವುದನ್ನು ಗಮನಿಸಿದ ಜಿಲ್ಲಾಧಿಕಾರಿಗಳು ಜಿ.ಪಂ ಉಪಕಾರ್ಯದರ್ಶಿಗಳು ಫಲಾನುಭವಿ ವಿವರವನ್ನು ಪರಿಶೀಲಿಸಿ ವರದಿ ಸಲ್ಲಿಸುವಂತೆ ತಿಳಿಸಿದರು.
ಆದ್ಯತೆ ವಲಯ ಸಾಲ ನೀಡುವಲ್ಲಿ ನಿಗದಿತ ಗುರಿ ಸಾಧನೆಯಾಗಬೇಕು. ಇದುವರೆಗೆ ಶೇ.40 ರಷ್ಟು ಮಾತ್ರ ಸಾಧನೆ ಆಗಿದ್ದು, ಇನ್ನು ಬಾಕಿ ಇರುವುದನ್ನು ಶೀಘ್ರವಾಗಿ ಸಾಧಿಸಲು ಕ್ರಮ ವಹಿಸುವಂತೆ ಲೀಡ್ ಬ್ಯಾಂಕ್ ಮ್ಯಾನೇಜರ್‍ರವರಿಗೆ ಸೂಚಿಸಿದರು.


ವಿದ್ಯಾರ್ಥಿಗಳಿಲ್ಲದೇ ಖಾಲಿ ಇರುವ ನಗರದ ಅಲ್ಪಸಂಖ್ಯಾತ ಹಾಸ್ಟೆಲ್‍ನ್ನು ಅಲ್ಪಸಂಖ್ಯಾತ ಇಲಾಖೆ ಅಧಿಕಾರಿಗಳು ಶೀಘ್ರದಲ್ಲಿ ತಮ್ಮ ಸ್ವಾಧೀನಕ್ಕೆ ತೆಗೆದುಕೊಂಡು ಸಣ್ಣ ಪುಟ್ಟ ರಿಪೇರಿ ಮಾಡಿಸಿ ಇನ್ನು 15 ದಿನಗಳ ಒಳಗೆ ಸಿದ್ದಪಡಿಸಬೇಕು. ಇಲ್ಲವಾದಲ್ಲಿ ಸದರಿ ಹಾಸ್ಟೆಲ್‍ನ್ನು ಇತರೆ ಅವಶ್ಯಕತೆ ಇರುವ ಇಲಾಖೆಗೆ ನೀಡಲಾಗುವುದು ಎಂದು ತಿಳಿಸಿದರು.


ಕೃಷಿ, ಮೀನುಗಾರಿಕೆ, ಪಶುಪಾಲನೆ, ಖಾದಿ ಗ್ರಾಮೋದ್ಯೋಗ ಇತರೆ ಇಲಾಖೆಗಳಡಿ ಅಲ್ಪಸಂಖ್ಯಾತರ ಯೋಜನೆಗಳಡಿ ಇರುವ ಸೌಲಭ್ಯಗಳಸನ್ನು ಫಲಾನುಭವಿಗಳಿಗೆ ನೀಡುವ ಮೂಲಕ ನಿಗದಿತ ಅವಧಿಯಲ್ಲಿ ಗುರಿ ಸಾಧಿಸುವಂತೆ ತಿಳಿಸಿದರು.


ಸಭೆಯಲ್ಲಿ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಮಲ್ಲಿಕಾರ್ಜುನ್, ಜಿ.ಪಂ ಯೋಜನಾ ನಿರ್ದೇಶಕಿ ನಂದಿನಿ, ಸಮಿತಿ ನಾಮನಿರ್ದೇಶಿತ ಸದಸ್ಯರಾದ ಮನ್ಸೂರ್ ಮಿರಾನ್, ಅಮ್ಜದ್ ಖಾನ್, ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದರು.

ರಘುರಾಜ್ ಹೆಚ್. ಕೆ…9449553305…

Related Articles

Leave a Comment

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...