Home ರಾಜ್ಯಪತ್ರಿಕಾ ವಿತರಕರಿಗೆ ಸೇವಾ ಸೌಲಭ್ಯ ದೊರಕಿಸಲು ಪ್ರಾಮಾಣಿಕ ಯತ್ನ : ಡಿ.ಎಸ್.ಅರುಣ್..!!

ಪತ್ರಿಕಾ ವಿತರಕರಿಗೆ ಸೇವಾ ಸೌಲಭ್ಯ ದೊರಕಿಸಲು ಪ್ರಾಮಾಣಿಕ ಯತ್ನ : ಡಿ.ಎಸ್.ಅರುಣ್..!!

by EDITOR NEWS WARRIORS
1 comment

ಶಿವಮೊಗ್ಗ: ಕಠಿಣ ಪರಿಶ್ರಮದಲ್ಲಿ ಕಾರ್ಯನಿರ್ವಹಿಸುವ ಪತ್ರಿಕಾವಿತರಕರಿಗೆ ಸರ್ಕಾರದಿಂದ ಸೇವಾಸೌಲಭ್ಯ ದೊರಕಿಸಲು ತಾವು ಪ್ರಯತ್ನಿಸುವುದಾಗಿ ವಿಧಾನಪರಿಷತ್ ಶಾಸಕ ಡಿ.ಎಸ್.ಅರುಣ್ ತಿಳಿಸಿದರು.
ಅವರು ಕರ್ನಾಟಕ ರಾಜ್ಯ ಪತ್ರಿಕಾವಿತರಕರ ಸಂಘದ ಶಿವಮೊಗ್ಗ ಶಾಖೆ ಮೀಡಿಯಾ ಹೌಸ್‌ನಲ್ಲಿ ಏರ್ಪಡಿಸಿದ್ದ ಸಭೆಯಲ್ಲಿ ವಾರ್ಷಿಕ ಕ್ಯಾಲೆಂಡರ್ ಬಿಡುಗಡೆಗೊಳಿಸಿ ಮಾತನಾಡಿದರು.


ತಾವು ಅನೇಕ ಸಂದರ್ಭಗಳಲ್ಲಿ ಪತ್ರಿಕಾ ವಿತರಕರ ಪ್ರಾಮಾಣಿಕ ಸೇವೆಯನ್ನು ಹತ್ತಿರದಿಂದ ಗಮನಿಸಿದ್ದಾಗಿ ಮತ್ತು ಈ ಸೇವಾ ವೃತ್ತಿಯು ಬಹುವಿಧದ ವ್ಯಕ್ತಿತ್ವ ರೂಪಿಸಿಕೊಳ್ಳಲು ಸಹಾಯಕವಾಗುತ್ತದೆ ಎಂದು ಅವರು ವಿವರಿಸಿದರು.


ಪತ್ರಿಕಾವಿತರಕರ ಕಷ್ಟನಷ್ಟಗಳು , ಸಂಘಟನೆಯ ಅನಿವಾರ್ಯತೆ ಮತ್ತು ಸರ್ಕಾರದಿಂದ ಅಸಂಘಟಿತ ಕಾರ್ಮಿಕರ ಸೌಲಭ್ಯ ದೊರಕಿಸುವ ಕುರಿತು ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಕೆ.ವಿ.ಶಿವಕುಮಾರ್, ರಾಜ್ಯ ಸಮಿತಿ ಸದಸ್ಯ ಎನ್.ರವಿಕುಮಾರ್. ಕರ್ನಾಟಕ ರಾಜ್ಯ ಪತ್ರಿಕಾ ಸಂಪಾದಕರ ಸಂಘದ ಮಾಜಿ ಉಪಾಧ್ಯಕ್ಷ ನ.ರಾ.ವೆಂಕಟೇಶ್. ರಾಷ್ಟ್ರೀಯ ಮಂಡಳಿ ಸದಸ್ಯ ಬಂಡಿಗಡಿ ನಂಜುಂಡಪ್ಪ, ರಾಜ್ಯ ಸಮಿತಿ ವಿಶೇಷ ಆಹ್ವಾನಿತ ಜಿ.ಪದ್ಮನಾಭ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್.ಸುಂದರೇಶ್ ಮಾತನಾಡಿದರು.
ಕರ್ನಾಟಕ ರಾಜ್ಯ ಪತ್ರಿಕಾವಿತರಕರ ಸಂಘದ ಅಧ್ಯಕ್ಷ ಕೆ.ಶಂಭುಲಿಂಗ ಮಾತನಾಡಿ, ಪತ್ರಿಕಾವಿತರಕರ ಯೋಗಕ್ಷೇಮದ ಕುರಿತು ಸಂಘವು ಕೈಗೊಂಡಿರುವ ಕಾರ್ಯಚಟುವಟಿಕೆಗಳ ಕುರಿತು ವಿವರಿಸಿದರು.
ಈ ಸಂದರ್ಭದಲ್ಲಿ ಇತ್ತೀಚೆಗೆ ಸಾಗರಟೌನ್‌ನ ರಸ್ತೆಅಪಘಾತದಲ್ಲಿ ಮಡಿದ ವಿತರಕ ಗುರುಸ್ವಾಮಿ ಕುಟುಂಬಕ್ಕೆ ಸಂಘಟನೆವತಿಯಿಂದ ೨೫ಸಾವಿರ ರೂಪಾಯಿಗಳ ನಗದು ಸಹಾಯವನ್ನು ಪೋಷಕರಿಗೆ ವಿತರಿಸಲಾಯಿತು.
ರಾಜ್ಯ ಪತ್ರಿಕಾ ವಿತರಕರ ಒಕ್ಕೂಟದ ಜಿಲ್ಲಾ ಶಾಖೆ ಅಧ್ಯಕ್ಷ ಎನ್.ಮಾಲತೇಶ್, ಕಾರ್ಯದರ್ಶಿ ಮುಕ್ತಾರ್ ಅಹಮದ್, ಹಾಗೂ ಪದಾಧಿಕಾರಿಗಳಾದ ಪರಮೇಶ್ವರಪ್ಪ, ನಾಗಭೂಷಣ್ ತೀರ್ಥಹಳ್ಳಿ, ವಿನಯ್‌ಕುಮಾರ್ ತೊಗರ್ಸಿ, ಮುಂಜುನಾಥ ಎಸ್.ಪಿ. ಪರಶುರಾಮ್ ಭದ್ರಾವತಿ, ಹರ್ಷ ಎನ್.ಆರ್, ಮತ್ತು ವಿವಿಧ ಜಿಲ್ಲೆಗಳ ಅಧ್ಯಕ್ಷರು ಹಾಗು ಪದಾಧಿಕಾರಿಗಳು ಹಾಜರಿದ್ದರು.

Related Articles

1 comment

RichardBiast June 23, 2025 - 10:19 pm

Этот информационный материал привлекает внимание множеством интересных деталей и необычных ракурсов. Мы предлагаем уникальные взгляды на привычные вещи и рассматриваем вопросы, которые волнуют общество. Будьте в курсе актуальных тем и расширяйте свои знания!
Ознакомиться с деталями – https://vyvod-iz-zapoya-1.ru/

Reply

Leave a Comment

Latest news
Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?!