Home ರಾಜ್ಯNEW YEAR: ಹೊಸ ವರ್ಷದ ಸಂಭ್ರಮ ಆಚರಣೆಗೆ 12 ಟಪ್ ರೋಲ್ಸ್ ಜಾರಿ ಮಾಡಿದ ಶಿವಮೊಗ್ಗ ಜಿಲ್ಲಾ ರಕ್ಷಣಾಧಿಕಾರಿ ಜಿ,ಕೆ ಮಿಥುನ್ ಕುಮಾರ್..!!

NEW YEAR: ಹೊಸ ವರ್ಷದ ಸಂಭ್ರಮ ಆಚರಣೆಗೆ 12 ಟಪ್ ರೋಲ್ಸ್ ಜಾರಿ ಮಾಡಿದ ಶಿವಮೊಗ್ಗ ಜಿಲ್ಲಾ ರಕ್ಷಣಾಧಿಕಾರಿ ಜಿ,ಕೆ ಮಿಥುನ್ ಕುಮಾರ್..!!

by EDITOR NEWS WARRIORS
1 comment


ಶಿವಮೊಗ್ಗ: ಇಂದು ಬೆಳಗ್ಗೆ 11:00 ಗಂಟೆಗೆ ಶಿವಮೊಗ್ಗ ಜಿಲ್ಲಾ ಪೊಲೀಸ್ ಕಛೇರಿಯಲ್ಲಿ ಪೊಲೀಸ್ ರಕ್ಷಣಾಧಿಕಾರಿಗಳಾದ ಜಿಕೆ ಮಿಥುನ್ ಕುಮಾರ್ ಶಿವಮೊಗ್ಗ ರವರು ಮುಂಬರುವ ಹೊಸ ವರ್ಷ ಆಚರಣೆಯ ಸಂಬಂಧ ಹೋಟೆಲ್, ಕ್ಲಬ್ ಮತ್ತು ರೆಸಾರ್ಟ್ ಮಾಲೀಕರು ಹಾಗೂ ವ್ಯವಸ್ಥಾಪಕರ ಸಭೆಯನ್ನು ನಡೆಸಿ, ಈ ಕೆಳಕಂಡ ಸೂಚನೆಗಳನ್ನು ನೀಡಿದ್ದಾರೆ.

1) ಸರ್ಕಾರದ ಆದೇಶದ ಅನ್ವಯ ಹೊಸ ವರ್ಷ ಆಚರಣೆಯನ್ನು ಬೆಳಗಿನ ಜಾವ 01:00 ಗಂಟೆಯ ಒಳಗಾಗಿ ಮುಕ್ತಾಯಗೊಳಿಸುವುದು.

2) ಹೊಸ ವರ್ಷದ ಆಚರಣೆಯಲ್ಲಿ ಭಾಗವಹಿಸುವ ಮಕ್ಕಳು, ವೃದ್ಧರು ಮತ್ತು ಮಹಿಳೆಯರ ಸುರಕ್ಷತೆಯ ಕುರಿತು ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳುವುದು.

3) ಸಂಭ್ರಮಾಚರಣೆಯ ವೇಳೆ ಯಾವುದೇ ರೀತಿಯ ಮಾದಕ ವಸ್ತುಗಳನ್ನು ಬಳಸಬಾರದು.

4) ಮಧ್ಯ ಮಾರಾಟವನ್ನು ರಾತ್ರಿ 11:30 ರ ವರೆಗೆ ಮಾತ್ರ ಮಾಡುವುದು.

5) ಮಧ್ಯಪಾನ ಮಾಡಿ ವಾಹನವನ್ನು ಚಾಲನೆ ಮಾಡದೇ, ಮಧ್ಯಪಾನ ಮಾಡದೇ ಇರುವವರು ಚಾಲನೆ ಮಾಡುವುದು.

6) ನಿಗದಿ ಪಡಿಸಿದ ಶಬ್ದ ಮಿತಿಯನ್ನು ಮೀರಿ ಸೌಂಡ್ ಸಿಸ್ಟಂ ಗಳನ್ನು ಬಳಸುವಂತಿಲ್ಲ.

7) ಸಂಭ್ರಮಾಚರಣೆಗೆ ಬರುವ ಸಾರ್ವಜನಿಕರ ವಾಹನಗಳ ನಿಲುಗಡೆಗೆ ವ್ಯವಸ್ಥಿತವಾಗಿ ಪಾರ್ಕಿಂಗ್ ವ್ಯವಸ್ಥೆ ಮಾಡುವುದು.

8) ಗುಂಪನ್ನು ನಿಯಂತ್ರಿಸುವ ಸಂಬಂಧ ಒಂದಕ್ಕಿಂತ ಹೆಚ್ಚು ಪ್ರವೇಶ ದ್ವಾರಗಳನ್ನು ನಿರ್ಮಿಸುವುದು.

9) ಹೊಸ ವರ್ಷದ ಆಚರಣೆಯಲ್ಲಿ ಭಾಗವಹಿಸುವ ಪ್ರತಿಯೊಬ್ಬ ಸಾರ್ವಜನಿಕರು ಕಡ್ಡಾಯವಾಗಿ ಮಾಸ್ಕ್ ಮತ್ತು ಸ್ಯಾನಿಟೈಸರ್ ಅನ್ನು ಬಳಸುವುದು.

10) 60 ವರ್ಷ ಮೇಲ್ಪಟ್ಟ ವೃದ್ಧರು, ಗರ್ಭಿಣಿ ಮಹಿಳೆಯರು ಮತ್ತು ಮಕ್ಕಳು ಹೊಸ ವರ್ಷದ ಆಚರಣೆಯಲ್ಲಿ ಭಾಗವಹಿಸದೇ ಇರುವುದು ಸೂಕ್ತವಾಗಿರುತ್ತದೆ.

11) ನೋ ಮಾಸ್ಕ್ ನೋ ಎಂಟ್ರಿ ಬೋರ್ಡ್ ಗಳನ್ನು ಸಾರ್ವಜನಿಕರವಾಗಿ ಎದ್ದು ಕಾಣುವ ರೀತಿಯಲ್ಲಿ ಹಾಕುವುದು.

12) ಹೊಸ ವರ್ಷ ಆಚರಣೆಯಲ್ಲಿ ಭಾಗವಹಿಸುವ ಪ್ರತಿಯೊಬ್ಬ ಸಾರ್ವಜನಿಕರಿಗೂ ಕಡ್ಡಾಯವಾಗಿ ಥರ್ಮಲ್ ಸ್ರ್ಕೀನಿಂಗ್ ಗೆ ಒಳಪಡಿಸುವುದು.

ಈ ಸಂದರ್ಭದಲ್ಲಿ ಡಿವೈಎಸ್.ಪಿ ಡಿಸಿಆರ್.ಬಿ ಮತ್ತು ಡಿವೈಎಸ್.ಪಿ ಶಿವಮೊಗ್ಗ ಉಪ ವಿಭಾಗ, ಪೊಲೀಸ್ ನಿರೀಕ್ಷಕರವರು ಹಾಜರಿದ್ದರು.

ರಘುರಾಜ್ ಹೆಚ್.ಕೆ…9449553305…

Related Articles

1 comment

GeorgeZew July 20, 2025 - 7:25 pm

Looking for the best haircut in town? MenSpire delivers tailored precision cuts, expert grooming, and a luxe vibe. Book now for a refined, confidence-boosting transformation.

Reply

Leave a Comment

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...