Home ರಾಜ್ಯ“ಬಿಎಸ್ ವೈ” ಚಿತ್ತ ಸುಪ್ರೀಂಕೋರ್ಟ್ ನತ್ತ..!!! “ಕೆಎಸ್ಇ” ಸದನಕ್ಕೆ ಯಾಕೆ ಹೋಗ್ತಿಲ್ಲ ಗೊತ್ತಾ..?!

“ಬಿಎಸ್ ವೈ” ಚಿತ್ತ ಸುಪ್ರೀಂಕೋರ್ಟ್ ನತ್ತ..!!! “ಕೆಎಸ್ಇ” ಸದನಕ್ಕೆ ಯಾಕೆ ಹೋಗ್ತಿಲ್ಲ ಗೊತ್ತಾ..?!

by EDITOR NEWS WARRIORS
0 comments

ಬೆಂಗಳೂರು: ನಿಕಟಪೂರ್ವ ಮುಖ್ಯಮಂತ್ರಿಗಳಾದ ಬಿಎಸ್ ಯಡಿಯೂರಪ್ಪನವರು ತಮ್ಮ ಹಾಗೂ ತಮ್ಮ ಕುಟುಂಬದವರ ಮೇಲೆ ಲೋಕಾಯುಕ್ತದಲ್ಲಿ ದಾಖಲಾಗಿರುವ ಎಫ್ ಐ ಆರ್ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಾ.ನನಗೆ ದೇಶದ ಕಾನೂನು ವ್ಯವಸ್ಥೆಯಲ್ಲಿ ನಂಬಿಕೆಯಿದ್ದು, ಯಾವುದೇ ತಪ್ಪು ಮಾಡದ ನನಗೆ ನ್ಯಾಯ ಸಿಗುವ ವಿಶ್ವಾಸವಿದೆ ಎಂದು ಹೇಳಿದ್ದಾರೆ.

ದೇಶದ ಕಾನೂನಿನಲ್ಲಿ ತಾರತಮ್ಯ ಇಲ್ಲ ಎಂದ ಬಿ ಎಸ್ ವೈ :

ದೇಶದ ಕಾನೂನು ಎಲ್ಲರಿಗೂ ಒಂದೇ. ಇದರಲ್ಲಿ ಮೇಲು, ಕೀಳು ಎಂಬ ಬೇಧಭಾವ ಇಲ್ಲ. ನ್ಯಾಯಾಂಗದ ವ್ಯವಸ್ಥೆಯನ್ನು ನಾನು ಯಾವಾಗಲೂ ಗೌರವಿಸುತ್ತೇನೆ. ಈ ಪ್ರಕರಣದಲ್ಲಿ ನಾನು ಯಾವುದೇ ತಪ್ಪು ಮಾಡಿಲ್ಲ. ನ್ಯಾಯಾಲಯದ ತೀರ್ಪು ಏನು ಬರುತ್ತದೆಯೋ ನೋಡೋಣ ಎಂದರು.

ನ್ಯಾಯಾಧೀಶರ ತೀರ್ಮಾನವೇ ಅಂತಿಮ :


ಇಂದು ಸುಪ್ರೀಂಕೋರ್ಟ್‍ನಲ್ಲಿ ವಿಚಾರಣೆಗೆ ಬರುತ್ತದೆ. ನ್ಯಾಯಾೀಧಿಶರು ಏನು ತೀರ್ಮಾನ ತೆಗೆದುಕೊಳ್ಳುತ್ತಾರೋ ನೋಡೋಣ. ಅಲ್ಲಿಯ ತನಕ ಇದರ ಬಗ್ಗೆ ನಾನು ಯಾವುದೇ ಪ್ರತಿಕ್ರಿಯೆ ಕೊಡುವುದಿಲ್ಲ ಎಂದು ಹೇಳಿದರು.

ಬಿಡಿಎ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಯಡಿಯೂರಪ್ಪ ಅವರ ಪುತ್ರ ಬಿ.ವೈ.ವಿಜಯೇಂದ್ರ, ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಸೇರಿದಂತೆ ಮತ್ತಿತರರ ವಿರುದ್ಧ ಲೋಕಾಯುಕ್ತದಲ್ಲಿ ಎಫ್‍ಐಆರ್ ದಾಖಲಾಗಿದೆ.

ಸಚಿವ ಸ್ಥಾನ ಸಿಗದಿದ್ದಕ್ಕೆ ಅಧಿವೇಶನಕ್ಕೆ ಹೋಗುತ್ತಿಲ್ಲವೆಂದು ನೇರವಾಗಿ ಹೇಳಿದ ಮಾಜಿ ಸಚಿವ ಈಶ್ವರಪ್ಪ :


ಪಕ್ಷದ ವಿರುದ್ಧ ಅಸಮಾಧಾನವನ್ನು ಹೊರ ಹಾಕಿರುವ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ನವರು ವಿಧಾನಸಭಾ

ಕಲಾಪಕ್ಕೆ ಗೈರಾಗಿರುವುದಕ್ಕೆ ಕಾರಣ ತಮಗೆ ಸಚಿವ ಸ್ಥಾನ ಸಿಗದಿರುವುದು ಎಂದು ನೇರವಾಗಿ ಬಿಜೆಪಿ ವರಿಷ್ಠರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕೆ.ಎಸ್.
ಈಶ್ವರಪ್ಪ, ಸಚಿವ ಸ್ಥಾನ ಸಿಗದಿರುವುದಕ್ಕೆ ನನಗೆ ಅಸಮಾಧಾನವಿದೆ. ಹಾಗಾಗಿ ನಾನು ಸದನಕ್ಕೆ ಹೋಗಿಲ್ಲ ಎಂದು ಬಹಿರಂಗವಾಗಿ ಹೇಳಿದ್ದಾರೆ.

ಸಂಪುಟಕ್ಕೆ ಸೇರಿಸಿಕೊಳ್ಳುವುದು ಕೇಂದ್ರ ನಾಯಕರಿಗೆ ಬಿಟ್ಟದ್ದು. ನನಗೆ ಕ್ಲೀನ್ ಚಿಟ್ ಸಿಕ್ಕಿದರೂ ಸಚಿವ ಸ್ಥಾನ ನೀಡಲು ವಿಳಂಬ ಮಾಡುತ್ತಿದ್ದಾರೆ. ಹಾಗಾಗಿ ನನಗೆ ಬೇಸರವಾಗಿದೆ. ಇದನ್ನು ಮುಚ್ಚುಮರೆಯಿಲ್ಲದೇ ಹೇಳುತ್ತೇನೆ ಎಂದು ಅಸಮಾಧಾನ ಹೊರಹಾಕಿದ್ದಾರೆ.

ರಘುರಾಜ್ ಹೆಚ್.ಕೆ…9449553305…

Related Articles

Leave a Comment

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...