Home ರಾಜ್ಯಕೆಪಿಸಿಸಿ ಅಧ್ಯಕ್ಷರಾದ ಡಿಕೆ ಶಿವಕುಮಾರ್ ಅನುಮೋದನೆ ಮೇರೆಗೆ ಉಡುಪಿ ಜಿಲ್ಲೆಗೆ ಸಂಯೋಜಕರಾಗಿ ಕೆಪಿಸಿಸಿ ಕಾರ್ಯದರ್ಶಿ ಕೆ ದೇವೇಂದ್ರಪ್ಪ ಅವರನ್ನು ನೇಮಕ ಮಾಡಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಆದೇಶ..!!!

ಕೆಪಿಸಿಸಿ ಅಧ್ಯಕ್ಷರಾದ ಡಿಕೆ ಶಿವಕುಮಾರ್ ಅನುಮೋದನೆ ಮೇರೆಗೆ ಉಡುಪಿ ಜಿಲ್ಲೆಗೆ ಸಂಯೋಜಕರಾಗಿ ಕೆಪಿಸಿಸಿ ಕಾರ್ಯದರ್ಶಿ ಕೆ ದೇವೇಂದ್ರಪ್ಪ ಅವರನ್ನು ನೇಮಕ ಮಾಡಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಆದೇಶ..!!!

by EDITOR NEWS WARRIORS
0 comments

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ. ಡಿಕೆಶಿ ಕುಮಾರ್ ಅವರ ಅನುಮೋದನೆ ಮೇರೆಗೆ… ಕೆಪಿಸಿಸಿ ಕಾರ್ಯದರ್ಶಿ ಕೆ ದೇವೇಂದ್ರಪ್ಪ ನವರನ್ನು… ಉಡುಪಿ ಜಿಲ್ಲೆಗೆ ಸಂಯೋಜಕರಾಗಿನೇಮಕ ಮಾಡಲಾಗಿದೆ….

ಎಐಸಿಸಿ ಕಾರ್ಯದರ್ಶಿಗಳಾದ ಮಯೂರ ಜಯ ಕುಮಾರ್ ವರಿಗೆ ಸಹಾಯಕರಾಗಿ ಹಾಗೂ ಉಡುಪಿ ಜಿಲ್ಲೆಯಲ್ಲಿ ನಡೆಯುವಂತಹ ಎಲ್ಲಾ ಕಾರ್ಯಕ್ರಮಗಳಿಗೂ ಹಾಗೂ ಜಿಲ್ಲೆಯಲ್ಲಿ ಪಕ್ಷವನ್ನು ಸದೃಢವಾಗಿ ಕಟ್ಟಲು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಯಾಧ್ಯಕ್ಷರಾದ ಸಲೀಂ ಅಹ್ಮದ್ ಆದೇಶಿಸಿದ್ದಾರೆ…

ಕೆ ದೇವೇಂದ್ರಪ್ಪನವರ ಹಿನ್ನೆಲೆ :

ವಿದ್ಯಾರ್ಥಿ ಸಂಘಟನೆಯಿಂದ ಬಂದು ನಿರಂತರವಾಗಿ ಹೋರಾಟಗಳನ್ನು ಮಾಡುತ್ತಾ, ಹಲವು ಸಮಸ್ಯೆಗಳಿಗೆ ಧ್ವನಿ ಯಾಗುತ್ತಾ, ಸದಾ ನೊಂದವರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಾ ಬಂದಿರುವ ದೇವೇಂದ್ರಪ್ಪ ರಾಜಕೀಯದಲ್ಲೂ ಕೂಡ ಹಂತ ಹಂತವಾಗಿ ತಮ್ಮ ಸ್ಥಾನವನ್ನು ತಮ್ಮ ಪಕ್ಷ ನಿಷ್ಠೆಯಿಂದ ಸಂಘಟನೆಯಿಂದ ಉಳಿಸಿಕೊಂಡು ಬರುತ್ತಿದ್ದಾರೆ. ಪಕ್ಷದ ನಿಲುವುಗಳಿಗೆ ಬದ್ಧರಾಗಿ ಸದಾ ಪಕ್ಷದ ಪರವಾಗಿ ಕಾರ್ಯನಿರ್ವ ಸುತ್ತ ಪಕ್ಷದ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತಿರುವ ದೇವೇಂದ್ರಪ್ಪನವರಿಗೆ ಈಗಾಗಲೇ ಬಳ್ಳಾರಿ ದಾವಣಗೆರೆ, ಚಿಕ್ಕಮಂಗಳೂರು, ನೂತನ ವಿಜಯನಗರ ಜಿಲ್ಲೆಯಲ್ಲೂ ಕೂಡ ಪಕ್ಷ ಬಲವರ್ಧನೆ ಹಾಗೂ ಚುನಾವಣೆಯಲ್ಲಿ ಕೆಲಸ ಮಾಡಿದ ಸಾಕಷ್ಟು ಅನುಭವವಿದೆ ಕೇವಲ ಸ್ಥಳೀಯವಾಗಿ ಗುರುತಿಸಿಕೊಳ್ಳದೆ ರಾಜ್ಯಮಟ್ಟದಲ್ಲಿ ಪಕ್ಷದಲ್ಲಿ ಉತ್ತಮ ಹೆಸರು ಉಳಿಸಿಕೊಂಡಿರುವ ದೇವೆಂದ್ರಪ್ಪನವರನ್ನು ಗುರುತಿಸಿ ಅಧ್ಯಕ್ಷರಾದ ಡಿಕೆ ಶಿವಕುಮಾರ್ ಅವರು ಈ ಜವಾಬ್ದಾರಿಯನ್ನು ವಹಿಸಿದ್ದಾರೆ ಎನ್ನುತ್ತಿವೆ ಕಾಂಗ್ರೆಸ್ ಮೂಲಗಳು… ನೂತನ ಜವಾಬ್ದಾರಿ ಬಗ್ಗೆ ಪತ್ರಿಕೆ ಜೊತೆ ತನ್ನ ಅನಿಸಿಕೆಯನ್ನು ಹಂಚಿಕೊಂಡ ದೇವೆಂದ್ರಪ್ಪ ತನಗೆ ವಹಿಸಿರುವ ಈ ನೂತನ ಜವಾಬ್ದಾರಿಯನ್ನು ಉತ್ತಮವಾಗಿ ನಿರ್ವಹಿಸುತ್ತೇನೆ ಪಕ್ಷದ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತೇನೆ ಈ ನೂತನ ಜವಾಬ್ದಾರಿ ವಹಿಸಿದ ಅಧ್ಯಕ್ಷರಿಗೂ ಕಾರ್ಯಧ್ಯಕ್ಷರಿಗೂ ಪಕ್ಷದ ಎಲ್ಲಾ ಹಿರಿಯರಿಗೂ ನನ್ನ ವಂದನೆಗಳನ್ನು ಸಲ್ಲಿಸುತ್ತೇನೆ ಎಂದರು…

ರಘುರಾಜ್ ಹೆಚ್. ಕೆ …9449553305….

Related Articles

Leave a Comment

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...