Home ರಾಜ್ಯಹುಣಸೆಕಟ್ಟೆ ಗ್ರಾಮದಲ್ಲಿ ಜಿಲ್ಲಾಧಿಕಾರಿಗಳ ಗ್ರಾಮ ವಾಸ್ತವ್ಯ..!!!!

ಹುಣಸೆಕಟ್ಟೆ ಗ್ರಾಮದಲ್ಲಿ ಜಿಲ್ಲಾಧಿಕಾರಿಗಳ ಗ್ರಾಮ ವಾಸ್ತವ್ಯ..!!!!

by EDITOR NEWS WARRIORS
0 comments

“””ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ-ಕಂದಾಯ ಇಲಾಖೆ’“”


ಭದ್ರಾವತಿ: ಸಾರ್ವಜನಿಕರಿಂದ ಕುಂದು ಕೊರತೆ ಅರ್ಜಿಗಳನ್ನು ಸ್ಥಳದಲ್ಲೇ ಸ್ವೀಕರಿಸಿ ಶೀಘ್ರ ಪರಿಹಾರಕ್ಕೆ ಕ್ರಮ ಕೈಗೊಳ್ಳುವ ‘ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ-ಕಂದಾಯ ಇಲಾಖೆ’ ಕಾರ್ಯಕ್ರಮವನ್ನು ಪ್ರತಿ 3ನೇ ಶನಿವಾರದಂದು ಆಯ್ದ ಗ್ರಾಮಗಳಲ್ಲಿ ಆಯೋಜಿಸಲಾಗುತ್ತಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆಯಬೇಕೆಂದು ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ತಿಳಿಸಿದರು.


‘ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ-ಕಂದಾಯ ಇಲಾಖೆ’ ಕಾರ್ಯಕ್ರಮದಡಿ ಇಂದು ಭದ್ರಾವತಿ ತಾಲ್ಲೂಕಿನ ಕಸಬಾ ಹೋಬಳಿಯ ಹುಣಸೆಕಟ್ಟೆ ಗ್ರಾಮದಲ್ಲಿ ಏರ್ಪಡಿಸಲಾಗಿದ್ದ ಜಿಲ್ಲಾಧಿಕಾರಿಗಳ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.


ಈಗಾಗಲೇ ಹಲವು ಅರ್ಜಿಗಳನ್ನು ಸ್ವೀಕರಿಸಿ ವಿಲೇವಾರಿ ಮಾಡಲಾಗಿದ್ದು, ಇನ್ನೂ ಗ್ರಾಮಸ್ಥರು, ಸುತ್ತಮುತ್ತಲ ಗ್ರಾಮಸ್ಥರಿಂದ ಅರ್ಜಿಗಳನ್ನು ಸ್ವೀಕರಿಸಿ ಪರಿಹಾರೋಪಾಯ ಕುರಿತು ಚರ್ಚಿಸಿ ಕ್ರಮ ವಹಿಸಲಾಗುವುದು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಭದ್ರಾವತಿ ಶಾಸಕರಾದ ಬಿ.ಕೆ.ಸಂಗಮೇಶ್ವರ್, ಎಡಿಸಿ ಡಾ.ನಾಗೇಂದ್ರ ಎಫ್ ಹೊನ್ನಳ್ಳಿ, ಎಸಿ ದೊಡ್ಡಗೌಡರ್, ಭದ್ರಾವತಿ ತಹಶೀಲ್ದಾರ್, ಜನಪ್ರತಿನಿಧಿಗಳು, ಅಧಿಕಾರಿಗಳು ಹಾಜರಿದ್ದರು….

Related Articles

Leave a Comment

Latest news
ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್...! ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ...?! ಡಾ. ಮೈತ್ರಿ... Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ...