
ಪ್ರಥಮ ಹಾಗೂ ದ್ವಿತೀಯ ಪಿಯುಸಿ ಕಾಲೇಜು ಆರಂಭಿಸುವ ಕುರಿತು ಸರ್ಕಾರದಿಂದ ಗೈಡ್ಲೈನ್ಸ್ ಬಿಡುಗಡೆ ಆಗಿದೆ. ಶೇಕಡಾ 2 ಕ್ಕಿಂತ ಕಡಿಮೆ ಕೊರೊನಾ ಪಾಸಿಟಿವಿಟಿ ಇರುವ ಜಿಲ್ಲೆಗಳಲ್ಲಿ ಕಾಲೇಜು ತೆರೆಯಲು ಸೂಚಿಸಲಾಗಿದೆ. ಏಕಕಾಲದಲ್ಲಿ ಪ್ರಥಮ, ದ್ವಿತೀಯ ಪಿಯು ತರಗತಿ ನಡೆಸುವುದು ಎಂದು ಹೇಳಲಾಗಿದೆ. ವಾರದ ಮೊದಲ 3ದಿನ ಶೇಕಡಾ 50 ರಷ್ಟು ವಿದ್ಯಾರ್ಥಿಗಳಿಗೆ ಕ್ಲಾಸ್ ಮಾಡಬೇಕು. ಶೇಕಡಾ 50 ರಷ್ಟು ವಿದ್ಯಾರ್ಥಿಗಳು ಭೌತಿಕ ತರಗತಿಗಳಿಗೆ ಹಾಜರು ಆಗಬೇಕು. ಉಳಿದ ಶೇಕಡಾ 50 ರಷ್ಟು ವಿದ್ಯಾರ್ಥಿಗಳಿಗೆ ಮನೆಯಲ್ಲೇ ಆನ್ಲೈನ್ ತರಗತಿ ನಡೆಸುವುದು. ಗುರುವಾರ, ಶುಕ್ರವಾರ, ಶನಿವಾರ ಉಳಿದ ಮಕ್ಕಳಿಗೆ ಕ್ಲಾಸ್ ನಡೆಸುವ ಬಗ್ಗೆ ಸೂಚನೆ ಕೊಡಲಾಗಿದೆ.
ಆಗಸ್ಟ್ 23 ರಿಂದ ಪಿಯು ಕಾಲೇಜು ತರಗತಿಗಳು ಆರಂಭವಾಗಲಿದೆ. ಪ್ರಥಮ, ದ್ವಿತೀಯ ಪಿಯುಸಿ ತರಗತಿ ಏಕಕಾಲಕ್ಕೆ ಆರಂಭ ಆಗಲಿದೆ. ಪ್ರಥಮ, ದ್ವಿತೀಯ ಪಿಯುಸಿ ಆರಂಭಕ್ಕೆ ಮಾರ್ಗಸೂಚಿ ಪ್ರಕಟ ಆಗಿದೆ. ಕಾಲೇಜು ಆರಂಭಿಸುವ ಕುರಿತು ಸರ್ಕಾರದಿಂದ ಗೈಡ್ಲೈನ್ಸ್ ನೀಡಲಾಗಿದೆ. ಅದರಂತೆ, ಶೇಕಡಾ 2 ಕ್ಕಿಂತ ಕಡಿಮೆ ಪಾಸಿಟಿವಿಟಿ ಇರುವ ಜಿಲ್ಲೆಗಳಲ್ಲಿ ಕಾಲೇಜು ಓಪನ್ ಆಗಲಿದೆ. ಏಕಕಾಲದಲ್ಲಿ ಪ್ರಥಮ, ದ್ವಿತೀಯ ಪಿಯುಸಿ ತರಗತಿ ನಡೆಸುವುದು ಎಂದು ಹೇಳಲಾಗಿದೆ. ವಾರದ ಮೊದಲ 3ದಿನ ಶೇಕಡಾ 50 ರಷ್ಟು ವಿದ್ಯಾರ್ಥಿಗಳಿಗೆ ಮತ್ತು ನಂತರ ಶೇಕಡಾ 50 ರಷ್ಟು ವಿದ್ಯಾರ್ಥಿಗಳು ಭೌತಿಕ ತರಗತಿಗಳಿಗೆ ಹಾಜರು ಆಗಬಹುದು.
ಕಾಲೇಜು ಆರಂಭಕ್ಕೆ ಮಾರ್ಗಸೂಚಿಯ ಪ್ರಮುಖ ಅಂಶಗಳು!!
1)ವಿದ್ಯಾರ್ಥಿಗಳ ಸಂಖ್ಯೆ 100 ಕ್ಕಿಂತ ಕಡಿಮೆ ಇರಬೇಕು
ವಿಶಾಲ ಕೊಠಡಿಗಳಿದ್ದರೆ ವಾರದ ಎಲ್ಲಾ ದಿನ ಭೌತಿಕ ತರಗತಿ ನಡೆಸಬಹುದು.
2)ಕಾಲೇಜು ಆವರಣದಲ್ಲಿ ದೈಹಿಕ ಅಂತರ ಕಡ್ಡಾಯವಾಗಿರುತ್ತೆ
ಪ್ರಿನ್ಸಿಪಾಲ್, ಸಿಬ್ಬಂದಿ ಕಡ್ಡಾಯವಾಗಿ ಲಸಿಕೆ ಪಡೆದಿರಬೇಕು.
3)ವಿದ್ಯಾರ್ಥಿಗಳು ಕಾಲೇಜಿಗೆ ಬರಲು ಪೋಷಕರ ಒಪ್ಪಿಗೆ ಬೇಕು
ವಿದ್ಯಾರ್ಥಿಗಳಿಗೆ ಕೊವಿಡ್-19 ನೆಗೆಟಿವ್ ವರದಿ ಕಡ್ಡಾಯ.
4)ಉಪನ್ಯಾಸಕರು ಹಾಗೂ ಪ್ರಾಂಶುಪಾಲರು ವಿದ್ಯಾರ್ಥಿಗಳಿಂದ ಕೊವಿಡ್ ನಿಯಮಗಳ ಉಲ್ಲಂಘನೆಯಾಗದಂತೆ ಗಮನಿಸಬೇಕು.
5)ಮಾಸ್ಕ್ ಹಾಗೂ ಸ್ಯಾನಿಟೈಸರ್ ಬಳಕೆ ಕಡ್ಡಾಯ.
6)ಕೆಮ್ಮುವಾಗ, ಸೀನುವಾಗ ಕರವಸ್ತ್ರ ಅಡ್ಡ ಹಿಡಿಯಬೇಕು,
ಎಲ್ಲೆಂದರಲ್ಲಿ ಉಗುಳಬಾರದು.
7)ಕಾಲೇಜು ಆರಂಭಕ್ಕೆ ಮುನ್ನ ಇಡೀ ಆವರಣ ಹಾಗೂ ಕೊಠಡಿಗಳನ್ನ ಸ್ಯಾನಿಟೈಸ್ ಮಾಡಬೇಕು.
8) ಕೋವಿಡ್ ಗೆ ಬಳಸಿದ ಕಟ್ಟಡಗಳನ್ನ ಎರೆಡೆರಡು ಬಾರಿ ಸ್ಯಾನಿಟೈಸ್ ಮಾಡಬೇಕು.
9)ಸಾಮೂಹಿಕ ಪ್ರಾರ್ಥನೆ, ಕ್ರೀಡೆ ಎಲ್ಲಾ ಚಟುವಟಿಕೆಗಳಿಗೆ ಕೋವಿಡ್ ನಿಯಮ ಕಡ್ಡಾಯ.
10)ಪ್ರವೇಶ ಧ್ವಾರದಲ್ಲಿ ಥರ್ಮಲ್ ಸ್ಕ್ಯಾನರ್ ಹಾಗೂ ಸ್ಯಾನಿಟೈಸರ್ ಕಡ್ಡಾಯವಾಗಿ ಇರಬೇಕು.
ಮೇಲೆ ವಿವರಿಸಿದ ಎಲ್ಲಾ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಮಾರ್ಗಸೂಚಿಯಲ್ಲಿ ಪ್ರಕಟ ಮಾಡಲಾಗಿದೆ…
ವರದಿ… ರಘುರಾಜ್ ಹೆಚ್. ಕೆ..
ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ…9449553305/7892830899…


1 comment
В этой информационной статье вы найдете интересное содержание, которое поможет вам расширить свои знания. Мы предлагаем увлекательный подход и уникальные взгляды на обсуждаемые темы, побуждая пользователей к активному мышлению и критическому анализу!
Получить больше информации – https://quick-vyvod-iz-zapoya-1.ru/