Home ರಾಜ್ಯ“ಪಿಡಿಒ ಅಮಾನತು” ಚೋರಡಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ, ಉಪಾಧ್ಯಕ್ಷೆ, ಸದಸ್ಯರು, ಗ್ರಾಮಸ್ಥರಿಂದ ಇಡೀ ರಾತ್ರಿ ಧರಣಿ..!!

“ಪಿಡಿಒ ಅಮಾನತು” ಚೋರಡಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ, ಉಪಾಧ್ಯಕ್ಷೆ, ಸದಸ್ಯರು, ಗ್ರಾಮಸ್ಥರಿಂದ ಇಡೀ ರಾತ್ರಿ ಧರಣಿ..!!

by EDITOR NEWS WARRIORS
3 comments

ಶಿವಮೊಗ್ಗ :- ಚೋರಡಿ ಗ್ರಾಮ ಪಂಚಾಯಿತಿ ಗ್ರಾಪಂ ಪಿಡಿಒ ಅವರನ್ನು ಕಾರಣವೇ ಇಲ್ಲದೇ ಜಿಪಂ ಸಿಇಒ ಅಮಾನತು ಮಾಡಿದ್ದಾರೆ. ಜಿಲ್ಲಾ ಪಂಚಾಯಿತಿ ಸಿಇಒ ಸ್ಥಳಕ್ಕೆ ಆಗಮಿಸಿ ಅಮಾನತು ಹಿಂದಕ್ಕೆ ಪಡೆಯುವವರೆಗೆ ಗ್ರಾಪಂ ಕಚೇರಿ ಬೀಗ ತೆರೆಯಲೂ ಬಿಡುವುದಿಲ್ಲ ಎಂದು ಗ್ರಾಪಂ ಸದಸ್ಯರು ಮತ್ತು ಸಾರ್ವಜನಿಕರು ಅಹೋರಾತ್ರಿ ಧರಣಿ ನಡೆಸಿದರು.
ತಾಲೂಕಿನ ಚೋರಡಿ ಗ್ರಾಪಂ ಆವರಣದಲ್ಲಿ ಸದಸ್ಯರು ಅಹೋರಾತ್ರಿ ಅರ್ನಿದಿಷ್ಟಾವಧಿ ಧರಣಿ ನಡೆಸಿದ್ದಾರೆ.

ಗ್ರಾಮದಲ್ಲಿ ಪಶು ಆಸ್ಪತ್ರೆ ನಿರ್ಮಾಣ ಸಂಬಂಧ ಹಿಂದೆಯೇ ಜಾಗ ಗುರುತಿಸಲಾಗಿದೆ. ಆ ಜಾಗವನ್ನು ಸ್ವಚ್ಛ ಮಾಡಲು ಎಲ್ಲಾ ಗ್ರಾಪಂ ಸದಸ್ಯರು ಪಿಡಿಒ ಜೊತೆಗೆ ಸೋಮವಾರ ತೆರಳಿದ್ದೆವು. ಅಲ್ಲಿ ಕೆಲವರು ಒತ್ತುವರಿ ಕೂಡ ಮಾಡಿದ್ದಾರೆ. ಆದರೆ ಒತ್ತುವರಿ ಜಾಗದ ವಿಚಾರಕ್ಕೆ ಹೋಗದೇ ಖಾಲಿ ಇರುವ ಜಾಗವನ್ನು ಮಾತ್ರ ಸ್ವಚ್ಛ ಮಾಡಲಾಗಿದೆ ಎಂದು ತಿಳಿಸಿದರು.

ಈ ವೇಳೆ ಒತ್ತುವರಿ ಮಾಡಿಕೊಂಡಿರುವ ಚಂದ್ರಕಲಾ ಎಂಬ ಮಹಿಳೆ ವಿಷ ಕುಡಿದಂತೆ ಮಾಡಿದ್ದಾರೆ. ಅವರನ್ನು ಮೆಗ್ಗಾನ್ ಆಸ್ಪತ್ರೆಗೆ ಸೇರಿಸಲಾಗಿದೆ. ಅದೇ ವೇಳೆ ದಲಿತ ಸಂಘರ್ಷ ಸಮಿತಿಯವರು ಜಿಪಂ ಕಚೇರಿ ಎದುರು ಪ್ರತಿಭಟನೆ ನಡೆಸಿದ್ದಾರೆ. ಅಷ್ಟಕ್ಕೇ ಜಿಪಂ ಸಿಇಒ, ಗ್ರಾಪಂ ಪಿಡಿಒ ಅವರನ್ನು ಅಮಾನತು ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಒಂದೇ ವಾರದಲ್ಲಿ ಎರಡು ಬಾರಿ ಪಿಡಿಒ ಅವರನ್ನು ಅಮಾನತು ಮಾಡಲಾಗಿದೆ. ಪಿಡಿಒ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದರೂ ಅಮಾನತು ಮಾಡಿರುವುದು ಸರಿಯಲ್ಲ. ಕೂಡಲೇ ಜಿಪಂ ಸಿಇಒ ಗ್ರಾಮಕ್ಕೆ ಆಗಮಿಸಿ ಸ್ಥಳ ಪರಿಶೀಲನೆ ನಡೆಸಬೇಕು. ಅಲ್ಲಿಯವರೆಗೂ ಧರಣಿ ಹಿಂಪಡೆಯುವುದಿಲ್ಲ. ಗ್ರಾಪಂ ಕಚೇರಿ ಬಾಗಿಲನ್ನೂ ತೆರೆಯಲು ಬಿಡುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ.

ಗ್ರಾಪಂ ಅಧ್ಯಕ್ಷೆ ಸುಧಾ ಆಂಜನೇಯ, ಉಪಾಧ್ಯಕ್ಷೆ ಶಾರದಮ್ಮ ಹೂವಪ್ಪ, ಸದಸ್ಯರಾದ ನಿರಂಜನ ಗೌಡ, ರಾಜೇಶ್, ಅಶೋಕ, ಶಿವಕುಮಾರ್ ಸೇರಿದಂತೆ ಎಲ್ಲಾ ಸದಸ್ಯರು, ಗ್ರಾಮಸ್ಥರು ಧರಣಿಯಲ್ಲಿ ಪಾಲ್ಗೊಂಡಿದ್ದಾರೆ

ಓಂಕಾರ ಎಸ್. ವಿ. ತಾಳಗುಪ್ಪ….

Related Articles

3 comments

GeorgeZew July 20, 2025 - 12:57 pm

Elevate your look at MenSpire Singapore—the best barber crafting precision styles in a chic, modern space. Expect top-tier service and sharp results every time.

Reply
Cialis online September 18, 2025 - 11:52 am

Köpa receptfritt – Vill du köpa medicin utan recept? Upptäck hur enkelt det kan vara att beställa säkert online, med snabb leverans och anonymitet. Få tillgång till effektiva produkter som kan förbättra din hälsa utan krångel hos läkaren.

Reply
Kevinshags September 19, 2025 - 2:42 am

В этой статье вы найдете познавательную и занимательную информацию, которая поможет вам лучше понять мир вокруг. Мы собрали интересные данные, которые вдохновляют на размышления и побуждают к действиям. Открывайте новую информацию и получайте удовольствие от чтения!
Выяснить больше – https://quick-vyvod-iz-zapoya-1.ru/

Reply

Leave a Comment

Latest news
Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?!