Home ರಾಜ್ಯಭೂತಾನ್ ಅಡಿಕೆ ಅಮದು ವಿಚಾರವಾಗಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಪ್ರತಿಕ್ರಿಯೆ..!!! ರೈತರಿಗೆ ಧೈರ್ಯ ತುಂಬಿದ ಗೃಹ ಸಚಿವರು ಹೇಳಿದ್ದೇನು..?!

ಭೂತಾನ್ ಅಡಿಕೆ ಅಮದು ವಿಚಾರವಾಗಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಪ್ರತಿಕ್ರಿಯೆ..!!! ರೈತರಿಗೆ ಧೈರ್ಯ ತುಂಬಿದ ಗೃಹ ಸಚಿವರು ಹೇಳಿದ್ದೇನು..?!

by EDITOR NEWS WARRIORS
0 comments


ಕೇಂದ್ರ ಸರ್ಕಾರ ಭೂತಾನ್ ದೇಶದಿಂದ 17,000 ಟನ್ ಹಸಿ ಅಡಿಕೆ ಆಮದು ಮಾಡಿಕೊಳ್ಳುವ ನಿರ್ದಾರ ಕೈಗೊಂಡಿದೆ .ಆದರೆ ಈ ವಿಷಯಕ್ಕೆ ಸಂಬಂಧಿಸಿದಂತೆ ಸಾಕಷ್ಟು ಚರ್ಚೆಗಳು ಆರಂಭ ಆಗಿದೆ.
ಇದಕ್ಕೆ ಸಂಬಂಧಿಸಿದಂತೆ ಗೃಹ ಸಚಿವರು ರಾಜ್ಯ ಅಡಿಕೆ ಕಾರ್ಯಪಡೆಯ ಅಧ್ಯಕ್ಧರು ಆಗಿರುವ ಆರಗ ಜ್ಞಾನೇಂದ್ರ ಅವರು ಪ್ರತಿಕ್ರಿಯೆ ನೀಡಿದ್ದು.

ಇದು ರಾಜಕೀಯ ಪ್ರೇರಿತವಾಗಿ ಪರಿವರ್ತನೆಗೊಂಡಿರುವುದು ಒಳ್ಳೆಯ ಬೆಳವಣಿಗೆ ಅಲ್ಲ ಭೂತಾನ್ ಅಡಿಕೆ ಆಮದು ನಿರ್ದಾರಕ್ಕೆ ಹೆಚ್ಚು ಕಿವಿಗೊಡದಿರಿ ಕರ್ನಾಟಕದ ಅದರಲ್ಲಿಯೂ ಮಲೆನಾಡ ಅಡಿಕೆ ಬೆಳೆಗಾರರು ಆತಂಕ ಪಡುವ ಅಗತ್ಯವಿಲ್ಲ..ಈ ಆಮದು ಪ್ರಕ್ರಿಯೆ ನಿರ್ದಾರ ಹಿಂದೆ 2006 ಸಾರ್ಕ್ ದೇಶಗಳ ಒಪ್ಪಂದಕ್ಕೆ ಸಂಬಂಧಿಸಿದ ದೇಶದ ಆಂತರಿಕ ಪ್ರಕ್ರಿಯೆ ಆಗಿದ್ದು .ಪರಸ್ಪರ ಅಮದು ಮತ್ತು ರಫ್ತುಗಳನ್ನು ದೇಶ ದೇಶಗಳ ನಡುವೆ ಮಾಡಿಕೊಳ್ಳಬೇಕಾಗುತ್ತದೆ. ಆ ಪ್ರಕ್ರಿಯೆಯಲ್ಲಿ ಭಾರತದಿಂದಲೂ ಕೂಡ ಭೂತಾನಿಗೆ ಅಡಿಕೆ ರಫ್ತಾಗುತ್ತದೆ. ಆದರೂ ಕೇಂದ್ರ ಸರ್ಕಾರದೊಂದಿಗೆ ಮತ್ತೊಮ್ಮೆ ಚರ್ಚಿಸಿ ಈ ಪ್ರಕ್ರಿಯೆಯನ್ನು ಕೂಡ ನಿಲ್ಲಿಸುವ ಪ್ರಯತ್ನವನ್ನು ಮಾಡಲಾಗುವುದು. ರೈತರು ಯಾವುದೇ ಆತಂಕ ಪಡುವ ಅಗತ್ಯತೆ ಇಲ್ಲ, ಇದರಲ್ಲಿ ರಾಜಕೀಯ ಮಾಡುವ ಅಗತ್ಯತೆ ಕೂಡ ಇಲ್ಲ, ಹಿಂದೆ ಕೂಡ ಸಾಕಷ್ಟು ಸಲ ಇದೇ ತರ ಸಮಸ್ಯೆಗಳು ಸಂಭವಿಸಿದಾಗ ಕೇಂದ್ರ ಸರ್ಕಾರದೊಂದಿಗೆ ಚರ್ಚಿಸಿ ನಿಯೋಗವನ್ನು ತೆಗೆದುಕೊಂಡು ಹೋಗಿ ಸೂಕ್ತ ಪರಿಹಾರವನ್ನು ಒದಗಿಸಲಾಗಿದೆ. ಈಗ ಕೂಡ ಅದೇ ದಾರಿಯಲ್ಲಿ ಮುಂದುವರಿಯುತ್ತೇವೆ. ಎಂದು ಸಮಸ್ತ ಅಡಿಕೆ ಬೆಳೆಗಾರರಿಗೆ ಗೃಹ ಸಚಿವರಾದ ಆರಗ ಜ್ಞಾನೇಂದ್ರ ಅವರು ಧೈರ್ಯ ತುಂಬಿದ್ದಾರೆ.

ರಘುರಾಜ್ ಹೆಚ್.ಕೆ…9449553305….

Related Articles

Leave a Comment

Latest news
ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...