Home ರಾಜ್ಯBig breaking news: ನಾಳೆ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಸಾಧ್ಯತೆ ‌‌..?! ಡಾ/ ರಾಜ್ ಕುಮಾರ್ ಕುಟುಂಬದ ಕುಡಿ ರಾಜಕೀಯ ಅಂಗಳಕ್ಕೆ ಎಂಟ್ರಿ..!!

Big breaking news: ನಾಳೆ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಸಾಧ್ಯತೆ ‌‌..?! ಡಾ/ ರಾಜ್ ಕುಮಾರ್ ಕುಟುಂಬದ ಕುಡಿ ರಾಜಕೀಯ ಅಂಗಳಕ್ಕೆ ಎಂಟ್ರಿ..!!

by EDITOR NEWS WARRIORS
0 comments

ಶಿವಮೊಗ್ಗ: ನಟ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಧಿಕೃತವಾಗಿ ನಾಳೆ ಕಾಂಗ್ರೆಸ್ ಪಕ್ಷಕ್ಕೆ ರಾಹುಲ್ ಗಾಂಧಿ ಸಮ್ಮುಖದಲ್ಲಿ ತೀರ್ಥಹಳ್ಳಿಯಲ್ಲಿ ನಡೆಯುವ ಸಮಾವೇಶದಲ್ಲಿ ಸೇರ್ಪಡೆಯಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ರಾಹುಲ್ ಗಾಂಧಿ ನಾಳೆ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಕಿಮ್ಮನೆ ರತ್ನಾಕರ್ ಅವರ ಪರ ಪ್ರಚಾರ ಮಾಡಲು ತೀರ್ಥಹಳ್ಳಿಗೆ ತೆರಳುತ್ತಿದ್ದು ಈ ಸಮಯದಲ್ಲಿ ಈಗಾಗಲೇ ಕಾಂಗ್ರೆಸ್ ಅಭ್ಯರ್ಥಿಗಳ ಪರ ಪ್ರಚಾರದಲ್ಲಿ ತೊಡಗಿರುವ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ರಾಹುಲ್ ಗಾಂಧಿ ಸಮ್ಮುಖದಲ್ಲಿ ಮಲೆನಾಡಿನ ಹೆಬ್ಬಾಗಿಲು ತೀರ್ಥಹಳ್ಳಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ಇತ್ತೀಚಿಗೆ ಪತ್ನಿ ಗೀತಾ ಶಿವರಾಜಕುಮಾರ್ ಜೆಡಿಎಸ್ ಗೆ ರಾಜೀನಾಮೆ ನೀಡಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡು ತಮ್ಮ ಮಧು ಬಂಗಾರಪ್ಪ ಪರವಾಗಿ ಪ್ರಚಾರಕ್ಕೆ ಇಳಿದಿದ್ದರು ಈಗ ಪತ್ನಿ ಜೊತೆಗೆ ಪತಿ ಶಿವರಾಜ್ ಕುಮಾರ್ ಕೂಡ ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆ ಆಗುತ್ತಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಕಳೆದ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಮಧು ಬಂಗಾರಪ್ಪಗೆ ಹಾಗೂ ಪತ್ನಿ ಗೀತಾ ಶಿವರಾಜ್ ಕುಮಾರ್ ಗೆ ಬೆಂಬಲ ನೀಡಿ ಪ್ರಚಾರ ಕಾರ್ಯದಲ್ಲಿ ತೊಡಗಿದ್ದ ಶಿವರಾಜ್ ಕುಮಾರ್ ಇಲ್ಲಿಯವರೆಗೂ ಯಾವುದೇ ಪಕ್ಷಕ್ಕೆ ಸೇರ್ಪಡೆಗೊಂಡಿರಲಿಲ್ಲ ಆದರೆ ಈಗ ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಗೊಳ್ಳುತ್ತಿರುವುದು ಕನ್ನಡದ ಕಣ್ಮಣಿ ವರನಟ ಡಾಕ್ಟರ್ ರಾಜಕುಮಾರ್ ಕುಟುಂಬದಲ್ಲಿ ಇಲ್ಲಿಯವರೆಗೂ ಅವರ ಪುತ್ರರು ಯಾರು ಕೂಡ ಯಾವುದೇ ಪಕ್ಷಕ್ಕೆ ಪಕ್ಷಕ್ಕೆ ಸೇರ್ಪಡೆಗೊಂಡಿರಲಿಲ್ಲ.

ಆದರೆ ಈಗ ಶಿವರಾಜ್ ಕುಮಾರ್ ಸೇರ್ಪಡೆ ಕಾಂಗ್ರೆಸ್ ಪಕ್ಷಕ್ಕೆ ಚುನಾವಣೆ ಸಮೀಪ ಇರುವಾಗ ಹೊಸ ಸಂಚಲನ ಉಂಟು ಮಾಡುತ್ತಿದೆ.ಡಾ// ರಾಜಕುಮಾರ್ ಕುಟುಂಬದ ಕುಡಿಯೊಂದು ರಾಷ್ಟ್ರೀಯ ಪಕ್ಷಕ್ಕೆ ಸೇರ್ಪಡೆ ಗೊಳ್ಳುತ್ತಿರುವುದು ಮತ್ತೊಂದು ಹೊಸ ಇತಿಹಾಸಕ್ಕೆ ಮುನ್ನುಡಿ ಬರೆದ ಹಾಗೆ ಆಗಿದೆ ಎನ್ನಬಹುದು…

ರಘುರಾಜ್ ಹೆಚ್.ಕೆ..9449553305…

Related Articles

Latest news
Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ... ಸರ್ಕಾರದಿಂದ ಬಂದಿರುವ ಕೋಟಿ ಕೋಟಿ ಹಣವನ್ನು ಲೂಟಿ ಮಾಡಲು ಇಳಿದಿರುವ ಪಾಲಿಕೆಯ ಭ್ರಷ್ಟ ಅಧಿಕಾರಿಗಳು..! ಸರ್ಕಾರದಿಂದ ಬಂದಿರುವ ಕೋಟಿ ಕೋಟಿ ಹಣವನ್ನು ಲೂಟಿ ಮಾಡಲು ಇಳಿದಿರುವ ಪಾಲಿಕೆಯ ಭ್ರಷ್ಟ ಅಧಿಕಾರಿಗಳು..! ಅಮೃತ ಯೋಜನೆಯಡಿ ಕೈಗೊಂಡ ರಸ್ತೆ, ಚರಂಡಿ,ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಿ: ಬಿ.ಬಿ.ಕಾವೇರಿ ..!