Home ರಾಜ್ಯಜೆಡಿಎಸ್ ರಾಜ್ಯ ಕಾರ್ಯದರ್ಶಿಯಾಗಿ ಅರ್ ಎ ಚಾಬುಸಾಬ್ ನೇಮಕ..!!

ಜೆಡಿಎಸ್ ರಾಜ್ಯ ಕಾರ್ಯದರ್ಶಿಯಾಗಿ ಅರ್ ಎ ಚಾಬುಸಾಬ್ ನೇಮಕ..!!

by EDITOR NEWS WARRIORS
0 comments

ಜೆಡಿಎಸ್ ಪಕ್ಷದ ರಾಜ್ಯ ಕಾರ್ಯದರ್ಶಿಯಾಗಿ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ನಿವಾಸಿ ಆರ್. ಎ. ಚಾಬುಸಾಬ್ ಅವರನ್ನು ನೇಮಿಸಿ ಪಕ್ಷದ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ಆದೇಶ ನೀಡಿದ್ದಾರೆ.

ಸುಮಾರು 30 ವರ್ಷಗಳಿಗೂ ಹೆಚ್ಚು ಕಾಲ ಜೆಡಿಎಸ್ ಪಕ್ಷದ ಕಟ್ಟಾಳಾಗಿ ವಿವಿಧ ಹುದ್ದೆಗಳಲ್ಲಿ ಕಾರ್ಯ ನಿರ್ವಹಿಸಿರುವ ಚಾಬುಸಾಬ್ ಅವರು ಎರಡನೇ ಬಾರಿಗೆ ರಾಜ್ಯ ಕಾರ್ಯದರ್ಶಿ ಹುದ್ದೆ ಅಲಂಕರಿಸುತ್ತಿದ್ದಾರೆ. ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷಕ್ಕೆ ಅಸ್ತಿತ್ವವೇ ಇಲ್ಲದೇ ಇರುವಾಗ ಪಕ್ಷ ಸಂಘಟನೆಗಾಗಿ ಹಾಗೂ ಪಕ್ಷದ ಜಿಲ್ಲಾ ಕಚೇರಿ ಉಳಿವಿಗಾಗಿ ಹೋರಾಟ ನಡೆಸಿದವರಲ್ಲಿ ಪ್ರಮುಖರಾಗಿದ್ದಾರೆ.

ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ಆಪ್ತ ಬಳಗದಲ್ಲಿ ಕಂಡುಬರುವ ಇವರ ನೇಮಕಾತಿಯನ್ನು ಪಕ್ಷದ ತಾಲೂಕು ಅಧ್ಯಕ್ಷ ವರ್ತೆಶ್, ಪ್ರಧಾನ ಕಾರ್ಯದರ್ಶಿ ಜಯರಾಮ ಶೆಟ್ಟಿ ಸ್ವಾಗತಿಸಿದ್ದಾರೆ.

ಓಂಕಾರ ಎಸ್. ವಿ. ತಾಳಗುಪ್ಪ…

Related Articles

Leave a Comment

Latest news
ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್...! ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ...?! ಡಾ. ಮೈತ್ರಿ... Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ...