Home ರಾಜ್ಯNEWS WARRIORS EXCLUSIVE NEWS : ಶಿವಮೊಗ್ಗ ಮಹಾನಗರ ಪಾಲಿಕೆಯ ಸದಸ್ಯರಿಗೆ ವೈದ್ಯಕೀಯ ವೆಚ್ಚಕ್ಕೆ ಇಲ್ಲ ಅನುಮತಿ..!!ಆಮ್ ಆದ್ಮಿ ಪಾರ್ಟಿಯಿಂದ ಜನ ಜಾಗೃತಿ..!!

NEWS WARRIORS EXCLUSIVE NEWS : ಶಿವಮೊಗ್ಗ ಮಹಾನಗರ ಪಾಲಿಕೆಯ ಸದಸ್ಯರಿಗೆ ವೈದ್ಯಕೀಯ ವೆಚ್ಚಕ್ಕೆ ಇಲ್ಲ ಅನುಮತಿ..!!ಆಮ್ ಆದ್ಮಿ ಪಾರ್ಟಿಯಿಂದ ಜನ ಜಾಗೃತಿ..!!

by EDITOR NEWS WARRIORS
1 comment

ಶಿವಮೊಗ್ಗ: ಮಹಾನಗರ ಪಾಲಿಕೆಯಲ್ಲಿ ಕಳೆದ ಹತ್ತಾರು ವರ್ಷಗಳಿಂದ ಪಾಲಿಕೆಯ ಸದಸ್ಯರುಗಳು ತಾವೇ ಸರ್ವಾನುಮತದಿಂದ ತೀರ್ಮಾನ ತೆಗೆದುಕೊಂಡು ಆಡಿಟ್ ನಲ್ಲಿ ಅಬ್ಜೆಕ್ಷನ್ ಬಂದರೆ ಹಣವನ್ನು ಪುನಃ ನೀಡುವುದಾಗಿ ಒಪ್ಪಿಕೊಂಡು ತಮ್ಮ ವೈಯಕ್ತಿಕ ವೈದ್ಯಕೀಯ ಚಿಕಿತ್ಸಾ ವೆಚ್ಚವನ್ನು ಪಾವತಿಸಿಕೊಂಡಿದ್ದಾರೆ.

ಆದರೆ ಮುನ್ಸಿಪಾಲ್ ಆಕ್ಟ್ನನಲ್ಲಿ ಪಾಲಿಕೆಯ ಸದಸ್ಯರುಗಳಿಗೆ ತಮ್ಮ ವೈದ್ಯಕೀಯ ಚಿಕಿತ್ಸೆ ವೆಚ್ಚವನ್ನು ಬರಿಸಿಕೊಳ್ಳಬೇಕು ಎನ್ನುವ ಯಾವುದೇ ಆದೇಶವಿಲ್ಲ ಹಾಗೆ ಸರ್ಕಾರದಿಂದ ಕೂಡ ಯಾವುದೇ ಆದೇಶ ಇರುವುದಿಲ್ಲ. ಆದರೂ ಇವರು ಸಾರ್ವಜನಿಕ ತೆರಿಗೆ ಹಣದಲ್ಲಿ ಈ ತರಹ ತಮ್ಮ ವೈಯಕ್ತಿಕ ವೈದ್ಯಕೀಯ ಚಿಕಿತ್ಸೆ ವೆಚ್ಚವನ್ನು ಪಾವತಿಸಿಕೊಳ್ಳುತ್ತಿರುವುದು ಕಾನೂನು ಬಾಹಿರ ಕೃತ್ಯವಾಗಿದ್ದು ಇದು ಖಂಡನೀಯವಾಗಿದೆ ಎಂದು ಸಾರ್ವಜನಿಕರು ಪ್ರಶ್ನೆ ಮಾಡುತ್ತಿದ್ದಾರೆ…

ಇದರ ಬಗ್ಗೆ ನ್ಯೂಸ್ ವಾರಿಯರ್ಸ್ ಪತ್ರಿಕೆ ತನಿಖಾ ವರದಿಯ ರೂಪದಲ್ಲಿ ವರದಿಯನ್ನು ಪ್ರಕಟಿಸಿತ್ತು ನ್ಯೂಸ್ ವಾರಿಯರ್ಸ್ ಪತ್ರಿಕೆ ಜೊತೆ ಮಾತನಾಡಿದ ಮಹಾನಗರ ಪಾಲಿಕೆಯ ಆಯುಕ್ತರಾದ ಮಾಯಣ್ಣ ಗೌಡ ಅವರು ಇದು ಕಾನೂನು ಬಾಹಿರ ಕೃತ್ಯವಾಗಿದ್ದು ಸರ್ಕಾರದಿಂದ ಯಾವುದೇ ಆದೇಶವಿಲ್ಲ ಹಾಗೂ ಮುನ್ಸಿಪಾಲ್ ಆಕ್ಟ್ನನಲ್ಲಿ ಇದಕ್ಕೆ ಯಾವುದೇ ರೀತಿಯ ರೆಗ್ಯುಲೇಷನ್ ಪಾಸ್ ಆಗಿಲ್ಲ ಆದ್ದರಿಂದ ನಾನು ಸರ್ಕಾರಕ್ಕೆ ಇದರ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ವರದಿ ಸಲ್ಲಿಸುತ್ತೇನೆ ಎಂದು ತಿಳಿಸಿದರು….

ಪತ್ರಿಕೆ ವರದಿಯ ನಂತರ ಆಮ್ ಆದ್ಮಿ ಪಾರ್ಟಿ ಇಂದು ಇದೆ ವಿಷಯವಾಗಿ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಈ ವಿಷಯವನ್ನು ಗಂಭೀರವಾಗಿ ತೆಗೆದುಕೊಳ್ಳಬೇಕು ಕೂಡಲೇ ಇದು ಇಲ್ಲಿಗೆ ನಿಲ್ಲಬೇಕು. ಹಾಗೂ ಇಲ್ಲಿಯವರೆಗೆ ಇವರು ಬರಿಸಿಕೊಂಡಿರುವ ಚಿಕಿತ್ಸೆ ವೆಚ್ಚವನ್ನು ಮರುಪಾವತಿಸಿಕೊಳ್ಳಬೇಕು ಹಾಗೂ ಅಂತ ಸದಸ್ಯರ ವಿರುದ್ಧ ಮುಖದ್ದಮೆ ದಾಖಲಿಸಿಕೊಂಡು ತನಿಖೆ ಕೈಗೊತ್ತಿಕೊಳ್ಳಬೇಕು ಎಂದು ಆಗ್ರಹಿಸಿ ಜನಜಾಗೃತಿ ಮಾಡುವುದರ ಮೂಲಕ ಪ್ರತಿಭಟನೆ ನಡೆಸಿದರು. ಒಂದು ವೇಳೆ ಇದು ಆಗದಿದ್ದರೆ ಮಹಾನಗರ ಪಾಲಿಕೆಯಲ್ಲಿ ತೀವ್ರ ಹೋರಾಟ ಮಾಡುವುದಾಗಿ ಎಚ್ಚರಿಕೆಯನ್ನು ನೀಡಿದ್ದಾರೆ….

ರಘುರಾಜ್ ಹೆಚ್.ಕೆ..9449553305…

Related Articles

1 comment

rarefub June 25, 2025 - 12:26 pm

Хочу поделиться полезной информацией. Обнаружил отличный ресурс на полезный портал. Нашел ответы на многие свои вопросы.

Про каудексные растения, их специфику и уход можно почитать в этом разделе. Очень необычные и красивые растения.
Ссылка ниже:

[url=https://raregreen.ru/category/sukulenti-i-kaktusi/]https://raregreen.ru/category/sukulenti-i-kaktusi/[/url]

Всем удачи в выращивании!

Reply

Leave a Comment

Latest news
ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್...! ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ...?! ಡಾ. ಮೈತ್ರಿ... Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ...