Home ರಾಜ್ಯಕರ್ನಾಟಕದಲ್ಲಿ ಕನ್ನಡಕ್ಕೆ ಮೊದಲ ಆದ್ಯತೆ ಸರ್ಕಾರದ ಮಹತ್ವದ ಆದೇಶ..!! ಸರ್ಕಾರ ಹೊರಡಿಸಿರುವ ಸುತ್ತೋಲೆಯಲ್ಲಿ ಏನಿದೆ..?!

ಕರ್ನಾಟಕದಲ್ಲಿ ಕನ್ನಡಕ್ಕೆ ಮೊದಲ ಆದ್ಯತೆ ಸರ್ಕಾರದ ಮಹತ್ವದ ಆದೇಶ..!! ಸರ್ಕಾರ ಹೊರಡಿಸಿರುವ ಸುತ್ತೋಲೆಯಲ್ಲಿ ಏನಿದೆ..?!

by EDITOR NEWS WARRIORS
0 comments

ಬೆಂಗಳೂರು: ಕೇಂದ್ರ ಮತ್ತು ರಾಜ್ಯ ಸರ್ಕಾರದ ಕಾರ್ಯಕ್ರಮಗಳ ಆಯೋಜನೆಯಲ್ಲಿ ಇನ್ನು ಮುಂದೆ ಕನ್ನಡ ಕಡ್ಡಾಯವಾಗಿರಬೇಕು ಎಂದು ಕರ್ನಾಟಕ ಸರ್ಕಾರ ಅಧಿಕೃತ ಸುತ್ತೋಲೆ ಹೊರಡಿಸಿದೆ. ಕನ್ನಡ ಭಾಷೆ ನಮಗೆ ಆದ್ಯತೆ ಆಗಬೇಕು ಎಂದು ಸುತ್ತೋಲೆಯಲ್ಲಿ ಉಲ್ಲೇಖಿಸಲಾಗಿದ್ದು.

ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಈ ಸುತ್ತೋಲೆಯನ್ನು ಹೊರಡಿಸಿದ್ದಾರೆ.
ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳು ನಡೆಸುವ ಎಲ್ಲ ಕಾರ್ಯಕ್ರಮಗಳ ವೇದಿಕೆಯ ಮೇಲಿನ ಫಲಕಗಳು ಮತ್ತು ಪರದೆಗಳ ಮೇಲೆ ಕನ್ನಡವನ್ನು ಕಡ್ಡಾಯವಾಗಿ ಬಳಸಬೇಕು ಎಂದು ಸುತ್ತೋಲೆಯಲ್ಲಿ ಅಧಿಕೃವಾಗಿ ಆದೇಶ ಪ್ರಕಟ ಮಾಡಲಾಗಿದೆ.


ಸರ್ಕಾರ ಹೊರಡಿಸಿರುವ ಸುತ್ತೋಲೆಯಲ್ಲಿ ಏನಿದೆ?


ಕನ್ನಡವನ್ನು ಕರ್ನಾಟಕ ರಾಜ್ಯ ಭಾಷೆಯಾಗಿ ಬಳಸತಕ್ಕದ್ದು ಎಂದು ಕರ್ನಾಟಕ ರಾಜ್ಯ ಭಾಷಾ ಅಧಿನಿಯಮ, 1953ರಲ್ಲಿ ನಿರ್ದಿಷ್ಟಪಡಿಸಲಾಗಿದೆ. ಕರ್ನಾಟಕದಲ್ಲಿ ಕನ್ನಡವನ್ನು ಆಡಳಿತ ಭಾಷೆಯ ಜೊತೆಗೆ ಸಾರ್ವಭೌಮ ಭಾಷೆಯಾಗಿದೆ. ಕನ್ನಡವನ್ನು ರಾಜ್ಯದಲ್ಲಿ ಆಡಳಿತ ಭಾಷೆಯಾಗಿ ಅನುಷ್ಠಾನಗೊಳಿಸುವ ಸಂಬಂಧ ಕನ್ನಡ ಭಾಷೆ ಮತ್ತು ಕನ್ನಡಿಗರ ಹಿತಾಸಕ್ತಿಯನ್ನು ಕಾನೂನಿನ ಅನ್ವಯ ಸಂರಕ್ಷಿಸುವ ಸಲುವಾಗಿ ಕನ್ನಡ ಅಭಿವೃದ್ಧಿ ಪ್ರಾಧಿಕಾರ ರಚನೆಯಾಗಿದೆ.


ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರು ದಿನಾಂಕ 06//082022ರಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಕನ್ನಡ ಭಾಷೆಯನ್ನು ಬಳಸಿದಿರುವ ಬಗ್ಗೆ ಪ್ರಸ್ತಾಪಿಸಿದ್ದಾರೆ. ಈ ಬಗ್ಗೆ ವೇದಿಕೆಯ ಮೇಲೆ ಬಳಸಲಾಗುವ ಪರದೆ ಮತ್ತು ಫಲಕಗಳಲ್ಲಿ ಒಟ್ಟಾರೆಯಾಗಿ ಕಾರ್ಯಕ್ರಮದಲ್ಲಿ ಕನ್ನಡವನ್ನು ಕಡ್ಡಾಯವಾಗಿ ಬಳಸುವಂತೆ ಸರ್ಕಾರದ ಎಲ್ಲ ಇಲಾಖೆಗಳ ಮುಖ್ಯಸ್ಥರಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡುವಂತೆ ಕೋರಿರುತ್ತಾರೆ.


ಕನ್ನಡ ಭಾಷೆ ನಮಗೆ ಆದ್ಯತೆ ಆಗಬೇಕೇ ಹೊರತು ಆಯ್ಕೆಯಾಗಬಾರದು. ಈ ಹಿನ್ನೆಲೆಯಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರ ಪ್ರಸ್ತಾವನೆಯನ್ನು ಇನ್ನು ಮುಂದೆ ರಾಜ್ಯದಲ್ಲಿ ಜರುಗುವ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಂಬಂಧಿಸಿದ ಕಾರ್ಯಕ್ರಮಗಳ ಆಯೋಜನೆಯಲ್ಲಿ ಕನ್ನಡವನ್ನು ಕಡ್ಡಾಯವಾಗಿ ಬಳಸತಕ್ಕದ್ದೆಂದು ಸೂಚಿಸಲಾಗಿದೆ…

Related Articles

Leave a Comment

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...