Home ರಾಜ್ಯಅಂತರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಪ್ರಯುಕ್ತ ‘ಒಂದು ದಿನದ ಯುವ ಕ್ರೀಡಾಧಿಕಾರಿ’..!!

ಅಂತರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಪ್ರಯುಕ್ತ ‘ಒಂದು ದಿನದ ಯುವ ಕ್ರೀಡಾಧಿಕಾರಿ’..!!

by EDITOR NEWS WARRIORS
0 comments



ಶಿವಮೊಗ್ಗ::ಅ.11 ರ ಅಂತರಾಷ್ಟ್ರೀಯ ಹೆಣ್ಣುಮಕ್ಕಳ ದಿನಾಚರಣೆ ಪ್ರಯುಕ್ತ ಶಿವಮೊಗ್ಗದ ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜಿನ ದ್ವಿತೀಯ ಬಿ.ಕಾಂ ವಿದ್ಯಾರ್ಥಿನಿ ಕು. ಶಾಲಿನಿ.ಎಸ್ ರವರು ‘ಒಂದು ದಿನದ ಯುವ ಕ್ರೀಡಾಧಿಕಾರಿ’ಯಾಗಿ ಆಯ್ಕೆಯಾಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಸಹಾಯಕ ನಿರ್ದೇಶಕರ ಮಾರ್ಗದರ್ಶನದಲ್ಲಿ ಕಾರ್ಯ ನಿರ್ವಹಿಸಿದರು.
ರಾಜ್ಯ ಸರ್ಕಾರ ಅಂತರಾಷ್ಟ್ರೀಯ ಹೆಣ್ಣುಮಕ್ಕಳ ದಿನಾಚರಣೆ ಪ್ರಯುಕ್ತ 18 ರಿಂದ 23 ವಯೋಮಿತಿಯ ಯುವತಿಯರಿಗೆ ‘ಒಂದು ದಿನದ ಯುವ ಕ್ರೀಡಾಧಿಕಾರಿ’ಯಾಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಜಿಲ್ಲಾ ಕಚೇರಿಯಲ್ಲಿ ಕಾರ್ಯ ನಿರ್ವಹಿಸಲು ಆನ್‍ಲೈನ್ ಅರ್ಜಿ ಕರೆದಿದ್ದು ಅದರಂತೆ ಅರ್ಜಿ ಸಲ್ಲಿಸಿ, ಆಯ್ಕೆಯಾದ ಶಾಲಿನಿ.ಎಸ್ ನೆಹರೂ ಕ್ರೀಡಾಂಗಣದ ಮುಖ್ಯದ್ವಾರದಲ್ಲಿರುವ ಕ್ರೀಡಾ ಇಲಾಖೆಯಲ್ಲಿ ಅ.11 ರಂದು ಒಂದು ದಿನದ ಯುವ ಕ್ರೀಡಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದರು.


ಸಹಾಯಕ ನಿರ್ದೇಶಕರ ಬಳಿ ಇಲಾಖೆಯ ಕಾರ್ಯವೈಖರಿ, ಕ್ರೀಡಾ ಚಟುವಟಿಕೆ ವಿಭಾಗ, ಕಾರ್ಯಕ್ರಮಗಳು, ಅದರ ಸಂಘಟನೆ, ಅನುದಾನ, ಒಳಾಂಗಣ, ಹೊರಾಂಗಣ ಕ್ರೀಡಾಂಗಣಗಳಲ್ಲಿನ ಸೌಕರ್ಯಗಳು, ನಿರ್ವಹಣೆ, ವ್ಯಾಯಾಮಶಾಲೆ, ಕ್ರೀಡಾ ಸಂಕೀರ್ಣದಲ್ಲಿನ ಈಜುಕೊಳ, ಟೆನಿಸ್ ಅಂಕಣ, ಸ್ಕೇಟಿಂಗ್ ಅಂಕಣ, ಕ್ರೀಡಾಂಗಣ ಸದಸ್ಯತ್ವ ಶುಲ್ಕ, ಸಿಬ್ಬಂದಿ ವಿವರ ಕುರಿತು ಹಾಗೂ ಜಿಲ್ಲಾ ಕ್ರೀಡಾಶಾಲೆ/ವಸತಿ ನಿಲಯದದ ಕುರಿತು ಸವಿಸ್ತಾರವಾಗಿ ತಿಳಿದುಕೊಂಡರು. ನಂತರ ಜಿಲ್ಲಾ ಮಟ್ಟದ ವಾಲಿಬಾಲ್, ವಿಭಾಗ ಮಟ್ಟದ ಫುಟ್‍ಬಾಲ್ ಹಾಗೂ ರಾಜ್ಯ ಮಟ್ಟದ ಪದವಿಪೂರ್ವ ಕಾಲೇಜಿನ ಕರಾಟೆ ಕ್ರೀಡಾಕೂಟದಲ್ಲಿ ಭಾಗವಹಿಸಿದರು. ಹಾಗೂ ಇಲಾಖೆ ಕುರಿತಾದ ಸಂಪೂರ್ಣ ಮಾಹಿತಿ ಪಡೆದುಕೊಂಡ ಅವರು ಯುವ ಕ್ರೀಡಾಧಿಕಾರಿಯಾಗಿ ಕಾರ್ಯ ನಿರ್ವಹಿಸಿ ಸಂತಸ ವ್ಯಕ್ತಪಡಿಸಿದರು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಮಂಜುನಾಥಸ್ವಾಮಿ ತಿಳಿಸಿದ್ದಾರೆ.

ರಘುರಾಜ್ ಹೆಚ್‌.ಕೆ…9449553305…

Related Articles

Leave a Comment

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...