Home ರಾಜ್ಯನೂತನ ಅಧ್ಯಕ್ಷರಾಗಿ ಯೋಗೇಶ ಅವಿರೋಧ ಆಯ್ಕೆ ಸಾಲ ವಸೂಲಾತಿಗೆ ಆದ್ಯತೆ: ಯೋಗೇಶ್..!!

ನೂತನ ಅಧ್ಯಕ್ಷರಾಗಿ ಯೋಗೇಶ ಅವಿರೋಧ ಆಯ್ಕೆ ಸಾಲ ವಸೂಲಾತಿಗೆ ಆದ್ಯತೆ: ಯೋಗೇಶ್..!!

by EDITOR NEWS WARRIORS
0 comments


ಶಿವಮೊಗ್ಗ: ಜಿಲ್ಲಾ ಅನುದಾನಿತ ಶಿಕ್ಷಣ ಸಂಸ್ಥೆ ನೌಕರರ ಸಹಕಾರ ಸಂಘ ನಿ.ದ ನೂತನ ಅಧ್ಯಕ್ಷರಾಗಿ ಸಂಘದ ನಿರ್ದೇಶಕರೂ ಆದ ಹೊಳಲೂರು ಮಾರುತಿ ಪ.ಪೂ.ಕಾಲೇಜಿನ (ಹೈಸ್ಕೂಲ್ ವಿಭಾಗ) ಮುಖ್ಯೋಪಾಧ್ಯಾಯರಾದ ಯೋಗೇಶ್ ಎಸ್. ಅವರು ಅವಿರೋಧವಾಗಿ ಆಯ್ಕೆ ಆಗಿದ್ದಾರೆ.
ಅಧಿಕಾರ ಸ್ವೀಕರಿಸಿ ಮಾತನಾಡಿದ ಅವರು ಸರ್ಕಾರದ ಕೆ-2 ಜಾರಿಯಿಂದಾಗಿ ಸಾಲ ಮರುಪಾವತಿಗೆ ಸಮಸ್ಯೆಯಾಗಿದೆ. ಆ ಕುರಿತು ಸರ್ಕಾರದ ಮಟ್ಟದಲ್ಲಿ ಪ್ರಯತ್ನಿಸಿ ಸಮಸ್ಯೆ ಬಗೆಹರಿಸುವುದಾಗಿ ಭರವಸೆ ನೀಡಿದರು.
ಸಾಲ ಪಡೆದ ಸಂಘದ ಸದಸ್ಯಸು ಮರು ಪಾವತಿಗೂ ಆದ್ಯ ಗಮನ ನೀಡಬೇಕು. ಆಯಾ ಶಿಕ್ಷಣ ಸಂಸ್ಥೆಯ ಮುಖ್ಯಸ್ಥರೂ ಮುತುವರ್ಜಿ ವಹಿಸಬೇಕು ಎಂದು ಅವರು ವಿನಂತಿಸಿದರಲ್ಲದೆ ಸುಸ್ತಿದಾರರು ಸಾಲ ಮರುಪಾವತಿ ಮಾಡಿ ಮುಂದಾಗುವ ಕಾನೂನಾತ್ಮಕ ತೊಡಕುಗಳಿಂದ ಪಾರಾಗಬೇಕು ಎಂದು ಕಿವಿಮಾತು ಹೇಳಿದರು.
ತಾವು ಅಧ್ಯಕ್ಷರಾಗಿ ಅವಿರೋಧ ಆಯ್ಕೆಯಾಗಲು ಸಹಕರಿಸಿದ ಆಡಳಿತ ಮಂಡಳಿಯ ಎಲ್ಲ ನಿರ್ದೇಶಕರಿಗೆ ಅವರು ಇದೇ ಸಂದರ್ಭದಲ್ಲಿ ಧನ್ಯವಾದ ಸಲ್ಲಿಸಿದರು.
ಸಂಘದ ನಿಕಟಪೂರ್ವ ಅಧ್ಯಕ್ಷರಾದ ಡಾ.ಬಾಲಕೃಷ್ಣ ಹೆಗಡೆ, ಎಚ್.ಪ್ರಭಾಕರ, ಎಸ್.ಎಚ್.ಪ್ರಶಾಂತ, ಉಪಾಧ್ಯಕ್ಷರಾದ ಬಿ.ಎಂ.ರಘು, ನಿರ್ದೇಶಕರಾದ ಜ್ಯೋತಿ, ರಾಜು, ಕೆಂಚಮ್ಮ, ಸುರೇಶ, ಪರಶುರಾಮಪ್ಪ, ರುದ್ರಪ್ಪ, ಮಂಜಪ್ಪ ಮೊದಲಾದವರಿದ್ದರು.
ಸಹಕಾರ ಸಂಘಗಳ ಇಲಾಖೆಯ ಶ್ರೀಮತಿ ಜಲಜಾಕ್ಷಿ ಚುನಾವಣಾ ಅಧಿಕಾರಿಯಾಗಿ ಕಾರ್ಯ ನಿರ್ವಹಿಸಿದರು.

ರಘುರಾಜ್ ಹೆಚ್.ಕೆ…9449553305…

Related Articles

Leave a Comment

Latest news
ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...