Home ರಾಜ್ಯKARANATAKA BJP POLITICAL BREAKING::ಗುಜರಾತ್ ಮಾದರಿಯಲ್ಲಿ ಕರ್ನಾಟಕದಲ್ಲಿ ಬಿಜೆಪಿ ಟಿಕೆಟ್ ಹಂಚಿಕೆ..!! ಒಂದು ಕುಟುಂಬದಲ್ಲಿ ಒಬ್ಬರಿಗೇ ಟಿಕೆಟ್‌ ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿಕೆ ಕರ್ನಾಟಕ ಬಿಜೆಪಿ ವಲಯದಲ್ಲಿ ಚರ್ಚೆಗೆ ಗ್ರಾಸವಾದ ಯತ್ನಾಳ್ ಹೇಳಿಕೆ..!!!

KARANATAKA BJP POLITICAL BREAKING::ಗುಜರಾತ್ ಮಾದರಿಯಲ್ಲಿ ಕರ್ನಾಟಕದಲ್ಲಿ ಬಿಜೆಪಿ ಟಿಕೆಟ್ ಹಂಚಿಕೆ..!! ಒಂದು ಕುಟುಂಬದಲ್ಲಿ ಒಬ್ಬರಿಗೇ ಟಿಕೆಟ್‌ ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿಕೆ ಕರ್ನಾಟಕ ಬಿಜೆಪಿ ವಲಯದಲ್ಲಿ ಚರ್ಚೆಗೆ ಗ್ರಾಸವಾದ ಯತ್ನಾಳ್ ಹೇಳಿಕೆ..!!!

by EDITOR NEWS WARRIORS
0 comments

ಕರ್ನಾಟಕದಲ್ಲಿಯೂ ಈ ಬಾರಿ ಗುಜರಾತ್‌ ಮಾದರಿಯಲ್ಲೇ ಬಿಜೆಪಿ ಟಿಕೆಟ್‌ ನೀಡಲಾಗುತ್ತದೆ. ಒಂದು ಕುಟುಂಬದಲ್ಲಿ ಒಬ್ಬರಿಗೇ ಟಿಕೆಟ್‌ ಸಿಗುತ್ತದೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೂಸ ಬಾಂಬ್ ಸಿಡಿಸಿದ್ದು ಇದು ಈಗ ಕರ್ನಾಟಕ ಬಿಜೆಪಿ ವಲಯದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ…


ಯತ್ತಾಳ್ ಮುಂದುವರೆದು ಮಾತನಾಡುತ್ತಾ, ಈ ಸಲ ಬಹಳಷ್ಟು ಜನರನ್ನು ಬದಲಾವಣೆ ಮಾಡುತ್ತಾರೆ. ಯಾರ ಮೇಲೆ ಆರೋಪ ಇದೆ ಅಂಥವರನ್ನು ತೆಗೆಯುವುದು, ಒಂದೇ ಕುಟುಂಬದಲ್ಲಿ ಎರಡು ಮೂರು ಟಿಕೆಟ್‌ ಸಿಗುವುದಿಲ್ಲ. ಒಂದು ಕುಟುಂಬದಲ್ಲಿ ಬಹಳ ಜನ ಜಾಕೆಟ್‌ ಹೊಲಿಸಿಕೊಂಡು ಕುಳಿತಿದ್ದಾರೆ. ಅಪ್ಪ-ಮಕ್ಕಳು, ಅಣ್ಣ-ತಮ್ಮ ಅವರಿಗೆ ಟಿಕೆಟ್‌ ಸಿಗುವುದಿಲ್ಲ. ಒಂದು ಕುಟುಂಬಕ್ಕೆ ಒಂದು ಟಿಕೆಟ್‌ ಸಿಗುತ್ತದೆ. ಕರ್ನಾಟಕದ ಬಿಜೆಪಿಯಲ್ಲಿ ಕುಟುಂಬ ರಾಜಕಾರಣಕ್ಕೆ ಬ್ರೇಕ್‌ ಬೀಳುತ್ತದೆ ಎಂದಿದ್ದಾರೆ..

ಹಾಗೆ ಸಂಪುಟ ವಿಸ್ತರಣೆಯ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ ಯತ್ನಾಳ್, ಸಂಪುಟ ವಿಸ್ತರಣೆ ಯಾರಿಗೆ ಬೇಕು, ಎಲ್ಲವನ್ನೂ ಬೊಮ್ಮಾಯಿ ಅವರೇ ಇಟ್ಟುಕೊಳ್ಳಲಿ ಹತ್ತಲ್ಲ ಎಲ್ಲ ಖಾತೆಗಳನ್ನೂ ಅವರೇ ಇಟ್ಟುಕೊಂಡಿರಲಿ. 3-4 ತಿಂಗಳು ಉಳಿದಿದೆ. ಅಷ್ಟರಲ್ಲಿ ಏನೂ ಅಭಿವೃದ್ಧಿ ಮಾಡಲು ಆಗುವುದಿಲ್ಲ. ಮುಂದಿನ ಚುನಾವಣೆಯಲ್ಲಿ ಎಲ್ಲರೂ ಮಂತ್ರಿ ಆಗಬೇಕು ಅಂತ ಸುಮ್ಮನಿದ್ದಾರೆ.


ಸಮೀಕ್ಷೆಯಲ್ಲಿ ಬಿಜೆಪಿಗೆ ಹಿನ್ನಡೆ ಆಗುತ್ತಿದೆ ಎಂಬುದು ಸುಳ್ಳು. ಗುಜರಾತ್‌, ಉತ್ತರ ಪ್ರದೇಶದಲ್ಲಿಯೂ ಹೀಗೆಯೇ ಹೇಳಿದರೂ ಬಿಜೆಪಿಯೇ ಗೆದ್ದಿತು. ಕರ್ನಾಟಕದಲ್ಲಿ ಮೋದಿ ಪ್ರವಾಸ ಮಾಡುತ್ತಾರೆ. ಯಡಿಯೂರಪ್ಪ ಅವರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ರಾಷ್ಟ್ರೀಯ ಕಾರ್ಯಕಾರಣಿ ಸದಸ್ಯರನ್ನಾಗಿ ಮಾಡಿದ್ದಾರೆ. ಬೊಮ್ಮಾಯಿ ಮತ್ತು ಯಡಿಯೂರಪ್ಪ ಕ್ಷೇತ್ರ ಸಂಚಾರ ಮಾಡಬೇಕು. ಎಲ್ಲರೂ ತಮ್ಮ ತಮ್ಮ ಕ್ಷೇತ್ರದಲ್ಲಿ ಸಂಚಾರ ಮಾಡುತ್ತಾರೆ. ನಾನು ಕ್ಷೇತ್ರದಲ್ಲಿ ಸಂಚಾರ ಮಾಡುವ ಅಗತ್ಯವಿಲ್ಲ, ರಾಜ್ಯಾದ್ಯಂತ ಸಂಚರಿಸುತ್ತೇನೆ ಎಂದರು.

ಒಟ್ಟಿನಲ್ಲಿ ಒಂದು ಕುಟುಂಬದಲ್ಲಿ ಒಂದೇ ಟಿಕೆಟ್ ಎನ್ನುವ ಯತ್ನಾಳ್ ಹೇಳಿಕೆ ಕರ್ನಾಟಕ ಬಿಜೆಪಿ ವಲಯದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದ್ದು ಯಾರನ್ನು ಉದ್ದೇಶಿಸಿ ಈ ಹೇಳಿಕೆ ಯತ್ನಾಳ್ ನೀಡಿದ್ದಾರೆ… ಮಾಜಿ ಮುಖ್ಯಮಂತ್ರಿ ಬಿಎಸ್ ವೈ ಪುತ್ರರ ಮೇಲೆ ಯತ್ನಾಳ್ ಕಣ್ಣು ಬಿದ್ದಿದ್ದೀಯಾ..?! ಏನೇ ಆಗಲಿ ಮುಂದೆ ಟಿಕೆಟ್ ಹಂಚಿಕೆಯಲ್ಲಿ ಇವೆಲ್ಲ ಗೊಂದಲಗಳು ಪರಿಹಾರವಾಗಲಿದೆ….

ರಘುರಾಜ್ ಹೆಚ್.ಕೆ..9449553305…

Related Articles

Leave a Comment

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...