Home ರಾಜ್ಯTHIRTHALLI: ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮೇಗರವಳ್ಳಿಯಲ್ಲಿ ಅದ್ದೂರಿ ಶಾಲಾ ವಾರ್ಷಿಕೋತ್ಸವ..‌‌!!

THIRTHALLI: ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮೇಗರವಳ್ಳಿಯಲ್ಲಿ ಅದ್ದೂರಿ ಶಾಲಾ ವಾರ್ಷಿಕೋತ್ಸವ..‌‌!!

by EDITOR NEWS WARRIORS
0 comments

ತೀರ್ಥಹಳ್ಳಿ : ಆಗುಂಬೆ ಹೋಬಳಿಯ ಅತ್ಯಂತ ಪ್ರತಿಷ್ಠಿತ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಒಂದಾದ ಮೇಗರವಳ್ಳಿ ಸರ್ಕಾರಿ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವೂ ಎಲ್ಲರ ಸಹಕಾರದಿಂದ ಅತ್ಯುತ್ತಮವಾಗಿ ನೆರವೇರಿದ್ದು ಮೇಗರವಳ್ಳಿಯ ಜನರ ಮತ್ತು ಪೋಷಕರ ಹಿರಿಯ ವಿದ್ಯಾರ್ಥಿಗಳ ಸಹಕಾರದಿಂದ ಜನರ ಮೆಚ್ಚುಗೆ ಪಾತ್ರವಾಗಿದೆ..

ಮುಖ್ಯ ಅಧ್ಯಾಪಕಿ ಪೂರ್ಣಿಮಾ ಮತ್ತು ಅವರ ಶಿಕ್ಷಕರು ತಂಡ ಎಲ್ಲಾ ಮಕ್ಕಳನ್ನು ಅತ್ಯುತ್ತಮ ರೀತಿಯಲ್ಲಿ ನೃತ್ಯ ನಾಟಕ ಹಾಡು ಮಿಮಿಕ್ರಿ ಯಕ್ಷಗಾನ ಹುಲಿ ವೇಷ ಗಳಲ್ಲಿ ಮಕ್ಕಳನ್ನ ಅತ್ಯುತ್ತಮ ರೀತಿಯಲ್ಲಿ ತರಬೇತಿ ನೀಡಿ ಅವರ ಉತ್ಕೃಷ್ಟ ಮಟ್ಟದ ಪ್ರದರ್ಶನಕ್ಕೆ ಕಾರಣರಾಗಿದ್ದು ನಿನ್ನೆಯ ಕಾರ್ಯಕ್ರಮಕ್ಕೆ ಹೆಚ್ಚಿನ ಮೆರಗನ್ನು ನೀಡಿದೆ..

ಇದೇ ಕಾರ್ಯಕ್ರಮದಲ್ಲಿ ಆಗುಂಬೆ ಹೋಬಳಿಯ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ ಪಡೆದ ಪೂರ್ಣಿಮಾ ಅವರನ್ನು ಎಸ್ಡಿಎಂಸಿ ವತಿಯಿಂದಲೂ ಎಸ್‌ಡಿಎಂಸಿ ಅಧ್ಯಕ್ಷರಾದ ಮಹೇಶ್ ಅವರನ್ನು ಶಾಲಾ ವತಿಯಿಂದಲೂ, ಹಾಗೂ ಎಲ್ಲಾ ಶಿಕ್ಷಕಿಯರನ್ನು ಎಸ್ ಡಿ ಎಂ ಸಿ ತಂಡದವರು ಗೌರವಿಸಿ ಅಭಿನಂದಿಸಿದ್ದಾರೆ ‌..

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶ್ರೀಮತಿ ಪ್ರತಿಮಾ ಪುಟ್ಟಪ್ಪನವರು ಸರ್ಕಾರಿ ಶಾಲೆಯ ಕಾರ್ಯಕ್ರಮದ ಆಯೋಜನೆಯನ್ನು ಕುರಿತು ಮತ್ತು ಶಾಲಾ ಸಮಗ್ರ ಪ್ರಗತಿಗೆ ಸರ್ವ ರೀತಿಯ ಸಹಕಾರ ನೀಡುವುದಾಗಿ ಆಶಯ ವ್ಯಕ್ತಪಡಿಸಿದರು…
ಕಾರ್ಯಕ್ರಮದಲ್ಲಿ ಅಧ್ಯಕ್ಷೀಯ ಮಾತನಾಡಿದ ಎಸ್‌ಡಿಎಂಸಿಯ ಅಧ್ಯಕ್ಷರಾದ ಮಹೇಶ್ ಅವರು ಕಾರ್ಯಕ್ರಮಕ್ಕೆ ಸಹಕರಿಸಿದ ಶಾಲಾ ಬಳಗವನ್ನು ಶಾಲೆಯ ಹಿರಿಯ ವಿದ್ಯಾರ್ಥಿಗಳನ್ನು ಪೋಷಕರನ್ನು ಸಾರ್ವಜನಿಕರನ್ನು ಧಾನಿಗಳನ್ನು ಜನಪ್ರತಿನಿಧಿಗಳನ್ನು ವಿಶೇಷವಾಗಿ ಲಲಿತಮ್ಮ ಚಾರಿಟೇಬಲ್ ಟ್ರಸ್ಟ್ ನ ಪ್ರೋತ್ಸಾಹವನ್ನು ಸ್ಮರಿಸಿ ಅಭಿನಂದಿಸಿದರು,

ಕಾರ್ಯಕ್ರಮವು ಮಕ್ಕಳ ಅನೇಕ ಜಾನಪದ,ಚಲನಚಿತ್ರ ಗೀತೆಗಳು ಕಿರು ನಾಟಕಗಳು ಜೊತೆಗೆ ಕೊನೆಯಲ್ಲಿ ಯಕ್ಷಗಾನದ ಪ್ರದರ್ಶನ ಮತ್ತು ಹುಲಿ ವೇಷದ ಪ್ರದರ್ಶನ ನೋಡುಗರ ಕಣ್ಮನ ಸೆಳೆಯಿತು…

ಈ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರಾದ ಅಜಿತ್ ಅಣ್ಣುವಳ್ಳಿ,ದೇವೇಂದ್ರ ನವೀನ್ ತೋಟದ ಮನೆ, ತಾಲೂಕು ಒಕ್ಕಲಿಗರ ಸಂಘದ ಅಧ್ಯಕ್ಷರಾದ ಬಾಳೆಹಳ್ಳಿ ಪ್ರಭಾಕರ್,ರಾಜ್ಯ ಕರವೇ ಸಂಘಟಕರಾದ ಪಟೇಲ್ ವೆಂಕಟೇಶ್ ಹೆಗಡೆ,ಲಲಿತಮ್ಮ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷರಾದ ವಿಜೇತ್ ಶೆಟ್ಟಿ ದಾನಿಗಳಾದ ಪ್ರಜ್ವಲ್ ಕೋಳಿಗೆ ಎಸ್ಡಿಎಂಸಿ ಉಪಾಧ್ಯಕ್ಷರಾದ ರುಬಿನಾ ಟಿ ಎ, ಮೇಗರವಳ್ಳಿ ಪ್ರೌಢಶಾಲೆಯ ಮುಖ್ಯ ಶಿಕ್ಷಕರಾದ ದಿವಾಕರ್ ಎಂ ಎಸ್, ಗುಡ್ಡೇಕೇರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕರಾದ ಮಂಜು ಬಾಬು ಹೆಚ್ ಪಿ, ನಾಲೂರು ಶಾಲೆಯ ಜಯಂತಿ, ಸಿಆರ್ಪಿ ನಾಗಾರಾಜ್ ಹಾಜರಿದ್ದರು.

ಕಾರ್ಯಕ್ರಮದ ನಿರೂಪಣೆಯನ್ನು ಅನ್ನಪೂರ್ಣ ಮೇಡಂ ಸ್ವಾಗತವನ್ನು ಪೂರ್ಣಿಮಾ ಪಟಗಾರ ಮೇಡಂ ಪ್ರಾಸ್ತಾವಿಕವಾಗಿ ಮುಖ್ಯ ಶಿಕ್ಷಕಿ ಪೂರ್ಣಿಮಾ ಮೇಡಂ ವಂದನಾರ್ಪಣೆಯನ್ನು ಶಿಕ್ಷಕಿ ಸವಿತಾ ರವರು ನೆರವೇರಿಸಿದರು..‌‌

ರಘುರಾಜ್ ಹೆಚ್.ಕೆ…9449553305…

Related Articles

Leave a Comment

Latest news
ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...