Home ರಾಜ್ಯUnion Home Minister Amit Shah Road Show: ನಾಳೆ ಅಮಿತ್ ಶಾ ಶಿವಮೊಗ್ಗದಲ್ಲಿ ರೋಡ್ ಶೋ ಸಂಚಾರಿಗಳಿಗೆ ಬದಲಿ ಮಾರ್ಗ..!!

Union Home Minister Amit Shah Road Show: ನಾಳೆ ಅಮಿತ್ ಶಾ ಶಿವಮೊಗ್ಗದಲ್ಲಿ ರೋಡ್ ಶೋ ಸಂಚಾರಿಗಳಿಗೆ ಬದಲಿ ಮಾರ್ಗ..!!

by EDITOR NEWS WARRIORS
0 comments
       ಶಿವಮೊಗ್ಗ : ಕೇಂದ್ರ ಗೃಹ ಸಚಿವ ಅಮಿತ್ ಶಾ ನಾಳೆ  ಜಿಲ್ಲೆಗೆ ಭೇಟಿ ನೀಡಿ, ಶಿವಮೊಗ್ಗ ನಗರದಲ್ಲಿ ರೋಡ್ ಶೋ ನೆಡಸಲಿದ್ದು, ರೋಡ್ ಶೋ ಅನ್ನು ಶಿವಪ್ಪ ನಾಯಕ ವೃತ್ತದಿಂದ ಪ್ರಾರಂಭಿಸಿ, ಅಮೀರ್ ಅಹಮದ್ ವೃತ್ತ, ನೆಹರು ರಸ್ತೆ, ಗೋಪಿ ವೃತ್ತ, ದುರ್ಗಿ ಗುಡಿ ಮುಖ್ಯ ರಸ್ತೆ, ಜೈಲ್ ವೃತ್ತ, ಜೈಲ್ ರಸ್ತೆ ಮುಖಾಂತರ ಬಂದು ಲಕ್ಷ್ಮೀ ಟಾಕೀಸ್ ವೃತ್ತದಲ್ಲಿ ಮುಕ್ತಾಯ ಮಾಡಲಿದ್ದು. 

ಈ ಹಿನ್ನೆಲೆಯಲ್ಲಿ ನಾಳೆ ಮಧ್ಯಾಹ್ನ 03:00 ರಿಂದ ಸಂಜೆ 07:00 ಗಂಟೆಯವರೆಗೆ  ನಗರದ ಬಿಹೆಚ್ ರಸ್ತೆಯ ಕರ್ನಾಟಕ ಸಂಘ, ಶಿವಪ್ಪ ನಾಯಕ ವೃತ್ತ, ಅಮೀರ್ ಅಹಮ್ಮದ್ ವೃತ್ತದ ಗೋಪಿ ವೃತ್ತ, ಜೈಲ್ ವೃತ್ತ, ಲಕ್ಷ್ಮೀ ಟಾಕೀಸ್ ವರೆಗೆ ಶೂನ್ಯ ಸಂಚಾರ ಮಾರ್ಗವಾಗಿರುತ್ತದೆ.

ಸದರಿ ರಸ್ತೆಗಳಲ್ಲಿ ಯಾವುದೇ ವಾಹನಗಳ ನಿಲುಗಡೆ (ಪಾರ್ಕಿಂಗ್) ಗೆ ಅವಕಾಶವಿರುವುದಿಲ್ಲ. ಸುಗಮ ಸಂಚಾರದ ದೃಷ್ಠಿಯಿಂದ ಸಾರ್ವಜನಿಕರು ಸದರಿ  ಮಾರ್ಗಗಳನ್ನು ಹೊರತು ಪಡಿಸಿ, ಬದಲೀ ಮಾರ್ಗಗಳನ್ನು ಕಲ್ಪಿಸಲಾಗಿದೆ. 

       ರೋಡ್ ಶೋ ನಲ್ಲಿ ಭಾಗವಹಿಸುವ ಸಾರ್ವಜನಿಕರಿಗೆ ಫ್ರೀಡಂ ಪಾರ್ಕ್ ಮೈದಾನ, ಎನ್ಇಎಸ್ ಮೈದಾನ ಮತ್ತು ಸೈನ್ಸ್ ಕಾಲೇಜ್ ಮೈದಾನದಲ್ಲಿ ವಾಹನಗಳ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದ್ದು, ಸಾರ್ವಜನಿಕರು ತಮ್ಮ ವಾಹನಗಳನ್ನು ಸದರಿ ಸ್ಥಳಗಳಲ್ಲಿ  ಪಾರ್ಕಿಂಗ್‌ ಮಾಡುವಂತೆ ಶಿವಮೊಗ್ಗ ಪೊಲೀಸ್ ಇಲಾಖೆ ಪತ್ರಿಕಾ ಪ್ರಕಟಣೆ ಹೊರಡಿಸಿದೆ.

ರಘುರಾಜ್ ಹೆಚ್.ಕೆ...9449553305...

Related Articles

Latest news
ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್...! ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ...?! ಡಾ. ಮೈತ್ರಿ... Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ...