Home ರಾಜ್ಯಕೋಡಿಗೆಹಳ್ಳಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ 75ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ!!

ಕೋಡಿಗೆಹಳ್ಳಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ 75ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ!!

by EDITOR NEWS WARRIORS
0 comments

ಬೆಂಗಳೂರು ಆಗಸ್ಟ್‌ 15: ಬೆಂಗಳೂರು ಪೂರ್ವ ತಾಲ್ಲೂಕು ಬಿಬಿಎಂಪಿ ಮಹದೇವಪುರ ವಲಯ ವ್ಯಾಪ್ತಿಯ ಹೂಡಿ ವಾರ್ಡ್ ನ ಕೊಡಿಗೇಹಳ್ಳಿಯಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ 75 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.

ಸರಕಾರಿ ಪ್ರಾಥಮಿಕ ಶಾಲೆಯ ಶಾಲಾಭಿವೃದ್ದಿ ಹಾಗೂ ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಶ್ರೀ ಹೆಚ್‌ ವೆಂಕಟೇಶ್‌ ಅವರು ಸತತ 84 ನೇ ಬಾರಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ಕೋವಿಡ್‌ ನಿಂದಾಗಿ ಗ್ರಾಮಾಂತರ ಪ್ರದೇಶಗಳಲ್ಲಿರುವ ಸರಕಾರಿ ಶಾಲೆಗಳು ಮುಚ್ಚಿವೆ. ಇದರಿಂದ ಬಡ ಮಕ್ಕಳು ಶಾಲೆಯಿಲ್ಲದೆ ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ. ಅಲ್ಲದೆ, ಬಹುತೇಕ ಮಕ್ಕಳು ಬಾಲ್ಯ ಕಾರ್ಮಿಕರಾಗಿ ಹಾಗೂ ಅಪ್ರಾಪ್ತ ವಯಸ್ಸಿನ ಹೆಣ್ಣು ಮಕ್ಕಳಿಗೆ ಬಾಲ್ಯವಿವಾಹಗಳು ಹೆಚ್ಚಾಗುತ್ತಿರುವುದು ಬಹಳ ಆತಂಕಕಾರಿ ವಿಷಯ. ಈ ಹಿನ್ನಲೆಯಲ್ಲಿ ರಾಜ್ಯ ಸರಕಾರ 2 ವರ್ಷಗಳ ನಂತರವಾದರೂ ಸ್ಪಷ್ಟ ನಿಲುವನ್ನು ತಗೆದುಕೊಳ್ಳುವ ಮೂಲಕ ಮಕ್ಕಳ ಶಿಕ್ಷಣಕ್ಕೆ ಅನುಕೂಲವಾಗುವಂತಹ ಕ್ರಮಗಳನ್ನು ತಗೆದುಕೊಳ್ಳಬೇಕು ಎಂದು ಹೇಳಿದರು.

ಈ ಕಾರ್ಯಕ್ರಮದಲ್ಲಿ ಶಾಲಾ ಮುಖ್ಯ ಶಿಕ್ಷಕಿ ವಿಮಲಾ ಬಾಯಿ ಕೊಡಿಗೇಹಳ್ಳಿ ಹಾಗೂ ಬಡಾವಣೆಗಳ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳಾದ ವರದರಾಜು, ಪ್ರತಾಪ್ ಸಿಂಗ್, ಮಹಬೂಬ್ ಪಾಷಾ, ಪ್ರಶಾಂತ್ ಕುಮಾರ್ ಹಾಗೂ ಎಸ್ ಡಿಎಂಸಿ ಸದಸ್ಯರು ಮತ್ತು ವಕೀಲರಾದ ಪ್ರಭಾಕರ್ ಮತ್ತು ರಾಜ್ಯ ಯುವ ಕಾಂಗ್ರೆಸ್ ಮುಖಂಡರಾದ ವಿ ವಿವೇಕ್ ರವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ವರದಿ …ರಘುರಾಜ್ ಹೆಚ್. ಕೆ…

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ…9449553305/7892830899…

Related Articles

Leave a Comment

Latest news
ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್...! ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ...?! ಡಾ. ಮೈತ್ರಿ... Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ...