Home ರಾಜ್ಯಮಾಜಿ ಸಚಿವ ಈಶ್ವರಪ್ಪ ನವರಿಗೆ ಮತ್ತೆ ಸಂಕಷ್ಟ..!! ಕೊಲ್ಲೂರು ಮೂಕಾಂಬಿಕೆ ಸನ್ನಿಧಾನದಲ್ಲಿ ಈಶ್ವರಪ್ಪ ಕುಟುಂಬ..!!!!

ಮಾಜಿ ಸಚಿವ ಈಶ್ವರಪ್ಪ ನವರಿಗೆ ಮತ್ತೆ ಸಂಕಷ್ಟ..!! ಕೊಲ್ಲೂರು ಮೂಕಾಂಬಿಕೆ ಸನ್ನಿಧಾನದಲ್ಲಿ ಈಶ್ವರಪ್ಪ ಕುಟುಂಬ..!!!!

by EDITOR NEWS WARRIORS
1 comment

ಕೊಲ್ಲೂರು ಮೂಕಾಂಬಿಕೆ ಸನ್ನಿಧಾನಕ್ಕೆ ಈಶ್ವರಪ್ಪನವರು ಕುಟುಂಬ ಸಮೇತರಾಗಿ ಹೋಗಿದ್ದು. ಮೂಕಾಂಬಿಕೆಯ ದರ್ಶನ ಪಡೆದಿದ್ದಾರೆ. ಇತ್ತ ಕಡೆ ಮಹತ್ವದ ಬೆಳವಣಿಗೆ ಒಂದರಲ್ಲಿ ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣದಲ್ಲಿ ಮಾಜಿ ಸಚಿವ ಕೆ.ಎಸ್‌ ಈಶ್ವರಪ್ಪಗೆ ಮತ್ತೆ ಸಂಕಷ್ಟ ಎದುರಾಗಿದೆ. ಮೃತ ಸಂತೋಷ್ ಪ್ರಕಣವನ್ನು ತನಿಖೆ ನಡೆಸಿ ಉಡುಪಿ ಪೊಲೀಸರು ಸಲ್ಲಿಸಿದ್ದ ಬಿ ರಿಪೋರ್ಟ್ ಪ್ರಶ್ನಿಸಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಸಂತೋಷ್ ಕುಟುಂಬಸ್ಥರು ತಕರಾರು ಅರ್ಜಿ ಸಲ್ಲಿಸಿ ಮತ್ತೊಮ್ಮೆ ಈಶ್ವರಪ್ಪನವರನ್ನು ಸಂಕಷ್ಟಕ್ಕೆ ಸಿಲುಕಿಸಿದ್ದಾರೆ ಎನ್ನಬಹುದು.

ಉಡುಪಿ ಪೊಲೀಸರು ಸಲ್ಲಿಸಿದ ಬಿ ರಿಪೋರ್ಟ್ ವಿರುದ್ಧ ನ್ಯಾಯಾಲಯದ ಮರೆಹೋದ ಸಂತೋಷ್ ಕುಟುಂಬ :


ಉಡುಪಿ ಪೊಲೀಸರು ನಡೆಸಿದ ತನಿಖೆ ನ್ಯಾಯಯುತವಾಗಿಲ್ಲ. ಪೂರ್ವಾಗ್ರಹ ಪೀಡಿತರಾಗಿ ತನಿಖೆ ನಡೆಸಿದ್ದಾರೆ. ಪಾರದರ್ಶಕ ತನಿಖೆಗಾಗಿ ಸಿಬಿಐ ಒಪ್ಪಿಸಬೇಕೆಂದು‌ ಕೋರಿ ಮೃತ ಸಂತೋಷ್ ಸಹೋದರ ಪ್ರಶಾಂತ್ ನ್ಯಾಯಲಯಕ್ಕೆ ತಕರಾರು ಅರ್ಜಿ ಸಲ್ಲಿಸಿದ್ದಾರೆ.‌ ಈ ಬಗ್ಗೆ‌ ಪ್ರತಿಕ್ರಿಯಿಸಿರುವ‌ ಪ್ರಶಾಂತ್, ಸಂತೋಷ್ ಆತ್ಮಹತ್ಯೆ ಹಿಂದೆ ಹಲವರ ಕೈವಾಡವಿದೆ‌ ನ್ಯಾಯಯುತವಾದ ತನಿಖೆ ಆಗಿಲ್ಲ ಈ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕೆಂದು ನ್ಯಾಯಾಲಯದ ಮರೆಹೋಗಿದ್ದಾರೆ…

ಪೊಲೀಸರ ತನಿಖೆ ವಿರುದ್ಧ ನ್ಯಾಯಾಲಯದ ಹೋರಾಟ ನಡೆಸುತ್ತೇವೆ ಎಂದ ಸಂತೋಷ್ ಕುಟುಂಬ :


ಉಡುಪಿ ಪೊಲೀಸರು ಸರಿಯಾಗಿ ತನಿಖೆ ನಡೆಸದೆ ಹಾದಿ ತಪ್ಪಿಸಿದ್ದಾರೆ. ತನಿಖೆಯಲ್ಲಿ ಹಲವು ಪ್ರಭಾವಗಳು ಇವೆ. ಹೀಗಾಗಿ ಪೊಲೀಸರು ಸಲ್ಲಿಸಿದ್ದ ಬಿ ರಿಪೋರ್ಟ್ ಪ್ರಶ್ನಿಸಿ ಕಾನೂನು ಹೋರಾಟ ನಡೆಸುತ್ತಿದ್ದೇನೆ ಎಂದಿದ್ದಾರೆ. ಗುತ್ತಿಗೆದಾರ ಸಂತೋಷ್‌ ಸರ್ಕಾರ ನೀಡಬೇಕಿದ್ದ ಬಿಲ್ ಮಂಜೂರು ಮಾಡಲು ಆಗಿನ ಗ್ರಾಮೀಣಾಭಿವೃದ್ಧಿ ಇಲಾಖೆ ಸಚಿವರಾಗಿದ್ದ ಕೆ.ಎಸ್.ಈಶ್ವರಪ್ಪ ಶೇ.40ರಷ್ಟು ಕಮೀಷನ್ ಕೇಳಿದ್ದರು ಎಂದು ಆರೋಪಿಸಿದ್ದರು. ಈ ಸಂಬಂಧ ಪ್ರಧಾನಿ ನರೇಂದ್ರಮೋದಿ, ರಾಜ್ಯಪಾಲರಿಗೂ ದೂರು ನೀಡಿದ್ದರು.

ರಾಷ್ಟ್ರೀಯ ಮಟ್ಟದಲ್ಲಿ ಚರ್ಚೆಯಾದ 40% ವಿಚಾರ :

ಈ ವಿಚಾರ ರಾಷ್ಟ್ರೀಯ ಮಟ್ಟದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿತ್ತು. ಕಳೆದ‌ ಏಪ್ರಿಲ್‌ನಲ್ಲಿ ಉಡುಪಿ ಲಾಡ್ಜ್‌ವೊಂದರಲ್ಲಿ ಈಶ್ವರಪ್ಪ ಹೆಸರು ಬರೆದು ಸಂತೋಷ್ ಆತ್ಮಹತ್ಯೆ ಮಾಡಿಕೊಂಡಿದ್ದ‌ರು. ಈ ಸಂಬಂಧ ಎಸ್‌ಪಿ ವಿಷ್ಣುವರ್ಧನ್ ನೇತೃತ್ವದ ತಂಡ ತನಿಖೆ ನಡೆಸಿ ನ್ಯಾಯಾಲಯಕ್ಕೆ ಬಿ ರಿಪೋರ್ಟ್ ಸಲ್ಲಿಸಿತ್ತು‌. ಈಗ ತನಿಖೆ ಸರಿಯಾಗಿ ನಡೆಸದೆ ಬಿ ರಿಪೋರ್ಟ್‌ ಸಲ್ಲಿಸಲಾಗಿದೆ ಎಂದು ಸಂತೋಷ್ ಕುಟುಂಬಸ್ಥರು ಕೋರ್ಟ್ ಮೆಟ್ಟಿಲೇರಿದ್ದಾರೆ…

ಮತ್ತೊಮ್ಮೆ ಸಂಕಷ್ಟದಲ್ಲಿ ಮಾಜಿ ಸಚಿವ ಈಶ್ವರಪ್ಪ :

ಸಂತೋಷ್ ಕುಟುಂಬದವರು ತನಿಖೆ ಸರಿಯಾಗಿ ಆಗಿಲ್ಲ ಇದನ್ನು ಸಿಬಿಐಗೆ ಒಪ್ಪಿಸಬೇಕು ಎಂದು ನ್ಯಾಯಾಲಯದ ಮರೆಹೋಗಿರುವುದರಿಂದ ಮಾಜಿ ಸಚಿವ ಈಶ್ವರಪ್ಪ ನವರಿಗೆ ಮತ್ತೆ ಸಂಕಷ್ಟ ಎದುರಾಗಿದೆ….

ರಘುರಾಜ್ ಹೆಚ್.ಕೆ…9449553305….

Related Articles

1 comment

GeorgeZew July 20, 2025 - 10:12 pm Reply

Leave a Comment

Latest news
ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...